Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.30 ರಿಂದ ನಾಪೋಕ್ಲುವಿನಲ್ಲಿ ಕುಂಡ್ಯೋಳಂಡ ಹಾಕಿ ಹಬ್ಬ ಆರಂಭ : ದಾಖಲೆಯ 360 ತಂಡಗಳು ನೋಂದಣಿ : ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.30 ರಿಂದ ನಾಪೋಕ್ಲುವಿನಲ್ಲಿ ಕುಂಡ್ಯೋಳಂಡ ಹಾಕಿ ಹಬ್ಬ ಆರಂಭ : ದಾಖಲೆಯ 360 ತಂಡಗಳು ನೋಂದಣಿ : ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯ*

ಮಾರ್ಚ್ 22, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.22 NEWS DESK  : ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ ಕುಂಡ್ಯೋಳಂಡ ಹಾಕಿ ಹಬ್ಬ ಮಾ.30 ರಿಂದ ಏ.28 ರವರೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ದಾಖಲೆಯ 360 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯವನ್ನು ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಅಧ್ಯಕ್ಷ ರಮೇಶ್ ಮುದ್ದಯ್ಯ ಹಾಗೂ ಪ್ರಮುಖರು ಕೊಡವ ಹಾಕಿ ಅಕಾಡೆಮಿಯು 26 ವರ್ಷಗಳ ಹಿಂದೆ ಕೊಡವ ಹಾಕಿ ಹಬ್ಬದ ಜನಕ ದಿವಂಗತ ಪಾಂಡಂಡ ಕುಟ್ಟಣಿ ಅವರ ನೇತೃತ್ವದಲ್ಲಿ 1997 ರಲ್ಲಿ ಸ್ಥಾಪಿತಗೊಂಡಿತು. ಅಂದಿನಿಂದ ಇಂದಿನವರೆಗೆ ಕೊಡವ ಕುಟುಂಬಗಳ ನಡುವಿನ ವಿಶ್ವದಾಖಲೆಯ ಹಾಕಿ ಹಬ್ಬವನ್ನು ಆಯೋಜಿಸುತ್ತಾ ಬರುತ್ತಿದೆ ಎಂದರು.
ಈ ವರ್ಷ 24ನೇ ಹಾಕಿ ಹಬ್ಬವನ್ನು ಕುಂಡ್ಯೋಳಂಡ ಕುಟುಂಬದ ಸಾರಥ್ಯದಲ್ಲಿ ನಡೆಸಲಾಗುತ್ತಿದೆ. ಕೊಡವ ಹಾಕಿ ಅಕಾಡೆಮಿ, ಹಾಕಿ ಕೂರ್ಗ್, ಹಾಕಿ ಕರ್ನಾಟಕ ಹಾಗೂ ಸ್ಥಳೀಯ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುತ್ತಿದ್ದು, ಕುಂಡ್ಯೋಳಂಡ ಹಾಕಿ ಕಾರ್ನಿವಲ್ 2024 ರ ಅಂತಿಮ ಪಂದ್ಯಾಟವನ್ನು ಸುಮಾರು 50 ಸಾವಿರ ಕ್ರೀಡಾಭಿಮಾನಿಗಳು ವೀಕ್ಷಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಭಾರತೀಯ ಹಾಕಿಯ ತೊಟ್ಟಿಲು ಎಂದೇ ಪರಿಗಣಿಸಲ್ಪಟ್ಟಿರುವ ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. 50 ಕ್ಕೂ ಹೆಚ್ಚು ಕೊಡವ ಅಂತರಾಷ್ಟ್ರೀಯ ಹಾಕಿ ಆಟಗಾರರು ಹಾಕಿ ಕ್ರೀಡೆಯ ಪರಂಪರೆಗೆ ಕೊಡುಗೆ ನೀಡಿದ್ದಾರೆ. ಪಾಂಡಂಡ ಕುಟ್ಟಣ್ಣಿ ಹಾಗೂ ಅವರ ಸಹೋದರ ಕಾಶಿಯವರಿಂದ ಕೊಡವ ಹಾಕಿ ಉತ್ಸವ ಆರಂಭವಾಯಿತು. 1997 ರಲ್ಲಿ ಕರಡದಲ್ಲಿ ಪಾಂಡಂಡ ಕುಟುಂಬ ಮೊದಲ ಬಾರಿಗೆ ಆಯೋಜಿಸಿದ್ದ ಹಾಕಿಹಬ್ಬದಲ್ಲಿ 60 ತಂಡಗಳು ಪಾಲ್ಗೊಂಡಿದ್ದವು.
ಈ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳ ನೋಂದಣಿಯೊಂದಿಗೆ ಹೊಸ ದಾಖಲೆ ಸೃಷ್ಟಿಸುವ ಮೂಲಕ ಪ್ರತಿಷ್ಠಿತ ಕಪ್ ಗಾಗಿ ಸೆಣಸಾಡುತ್ತಿರುವುದು ವಿಶೇಷ. ಕುಂಡ್ಯೋಳಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿ ಹಾಕಿ ಹಬ್ಬವನ್ನು ಆಯೋಜಿಸುವ ಮೂಲಕ ಸಮುದಾಯದ ಬಾಂಧವ್ಯವನ್ನು ಬೆಳೆಸುವ ಮತ್ತು ಕೊಡವ ಪರಂಪರೆಯನ್ನು ಸಂರಕ್ಷಿಸುವ ಕಾರ್ಯವನ್ನು ಮಾಡುತ್ತಿದೆ. ಈ ಹಾಕಿ ಪಂದ್ಯಾವಳಿಯಲ್ಲಿ ಎಲ್ಲಾ ಕ್ರೀಡಾಭಿಮಾನಿಗಳು ಹಾಗೂ ಕ್ರೀಡಾಪಟುಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಹಾಕಿ ಹಬ್ಬದೊಂದಿಗೆ ಮ್ಯಾರಥಾನ್ ಓಟ, ವಧುವರರ ಸಮಾವೇಶ, ಆಹಾರ ಉತ್ಸವ, ಆರೋಗ್ಯ ಶಿಬಿರ, ವೃತ್ತಿ ಮಾರ್ಗದರ್ಶನ, ಹಾಕಿ ರಾಷ್ಟ್ರೀಯ, ಅಂತರರಾಷ್ಟ್ರೀಯ ಆಟಗಾರರ ಪುನರ್ ಮಿಲನ ಮತ್ತು ಬಾಳೋಪಾಟ್ ತರಬೇತಿ ಮತ್ತಿತರ ಕಾರ್ಯಕ್ರಮಗಳು ಕೂಡ ನಡೆಯಲಿದೆ.
ಅನೇಕ ಆಕರ್ಷಕ ಸ್ಟಾಲ್ ಗಳು ಗಮನ ಸೆಳೆಯಲಿವೆ, ಪ್ರತಿಷ್ಠಿತ ವಿವಿಧ ವಾಹನ ಸಂಸ್ಥೆಗಳು, ಕಾಫಿ ಸಂಸ್ಥೆಗಳು ಸೇರಿದಂತೆ ವೈವಿಧ್ಯಮಯ ಸ್ಟಾಲ್ ಗಳು ಇರಲಿವೆ. ಹಾಕಿ ಹಬ್ಬಕ್ಕೆ “ಇಬ್ನಿ ಸ್ಪಾ” ದೊಡ್ಡ ಮಟ್ಟದ ಪ್ರಾಯೋಜಕತ್ವ ನೀಡುವ ಮೂಲಕ ಪ್ರೋತ್ಸಾಹ ನೀಡಿದೆ.
::: ಉದ್ಘಾಟನಾ ಪಂದ್ಯದಲ್ಲಿ ಜಿಲ್ಲಾಧಿಕಾರಿ :::
ಮಾರ್ಚ್ 30 ರಂದು ನಡೆಯುವ ಉದ್ಘಾಟನಾ ಪಂದ್ಯ ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ನಡೆಯಲಿದೆ. ಕೂರ್ಗ್ 11 ತಂಡದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆಡುವ ಸಾಧ್ಯತೆಗಳಿದೆ. ಇದಕ್ಕೂ ಮೊದಲು ಸಾಯಿ ಮಡಿಕೇರಿ ಮತ್ತು ಸಾಯಿ ಪೊನ್ನಂಪೇಟೆ ಬಾಲಕಿಯರ ತಂಡಗಳ ನಡುವೆ ಪಂದ್ಯಾಟವನ್ನು ಆಯೋಜಿಸಲಾಗಿದೆ.
ಕೊಡವ ಹಾಕಿ ಅಕಾಡೆಮಿ ಕಳೆದ ವರ್ಷದಿಂದ ಒಂದು ಕೆಜಿ ಬೆಳ್ಳಿಯ ರೋಲಿಂಗ್ ಟ್ರೋಫಿ ನೀಡಿದೆ. ಈ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ “ಮ್ಯಾನ್ ಆಫ್ ದಿ ಫೆಸ್ಟಿವಲ್” ಆಟಗಾರನಿಗೆ “ಏತರ್” ಸ್ಕೂಟರ್ ಸಂಸ್ಥೆ ಎಲೆಕ್ಟ್ರಿಕ್ ಸ್ಕೂಟರ್ ನ್ನು ಬಹುಮಾನವಾಗಿ ನೀಡಲಿದೆ. ಬೆಂಗಳೂರಿನ ಪ್ರತಿಷ್ಠಿತ ಆರ್.ವಿ ವಿಶ್ವ ವಿದ್ಯಾನಿಲಯ ಹಾಕಿ ಪಂದ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಕಿ ತಂಡವನ್ನು ರಚನೆ ಮಾಡಲು ಮುಂದಾಗಿದೆ. ಕೊಡವ ಹಾಕಿ ಅಕಾಡೆಮಿ ಶಿಫಾರಸ್ಸು ಮಾಡುವ ಹಾಕಿಪಟುವಿಗೆ ಕಾಲೇಜ್ ನಲ್ಲಿ ಓದಲು ಅವಕಾಶ ಮತ್ತು ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದೆ ಎಂದು ಪ್ರಮುಖರು ತಿಳಿಸಿದರು.
