Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯ ಸದಸ್ಯರಿಂದ ಜಿಲ್ಲಾಡಳಿತ ಭವನದ ತಡೆಗೋಡೆ ಪರಿಶೀಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯ ಸದಸ್ಯರಿಂದ ಜಿಲ್ಲಾಡಳಿತ ಭವನದ ತಡೆಗೋಡೆ ಪರಿಶೀಲನೆ

ಮಾರ್ಚ್ 14, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.14 NEWS DESK : ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯ ಸದಸ್ಯರು ಹಾಗೂ ವಿಧಾನಸಭೆಯ ಸದಸ್ಯರಾದ ಎಸ್.ಸುರೇಶ್ ಕುಮಾರ್, ಎ.ಮಂಜು, ಸಿ.ವಿ.ಸುರೇಶ್ ಬಾಬು, ಡಾ.ಮಂತರ್ ಗೌಡ ಹಾಗೂ ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ್ ಅವರು ನಗರದ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆಯನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯನಾರಾಯಣ, ಅಂದಾಜು ಸಮಿತಿಯ ಜಯಪ್ರಸಾದ್, ಸದಸ್ಯರಾದ ಭುರ್ಜಿ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರಾದ ಶಿವಕುಮಾರ್ ಇತರರು ತಡೆಗೋಡೆಯನ್ನು ವೀಕ್ಷಿಸಿ ಸಮಿತಿ ಸದಸ್ಯರಿಗೆ ಹಲವು ಮಾಹಿತಿ ನೀಡಿದರು.
ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಹಂತದ ಎಂಜಿನಿಯರ್‍ಗಳು, ಭಾರತೀಯ ವಿಜ್ಞಾನ ಸಂಸ್ಥೆ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ, ಮಾಹಿತಿ ಪಡೆದು, ಹಲವು ನಿರ್ದೇಶನ ನೀಡಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕರು ಹಾಗೂ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯ ಸದಸ್ಯರಾದ ಎಸ್.ಸುರೇಶ್ ಕುಮಾರ್ ಅವರು ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಆತಂಕ ಇದ್ದ ಹಿನ್ನೆಲೆ ಈಗಾಗಲೇ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿಯು ಬೆಂಗಳೂರಿನಲ್ಲಿ ಮೂರು ಬಾರಿ ಸಭೆ ನಡೆಸಿ, ಚರ್ಚಿಸಿದೆ. ಆ ನಿಟ್ಟಿನಲ್ಲಿ ಖುದ್ದಾಗಿ ತಡೆಗೋಡೆ ಸಂಬಂಧ ಸ್ಥಳ ಪರಿಶೀಲಿಸಲು ನಿರ್ಧರಿಸಲಾಗಿತ್ತು. ಅದರಂತೆ ಸ್ಥಳ ಪರಿಶೀಲಿಸಿ ಮಾಹಿತಿ ಪಡೆಯಲಾಗಿದೆ ಎಂದು ತಿಳಿಸಿದರು.
ಹಾಗೆಯೇ `ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ತಡೆಗೋಡೆ ಸಂಬಂಧ ಒಟ್ಟು ಯೋಜನೆ ರೂಪುರೇಷ ಬಗ್ಗೆ ಮರು ಪರಿಶೀಲಿಸಲು ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.’
ತಡೆಗೋಡೆ ಸಂಬಂಧ ಪರ್ಯಾಯ ಅಭಿವೃದ್ಧಿ ಬಗ್ಗೆ ಯೋಚಿಸಲಾಗಿದ್ದು, `ಬೆಂಚು ಮಾದರಿ’ಯಲ್ಲಿ ತಡೆಗೋಡೆ ನಿರ್ಮಿಸುವ ಸಂಬಂಧ 15 ದಿನದಲ್ಲಿ ಡಿಪಿಆರ್(ಸವಿಸ್ತಾರ) ಸಿದ್ಧಪಡಿಸಿ, ವರದಿ ಸಲ್ಲಿಸುವಂತೆ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರಿಗೆ ಸೂಚಿಸಲಾಗಿದೆ ಎಂದರು.
ಸದ್ಯ ತಾಂತ್ರಿಕ ತಜ್ಞರು ನೀಡುವ ವರದಿ ಆಧರಿಸಿ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು.
