Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ : ಬ್ಲಾಕ್ ಕಾಂಗ್ರೆಸ್ ಶ್ಲಾಘನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ : ಬ್ಲಾಕ್ ಕಾಂಗ್ರೆಸ್ ಶ್ಲಾಘನೆ*

ಮಾರ್ಚ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.16 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳುಗಳಲ್ಲಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದ್ದು, ಸುಮಾರು 140 ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸುವ ಮೂಲಕ ಶಾಸಕ ಡಾ.ಮಂತರ್ ಗೌಡ ಅವರು ಜನಸ್ನೇಹಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಪರ ಆಡಳಿತದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕರು ಗ್ಯಾರಂಟಿ ಯೋಜನೆಗಳಿಂದ ಅನುದಾನ ಕೊರತೆಯಾಗಿದೆ, ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯಗಳಿಗೆ ಗ್ಯಾರಂಟಿ ಯೋಜನೆಗಳು ಅಡ್ಡಿಯಾಗಿಲ್ಲ, ಈ ಕುರಿತು ಚರ್ಚೆಗೆ ನಾವು ಸಿದ್ದರಿದ್ದೇವೆ ಎಂದು ಸವಾಲು ಹಾಕಿದರು.
ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾಣದ ರಸ್ತೆಗಳಿಗೆ ಈಗ ಅಭಿವೃದ್ಧಿ ಭಾಗ್ಯ ದೊರೆತ್ತಿದ್ದು, ಕಾಮಗಾರಿಗಳು ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ದೊರೆಯಲಿದ್ದು, ಮಡಿಕೇರಿ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಲಿದೆ. ಮಡಿಕೇರಿ ಬ್ಲಾಕ್‌ನಲ್ಲಿ ಕೆ.ನಿಡುಗಣೆ, ಗಾಳಿಬೀಡು, ಮಕ್ಕಂದೂರು, ಕಡಗದಾಳು, ಮರಗೋಡು, ಹೊಸ್ಕೇರಿ, ಮೂರ್ನಾಡು, ಹೊದವಾಡ ಮತ್ತು ಮಡಿಕೇರಿ ನಗರಸಭೆಗೆ ಒಳಪಟ್ಟ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗೆ ಒಟ್ಟು 1,40 ಕೋಟಿ ರೂ. ಅನುದಾನ ಬಿಡುಗಡೆಗೊಂಡು ಶಂಕುಸ್ಥಾಪನೆಯಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಹಾಸ್ಟೇಲ್ ಕಟ್ಟಡ, ಕೆಪಿಟಿಸಿಎಲ್ ಮಡಿಕೇರಿ ಮೂರ್ನಾಡು ಮತ್ತು ಸೋಮವಾರಪೇಟೆ, ಮಾದಾಪುರ, ಜಂಬೂರು ಗ್ರಾಮಗಳಲ್ಲಿ 66/11 ವಿದ್ಯುತ್ ಉಪಕೇಂದ್ರ, ಇಂದಿರಾ ಕ್ಯಾಂಟಿನ್ ಸೇರಿದಂತೆ ವಿವಿಧ ಕಾಮಗಾರಿಗಳು ಆರಂಭಗೊ0ಡಿವೆ ಎಂದು ಹಂಸ ತಿಳಿಸಿದರು.
ಡಿಸಿಸಿ ಸದಸ್ಯ ಜಾನ್ಸನ್ ಪಿಂಟೋ ಮಾತನಾಡಿ, ಉತ್ಸಾಹಿ ಶಾಸಕರಾಗಿರುವ ಡಾ.ಮಂತರ್ ಗೌಡ ಅವರು ಶ್ರಮಪಟ್ಟು ಮಡಿಕೇರಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರವನ್ನು ಘೋಷಣೆ ಮಾಡಿದ್ದು, ಕಿರಿಹೊಳೆ ಸೇತುವೆಗೆ 15 ರಿಂದ 20 ಕೋಟಿ ಅನುದಾನ ತರಲು ಶ್ರಮ ವಹಿಸಿದ್ದಾರೆ. ಅಲ್ಲದೇ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಿದ್ದಾರೆ. ಶಾಲೆಗಳ ಅಭಿವೃದ್ಧಿ, ಮರಗೋಡು, ಗಾಳಿಬೀಡು, ಕಡಗದಾಳು ವಲಯಗಳಿಗೆ ಹೆಚ್ಚಿನ ಅನುದಾನ ನೀಡಿ ಕಾಮಗಾರಿಗೆ ಚಾಲನೆ ನೀಡಿ, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಜನರಿಗೆ ಸೂಕ್ತ ಸ್ಪಂದನೆ ನೀಡುವ ಮೂಲಕ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಭಿವೃದ್ಧಿಪರ ಚಿಂತನೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ ಹಾಗೂ ಬ್ಲಾಕ್ ಉಪಾಧ್ಯಕ್ಷ ವಿ.ಜಿ.ಮೋಹನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.