::: ರೂ. 4ಲಕ್ಷ ಬಹುಮಾನ :::
ಕುಂಡ್ಯೋಳಂಡ ಹಾಕಿ ಹಬ್ಬದ ವಿಜೇತ ತಂಡಕ್ಕೆ ರೂ.4ಲಕ್ಷ, ದ್ವಿತೀಯ 3ಲಕ್ಷ, ತೃತೀಯ 2ಲಕ್ಷ ಮತ್ತು ನಾಲ್ಕನೇ ಸ್ಥಾನದ ತಂಡಕ್ಕೆ ರೂ.1 ಲಕ್ಷ ನಗದು ಮಾತ್ರವಲ್ಲದೆ ಬಹುಮಾನಗಳನ್ನು ನೀಡಲಾಗುವುದು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹಾಕಿ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಖ್ಯಾತ ಬರಹಗಾರ ಕಂಬೀರಂಡ ಕಾವೇರಿ ಪೊನ್ನಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ದಿನೇಶ್ ಕಾರ್ಯಪ್ಪ ಹೇಳಿದರು.
::: ರೂ.2 ಕೋಟಿ ವೆಚ್ಚ :::
ಖಜಾಂಚಿ ಕುಂಡ್ಯೋಳಂಡ ವಿಶು ಪೂವಯ್ಯ ಮಾತನಾಡಿ ಕುಂಡ್ಯೋಳಂಡ ಹಾಕಿ ಹಬ್ಬಕ್ಕೆ ರೂ.2 ಕೋಟಿ ಖರ್ಚಾಗುತ್ತಿದ್ದು, ಕುಂಡ್ಯೋಳಂಡ ಕುಟುಂಬಸ್ಥರಿಂದ ರೂ.30ಲಕ್ಷ ಸಂಗ್ರಹಿಸಲಾಗಿದೆ. ಕಳೆದ ವರ್ಷದ ಹಾಕಿ ಹಬ್ಬಕ್ಕೆ ಸರಕಾರ ರೂ.1 ಕೋಟಿ ನೀಡಿತ್ತು, ಈ ಬಾರಿ ಸರಕಾರದ ಅನುದಾನ ಶೀಘ್ರ ದೊರೆತರೆ ಉತ್ತಮ ಎಂದರು.
ಅಧ್ಯಕ್ಷ ರಮೇಶ್ ಮುದ್ದಯ್ಯ ಮಾತನಾಡಿ ಕುಂಡ್ಯೋಳಂಡ ಅತ್ಯಂತ ಚಿಕ್ಕ ಕುಟುಂಬವಾದರೂ ಹಾಕಿ ಹಬ್ಬದ ಯಶಸ್ಸಿಗಾಗಿ ಅದ್ದೂರಿಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಕಳೆದ ಕೆಲವು ವರ್ಷಗಳಿಂದ ತಯಾರಿ ನಡೆದಿತ್ತು ಎಂದು ತಿಳಿಸಿದರು.
::: ಮುಂದಿನ ವರ್ಷ ಮುದ್ದಂಡ ಹಾಕಿ ಹಬ್ಬ :::
ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಮಾತನಾಡಿ ಹಾಕಿ ಅಕಾಡೆಮಿಯು 2025 ರಲ್ಲಿ 25ನೇ ಆವೃತ್ತಿಯ ಕೊಡವ ಕುಟುಂಬಗಳ ನಡುವಿನ ಹಾಕಿಹಬ್ಬ ನಡೆಸಲು ಮುದ್ದಂಡ ಕುಟುಂಸ್ಥರಿಗೆ ಅವಕಾಶ ನೀಡಿದೆ. ಈ ಹಾಕಿಹಬ್ಬ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವುದು ವಿಶೇಷ ಎಂದು ತಿಳಿಸಿದರು.
ನಾಪೋಕ್ಲುವಿನಲ್ಲಿ ಈ ಬಾರಿ ನಡೆಯುವ ಕುಂಡ್ಯೋಳಂಡ ಹಾಕಿ ಹಬ್ಬವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.