Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅನ್ನಭಾಗ್ಯದಂತೆ ಭೂಮಿ ಭಾಗ್ಯ ನೀಡಿ : ಜಮೀನು ಗುತ್ತಿಗೆ ಆದೇಶ ಹಿಂದಕ್ಕೆ ಪಡೆಯಿರಿ : ತಪ್ಪಿದಲ್ಲಿ ಚುನಾವಣೆಯಲ್ಲಿ ನಮ್ಮದೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅನ್ನಭಾಗ್ಯದಂತೆ ಭೂಮಿ ಭಾಗ್ಯ ನೀಡಿ : ಜಮೀನು ಗುತ್ತಿಗೆ ಆದೇಶ ಹಿಂದಕ್ಕೆ ಪಡೆಯಿರಿ : ತಪ್ಪಿದಲ್ಲಿ ಚುನಾವಣೆಯಲ್ಲಿ ನಮ್ಮದೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ*

ಮಾರ್ಚ್ 22, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.22 NEWS DESK :  ಅನ್ನಭಾಗ್ಯ, ಬಸ್ ನಲ್ಲಿ ಉಚಿತ ಪ್ರಯಾಣ ಭಾಗ್ಯ, ಮಾಸಿಕ ರೂ.2 ಸಾವಿರ ಭಾಗ್ಯ ನೀಡುತ್ತಿರುವ ಸರಕಾರ ಬಡವರಿಗೆ ಭೂಮಿಭಾಗ್ಯ ಯಾಕೆ ನೀಡುತ್ತಿಲ್ಲವೆಂದು ಪ್ರಶ್ನಿಸಿರುವ ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ, ಉಳ್ಳವರಿಗೆ ಜಮೀನು ಗುತ್ತಿಗೆ ನೀಡುವ ಆದೇಶವನ್ನು ಹಿಂದಕ್ಕೆ ಪಡೆಯದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಿವೇಶನ ಮತ್ತು ವಸತಿ ರಹಿತರು ನಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಹೆಚ್.ಬಿ.ರಮೇಶ್ ನಿರ್ವಸತಿಗ ಕಾರ್ಮಿಕರಿಗೆ, ಬಡವರಿಗೆ ