Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯುವಜನತೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು : ಮೇಜರ್ ಪ್ರೊ. ಬಿ.ರಾಘವ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುವಜನತೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು : ಮೇಜರ್ ಪ್ರೊ. ಬಿ.ರಾಘವ ಸಲಹೆ*

ಮಾರ್ಚ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.12 NEWS DESK : ಸುಸ್ಥಿರ ಅಭಿವೃದ್ಧಿಗೆ ಯುವ ಜನರ ಪಾತ್ರ ಪ್ರಮುಖವಾದುದು. ಆ ನಿಟ್ಟಿನಲ್ಲಿ ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳುವಂತಾಗಬೇಕು. ಇದರಿಂದ ಪರಿಣಾಮಕಾರಿ ವ್ಯಕ್ತಿತ್ವ ರೂಪಿಸಿಕೊಳ್ಳಬಹುದಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೊ.ಮೇ.ರಾಘವ ತಿಳಿಸಿದ್ದಾರೆ.
ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್ ಘಟಕ, ಜಿಲ್ಲಾ ಹಾಗೂ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಸ್ಪೂರ್ತಿ ಯುವ ಸಂಘ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ `ಜಿಲ್ಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಯುವ ಜನರು ಭವಿಷ್ಯದ ಪ್ರಜೆಗಳು, ಜೊತೆಗೆ ಸೈನಿಕರಂತೆ ರಾಷ್ಟ್ರದ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.
ಸಾಮಾಜಿಕ ಪರಿವರ್ತನೆಯಲ್ಲಿ ಯುವಜನರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಸಮಾಜದ ಅಭಿವೃದ್ಧಿ ಮತ್ತು ಬದಲಾವಣೆಯಲ್ಲಿ ಯುವಜನರು ತಮ್ಮದೇ ಆದ ಪಾತ್ರ ವಹಿಸುತ್ತಾರೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅವರು ಮಹಿಳಾ ಸಬಲೀಕರಣ ಕುರಿತು ಮಾತನಾಡಿ ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಕೇಂದ್ರ ಸರ್ಕಾರವು ನಾರಿಶಕ್ತಿ ಸ್ವ ಆಧಾರ್, ಒನ್ ಸ್ಟಾಪ್ ಸೆಂಟರ್ ಹೀಗೆ ಮಹಿಳೆಯರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ ಎಂದು ತಿಳಿಸಿದರು.
ಹೆಣ್ಣು ಮತ್ತು ಗಂಡು ಇಬ್ಬರು ಸಮಾನರು, ಸಂಸಾರದ ರಥ ಚಲಿಸಲು ಸ್ತ್ರೀ ಮತ್ತು ಪುರುಷ ಇಬ್ಬರು ಅಗತ್ಯ. ಆ ನಿಟ್ಟಿನಲ್ಲಿ ಹೆಣ್ಣಿಲ್ಲದೆ ಜೀವನವಿಲ್ಲ, ಹೆಣ್ಣಿನಿಂದಲೇ ಬಾಳು ಬಂಗಾರ, ಹೆಣ್ಣಿಲ್ಲದ ಬದುಕು ಊಹಿಸಲು ಅಸಾಧ್ಯ. ಹೆಣ್ಣನ್ನು ರಕ್ಷಿಸುವುದು ಮತ್ತು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಭ್ರೂಣಹತ್ಯೆ ನಿಷೇಧ, ಮಹಿಳಾ ಸಹಾಯವಾಣಿ. ಆಶ್ರಯ ಆಧಾರ, ಸುಕನ್ಯಾ ಸಮೃದ್ಧಿ, ನಾರಿಶಕ್ತಿ ಪುರಸ್ಕಾರ ಮತ್ತಿತರ ಜಾರಿಗೊಳಿಸಿದೆ ಎಂದರು. ಭಾರತ ಸಂವಿಧಾನವು ಮಹಿಳೆಯರಿಗೆ ಸಮಾನತೆ ಕಲ್ಪಿಸಿದೆ. ಸಮಾನ ಅವಕಾಶ ನೀಡಿದೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಮಾತನಾಡಿ, ರಾಷ್ಟ್ರದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಯುವಜನರು ರಾಷ್ಟ್ರದಲ್ಲಿ ತಮ್ಮದೇ ಆದ ಪಾತ್ರ ವಹಿಸುತ್ತಾರೆ ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕರಾದ ಡಿ.ಎಸ್.ಮಾನಸ ಅವರು `ನನ್ನ ಭಾರತ’ ವಿಷಯ ಕುರಿತು ಮಾತನಾಡಿದರು.
ಸಮಾಜದ ಒಂದು ಶಕ್ತಿ ಎಂದರೆ ಶಿಕ್ಷಣ ಪಡೆದ ಮಹಿಳೆ, ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುವ ಶಕ್ತಿಯನ್ನು ಹೊಂದಿದ್ದಾರೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ಮಾತನಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಎವರೆಸ್ಟ್ ರಾಡ್ರಿಗಸ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪಿ.ಪಿ.ಸುಕುಮಾರ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್, ಇತರರು ಇದ್ದರು. ತ್ರಿವೇಣಿ ಹಾಗೂ ದೀಪ್ತಿ ಪ್ರಾರ್ಥಿಸಿದರು. ರಿಷಿತಾ ಸ್ವಾಗತ ನೃತ್ಯ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆಯ ಮೀನುಪೇಟೆಯಲ್ಲಿರುವ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು…

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.