ಮಡಿಕೇರಿ ಮಾ.12 NEWS DESK : ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ 90ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯ ಜನರ ಸಮಸ್ಯೆಗಳ ಬಗ್ಗೆ ಪೂರ್ಣ ಅರಿವಿದ್ದು, ಅವುಗಳನ್ನು ಬಗೆಹರಿಸಲು ತಾವು ಬದ್ಧರಿದ್ದೇವೆ ಎಂದು ಹೇಳಿದರು. ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ ಗಣಪತಿ ಕೂರಿಸಲು ಭವನ ನಿರ್ಮಾಣಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿದರು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ, ಕೆಪಿಸಿಸಿ ಪ್ರಮುಖರಾದ ಟಿ.ಪಿ.ರಮೇಶ್, ಡಿ.ಸಿ.ಸಿ ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಗ್ರಾ.ಪಂ ಸದಸ್ಯರಾದ ಪುಷ್ಪ ಪ್ರೇಮ್ ಕುಮಾರ್, ಅನಿತಾ, ಪ್ರತಾಪ್, ಇಂಜಿನಿಯರ್‍ಗಳಾದ ರಘು, ಪ್ರಮೋದ್, ಪ್ರಮುಖರಾದ ಹರಿಪ್ರಸಾದ್, ವಿ.ಜಿ.ಮೋಹನ್, ರಾಜುಗೌಡ ಸೇರಿದಂತೆ ಪಕ್ಷದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.






