Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.25 ರಿಂದ 10ನೇ ತರಗತಿ ಪರೀಕ್ಷೆ : ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.25 ರಿಂದ 10ನೇ ತರಗತಿ ಪರೀಕ್ಷೆ : ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಮಾರ್ಚ್ 21, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.21 NEWS DESK : ಇದೇ ಮಾರ್ಚ್, 25 ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶನದಂತೆ ಎಸ್‌ಒಪಿ ಮಾರ್ಗಸೂಚಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.
ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದ್ದು, ಪರೀಕ್ಷೆಯ ಪಾವಿತ್ರö್ಯತೆ ಕಾಪಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು. ಪರೀಕ್ಷೆ ಕೇಂದ್ರಗಳಲ್ಲಿ ಸೂಕ್ತವಾದ ಪೀಠೋಪಕರಣ/ ಆಸನದ ವ್ಯವಸ್ಥೆ, ಕುಡಿಯಲು ಶುದ್ಧವಾದ ನೀರು ಮತ್ತಿತರ ಮೂಲ ಸೌಲಭ್ಯಗಳು ಇರಬೇಕು ಎಂದರು.
ಪರೀಕ್ಷಾ ದಿನಗಳಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಬೇಕು/ಹೋಗಬೇಕು. ಪ್ರವೇಶ ಪತ್ರ ತೋರಿಸಿದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಬೇಕು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಆದೇಶದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು, ವೆಬ್‌ಕಾಸ್ಟ್ ಮಾಡುವುದು ಮತ್ತಿತರ ಗಮನಹರಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ವಿದ್ಯಾರ್ಥಿಗಳನ್ನು ಭಯಪಡಿಸಬಾರದು. ಪಾರದರ್ಶಕವಾಗಿ ಪರೀಕ್ಷೆಯನ್ನು ನಡೆಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದೆ, ಸುಗಮವಾಗಿ ಪರೀಕ್ಷೆ ನಡೆಸಬೇಕು ಎಂದರು.
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಜೊತೆಗೆ ವೆಬ್‌ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯಿತಿಯ ಸ್ವೀಕೃತಿ ಕೇಂದ್ರದಲ್ಲಿ ಪರೀಕ್ಷೆಯ ಆಗುಹೋಗುಗಳ ಬಗ್ಗೆ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್ ಅವರು ಮಾಹಿತಿ ನೀಡಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್, 25 ರಿಂದ ಏಪ್ರಿಲ್, 06 ರವರೆಗೆ ನಡೆಯಲಿದ್ದು, ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲ್ಲೂಕಿನ 8, ಸೋಮವಾರಪೇಟೆ ತಾಲ್ಲೂಕಿನ 11, ವಿರಾಜಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯ 171 ಪ್ರೌಢಶಾಲೆಯ 6,517 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 3,340 ಬಾಲಕರು ಮತ್ತು 3,177 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಮಡಿಕೇರಿ ತಾಲ್ಲೂಕಿನ 43, ಸೋಮವಾರಪೇಟೆ ತಾಲ್ಲೂಕಿನ 71 ಮತ್ತು ವಿರಾಜಪೇಟೆ ತಾಲ್ಲೂಕಿನ 57 ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ಕೋರಲಾಗಿದೆ. ಹಾಗೆಯೇ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಮನವಿ ಮಾಡಲಾಗಿದೆ. ಸಿಸಿಟಿವಿ ಅಳವಡಿಸಲಾಗುತ್ತದೆ. ಜೊತೆಗೆ ವೆಬ್‌ಕಾಸ್ಟ್ ಮಾಡಲಾಗುತ್ತದೆ ಎಂದು ಎಂ.ಚಂದ್ರಕಾಂತ್ ಅವರು ವಿವರಿಸಿದರು. ಡಯಟ್ ಹಿರಿಯ ಉಪನ್ಯಾಸಕರ ತಂಡವನ್ನು ರಚಿಸಿ ಜಾಗೃತಿ ದಳ ರಚಿಸಲಾಗಿದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾತನಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನೋಡಲಾಧಿಕಾರಿ ಮಹದೇವಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ(ಮಡಿಕೇರಿ), ಎಸ್. ಭಾಗ್ಯಮ್ಮ(ಸೋಮವಾರಪೇಟೆ), ಡಿವೈಪಿಸಿ ಎಂ.ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕಾ ಅಭಿರಕ್ಷಕರು, ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಇತರರು ಇದ್ದರು.
ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ: ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ, ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆ, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಮೂರ್ನಾಡು ಪ್ರೌಢಶಾಲೆ, ಸಿದ್ದಾಪುರ ಪ್ರೌಢಶಾಲೆ, ಸಂಪಾಜೆ ಪ್ರೌಢಶಾಲೆ, ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಒಎಲ್‌ವಿ ಆಂಗ್ಲ ಮಾಧ್ಯಮ ಶಾಲೆ, ಕುಶಾಲನಗರದ ಫಾತಿಮಾ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಸೇಕ್ರೇಡ್ ಹಾರ್ಟ್ ಪ್ರೌಢಶಾಲೆ, ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೇರೀಸ್ ಪ್ರೌಢಶಾಲೆ, ಕೊಡ್ಲಿಪೇಟೆಯ ಪದವಿ ಪೂರ್ವ ಕಾಲೇಜು, ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆ, ಹೆಬ್ಬಾಲೆಯ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಅನ್ನಮ್ಮ ಪ್ರೌಢಶಾಲೆ, ಅಮ್ಮತ್ತಿಯ ಗುಡ್ ಸೆಫರ್ಡ್ ಶಾಲೆ(ಹೊಸ ಕೇಂದ್ರ), ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆ, ಗೋಣಿಕೊಪ್ಪದ ಸಂತ ಥಾಮಸ್ ಶಾಲೆ, ತಿತಿಮತಿಯ ಸರ್ಕಾರಿ ಪ್ರೌಢಶಾಲೆ, ಪೊನ್ನಂಪೇಟೆಯ ಪಬ್ಲಿಕ್ ಶಾಲೆ, ಶ್ರೀಮಂಗಲದ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.