ಜಿಲ್ಲಾಡಳಿತ ಭವನಕ್ಕೆ ತೆರಳಲು ಉದ್ದೇಶಿಸಲಾಗಿರುವ ರಸ್ತೆ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು. ತಡೆಗೋಡೆ ಸಂಬಂಧ ಕೆಲಸಗಳು ಆದ ನಂತರ ಮುಂದಿನ ಹಂತದಲ್ಲಿ ರಸ್ತೆ ನಿರ್ಮಿಸಬಹುದಾಗಿದೆ ಎಂದು ಸುರೇಶ್ ಕುಮಾರ್ ಸಲಹೆ ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಮಿತಿ ಸದಸ್ಯರಾದ ಡಾ.ಮಂತರ್‍ಗೌಡ ಮಾತನಾಡಿ, ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಸಂಬಂಧಿಸಿದಂತೆ ಹಲವು ಬಾರಿ ಸರ್ಕಾರದ ಗಮನಸೆಳೆಯಲಾಗಿತ್ತು. ಆ ನಿಟ್ಟಿನಲ್ಲಿ ವಿಧಾನಸಭೆಯ ಅರ್ಜಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದು, ಸಮಿತಿ ನಿರ್ಣಯಗಳು ಹಾಗೂ ತಾಂತ್ರಿಕ ತಜ್ಞರು ನೀಡುವ ವರದಿಯಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಮುಂದಿನ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುವುದು. ತಡೆಗೋಡೆ ಸಂಬಂಧ ಸರ್ಕಾರದ ಗಮನ ಸೆಳೆದು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಡಾ.ಮಂತರ್ ಗೌಡ ಹೇಳಿದರು.
ಡ್ರಗ್ಸ್ ನಿಯಂತ್ರಿಸಲು ಸಲಹೆ: ತಂಬಾಕು ಸೇವನೆಯಿಂದ ಆಗುತ್ತಿರುವ ಅಪಾಯ ಕುರಿತು ಮಾತನಾಡಿದ ಎಸ್.ಸುರೇಶ್ ಕುಮಾರ್ ಅವರು ಡ್ರಗ್ಸ್, ಹೆರಾಯಿನ್ ಮತ್ತಿತರ ಮಾದಕ ವಸ್ತುಗಳಿಗೆ ಯಾರೂ ಸಹ ದಾಸರಾಗಬಾರದು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಡ್ರಗ್ಸ್ ಅಥವಾ ಮಾದಕ ವಸ್ತುಗಳಿಂದ ದೂರ ಇರಬೇಕು ಎಂದು ವಿಧಾನಸಭೆಯ ಅರ್ಜಿ ಸಮಿತಿಯ ಸದಸ್ಯರಾದ ಎಸ್.ಸುರೇಶ್ ಕುಮಾರ್ ಹೇಳಿದರು.
ಶಿಕ್ಷಣ, ಆರೋಗ್ಯ, ಪೊಲೀಸ್, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಜಾಗೃತಿ ವಹಿಸಬೇಕಿದೆ ಎಂದು ಸುರೇಶ್ ಕುಮಾರ್ ಅವರು ಸಲಹೆ ಮಾಡಿದರು. ಡ್ರಗ್ಸ್ ವಿರುದ್ದ ಪ್ರತಿಯೊಬ್ಬರೂ ಹೋರಾಟ ಮಾಡಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗಾಂಜಾ, ಹೆರಾಯಿನ್ ಸೇರಿದಂತೆ ಡ್ರಗ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ತಪಾಸಣೆ ಮಾಡಿ, ತಪ್ಪು ಕಂಡುಬಂದ ಹಲವರನ್ನು ಬಂಧಿಸಲಾಗಿದೆ. ಡ್ರಗ್ಸ್ ನಿಯಂತ್ರಣ ಮಾಡಲು ಗಡಿ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಸಮಿತಿ ಸದಸ್ಯರೊಬ್ಬರು ಮಾತನಾಡಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಮಕ್ಕಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ಸಲಹೆ ಮಾಡಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಗಡಿ ಪ್ರದೇಶದ ಚೆಕ್‍ಪೋಸ್ಟ್‍ಗಳಲ್ಲಿ ಅಗತ್ಯ ತಪಾಸಣೆ ಮಾಡಬೇಕು. ಸಮಿತಿಯ ಅಭಿಪ್ರಾಯ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಗಮನಸೆಳೆಯುವಂತಾಗಬೇಕು ಎಂದು ಸಲಹೆ ಮಾಡಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಎಇಇ ಗಿರೀಶ್ ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಕೊಡವ ಜನಾಂಗದ ಅಸ್ತಿತ್ವ, ಗುರುತು, ಭೂಮಿ, ಭಾಷೆ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ…

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.