Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 
  • *ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*
  • *ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*
  • *ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*
  • *ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*
  • *ಹಬ್ಬಗಳನ್ನು ಎಲ್ಲರ ಜೊತೆಗೂಡಿ ಆಚರಿಸಿದಾಗ ಮನಸ್ಸಿಗೆ ಸಂತೋಷ ಲಭಿಸುತ್ತದೆ : ತಾತಂಡ ಜ್ಯೋತಿ ಪ್ರಕಾಶ್*
  • *ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*
  • *ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*
  • *ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆಭಾಷೆ ಅಕಾಡೆಮಿಯಲ್ಲಿ ಕೊಡಗಿನವರಿಗೆ ಅನ್ಯಾಯ : ಸೂದನ ಈರಪ್ಪ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆಭಾಷೆ ಅಕಾಡೆಮಿಯಲ್ಲಿ ಕೊಡಗಿನವರಿಗೆ ಅನ್ಯಾಯ : ಸೂದನ ಈರಪ್ಪ ಅಸಮಾಧಾನ*

ಮಾರ್ಚ್ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.18 NEWS DESK : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಆಯ್ಕೆ ಸಂದರ್ಭ ಈ ಬಾರಿ ಕೂಡ ಕೊಡಗಿನವರಿಗೆ ಅನ್ಯಾಯ ಮಾಡಲಾಗಿದೆ ಎಂದು ಚಿಂತಕ ಸೂದನ ಎಸ್.ಈರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರೆಭಾಷೆಯ ಸಾಹಿತ್ಯ-ಸಂಸ್ಕೃತಿ ಆಚಾರ-ವಿಚಾರಗಳನ್ನು ಪೂರ್ವಕಾಲದಿಂದಲೂ ಉಳಿಸಿ-ಬೆಳೆಸಿಕೊಂಡು ಬಂದಿರುವ ಕೊಡಗಿನ ಅರೆಭಾಷಿಕರನ್ನು ಕಡೆಗಣಿಸುವ ಸರಕಾರದ ಪ್ರಯತ್ನ ಖಂಡನೀಯವೆಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ತಲೆತಲಾಂತರಗಳಿಂದ ಎಲ್ಲಾ ಭಾಷಿಕರೊಂದಿಗೆ ಸೌಹಾರ್ದತೆಯಿಂದ ನಡೆದುಕೊಳ್ಳುತ್ತಾ ಅರೆಭಾಷೆ ಮತ್ತು ಸಾಹಿತ್ಯವನ್ನು ಬೆಳೆಸುತ್ತಿರುವ ಅರೆಭಾಷಿಕರಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಕಳೆದ ಅನೇಕ ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿರುವ ಅರೆಭಾಷಿಕ ನಾಯಕರುಗಳು ಸರಕಾರದ ಈ ಮಲತಾಯಿ ಧೋರಣೆಯನ್ನು ಸಹಿಸಿಕೊಂಡಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಸುಮಾರು 25 ವರ್ಷಗಳ ನಂತರ ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರುಗಳ ಆಯ್ಕೆಯಾಗಿದೆ. ಇದಕ್ಕೆ ಪ್ರತಿಯಾಗಿ ಮತ್ತು ಅರೆಭಾಷಿಕ ಕಾರ್ಯಕರ್ತರ ಶ್ರಮಕ್ಕೆ ಪ್ರತಿಫಲವಾಗಿ ಅಕಾಡೆಮಿಯ ಅಧ್ಯಕ್ಷ ಸ್ಥಾನವನ್ನು ಕೊಡಗು ಜಿಲ್ಲೆಗೆ ನೀಡಬೇಕಾಗಿತ್ತು.
