Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಮಾರ್ಚ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.11 NEWS DESK  : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಇತ್ತೀಚೆಗೆ ಹೊರಡಿಸಿರುವ ಸರ್ಕಾರದ ಅಧಿಸೂಚನೆ ಹಿನ್ನೆಲೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25 ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕು/ಬರೆಸಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಗಡಿ ಪ್ರದೇಶಗಳು, ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ 5 ಸಾವಿರ, ಎರಡನೇ ಹಂತದಲ್ಲಿ 10 ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ ಪರವಾನಿಗೆಯನ್ನು ರದ್ದು ಪಡಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ನಾಮಫಲಕ ಬರೆಸಲು/ ಪ್ರದರ್ಶಿಸಲು 7 ದಿನಗಳ ಕಾಲಾವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಸಂಬಂಧಿಸಿದಂತೆ ಜಿ.ಪಂ., ತಾ.ಪಂ. ಮತ್ತು ಗ್ರಾ.ಪಂ. ಮಟ್ಟದಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.
ಗ್ಯಾರಂಟಿ ಸಮಾವೇಶ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳ ಸಂಬಂಧ ‘ಗ್ಯಾರಂಟಿ ಸಮಾವೇಶ’ವು ಮಾರ್ಚ್, 14 ರಂದು ಮಡಿಕೇರಿ ನಗರದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ ಅವರು ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳ ಸಮಾವೇಶವು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖಾ ಗಣಪತಿ, ಆಹಾರ ಇಲಾಖೆ ಶಿರಸ್ತೆದಾರರಾದ ವೀಣಾ, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ಮೆಹಬೂಬ್ ಅಲಿ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆಯ ಮೀನುಪೇಟೆಯಲ್ಲಿರುವ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು…

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.