ಕಳೆದ ಅವಧಿಯಲ್ಲಿ ದಕ್ಷಿಣ ಕನ್ನಡದವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಆಗಿದೆ, ಮತ್ತೆ ಈ ಬಾರಿ ಕೂಡ ಅದೇ ಜಿಲ್ಲೆಗೆ ಅಧ್ಯಕ್ಷ ಸ್ಥಾನ ನೀಡಿರುವ ಔಚಿತ್ಯವೇನು ಎಂದು ಪ್ರಶ್ನಿಸಿರುವ ಸೂದನ ಈರಪ್ಪ, ಸ್ವಾಭಿಮಾನವಿದ್ದರೆ ಕೊಡಗಿನ ಅರೆಭಾಷಿಕ ಕಾಂಗ್ರೆಸ್ಸಿಗರು ತಮ್ಮ ಹಕ್ಕನ್ನು ಪ್ರತಿಪಾದನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರು ಜಿಲ್ಲೆಯ ಅರೆಭಾಷಿಕರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸುವ ಕುರಿತು ಆಸಕ್ತಿ ತೋರಬೇಕಾಗಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿದೆ, ಹಿಂದಿನ ಅರೆಭಾಷೆ ಅಕಾಡೆಮಿ ಆಡಳಿತ ರಚಿಸಿದ್ದ “ಶಬ್ದ” ಕೋಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಹಾಗೂ ಮನೆಗಳ ಹೆಸರನ್ನು ಹಾಕಿ ಕೊಡಗಿನಲ್ಲಿರುವ ಗ್ರಾಮಗಳ ಹೆಸರನ್ನು ಕೈಬಿಟ್ಟಿರುವುದು ಗಮನಾರ್ಹ ಅಂಶವಾಗಿದೆ ಮತ್ತು ತಾರತಮ್ಯದ ಸಂಕೇತವಾಗಿದೆ ಎಂದು ಆರೋಪಿಸಿದ್ದಾರೆ.
1985ರಲ್ಲಿ ಪ್ರಪ್ರಥಮವಾಗಿ ನಾನು ಹಾಗೂ ಮಿತ್ರರು ಸೇರಿಕೊಂಡು “ಗೌಡ ಕನ್ನಡ”ದಲ್ಲಿ “ಗೌಡದೊನಿ” ಎಂಬ ಸಂಕಲನ ರಚಿಸಿ ಭಾಷೆಗೊಂದು ರೂಪ ಕೊಟ್ಟು ವಿಶ್ವದೆಲ್ಲೆಡೆ ಪರಿಚಯಿಸಿದ್ದೆವು. ಮುಂದಿನ ಮೇ 10 ರಂದು ಸಣ್ಣ ಪುಲಿಕೋಟು ಗ್ರಾಮದಲ್ಲಿ ಡಾ.ಕಾವೇರಿ ಮನೆ ಬೋಜಪ್ಪನವರ 94ನೇ ಜನ್ಮದಿನದಂದು “ಗೌಡ ಬಾಸೆ” ಎಂಬ ಹೆಸರಿನ ಸುಮಾರು 12 ಸಾವಿರ ಶಬ್ದಗಳ ಪದಕೋಶವನ್ನು ಹೊರ ತರುತ್ತಿದ್ದೇವೆ. ನನ್ನದೇ ಸಂಪಾದಕೀಯದಲ್ಲಿ ಈ ಶಬ್ದಕೋಶದ ಸಂಗ್ರಹ ಕಾರ್ಯ 16 ವರ್ಷಗಳಿಂದ ನಡೆಯುತ್ತಿದೆ ಎಂದು ಸೂದನ ಈರಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 

ಸೆಪ್ಟೆಂಬರ್ 23, 2026

*ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*

ಸೆಪ್ಟೆಂಬರ್ 23, 2026

*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*

ಸೆಪ್ಟೆಂಬರ್ 22, 2026

*ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.23 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ…

*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*

ಸೆಪ್ಟೆಂಬರ್ 22, 2026

*ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*

ಸೆಪ್ಟೆಂಬರ್ 22, 2026

*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*

ಸೆಪ್ಟೆಂಬರ್ 22, 2026

*ಹಬ್ಬಗಳನ್ನು ಎಲ್ಲರ ಜೊತೆಗೂಡಿ ಆಚರಿಸಿದಾಗ ಮನಸ್ಸಿಗೆ ಸಂತೋಷ ಲಭಿಸುತ್ತದೆ : ತಾತಂಡ ಜ್ಯೋತಿ ಪ್ರಕಾಶ್*

ಸೆಪ್ಟೆಂಬರ್ 22, 2026

*ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*

ಸೆಪ್ಟೆಂಬರ್ 22, 2026

*ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*

ಸೆಪ್ಟೆಂಬರ್ 22, 2026

*ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*

ಸೆಪ್ಟೆಂಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.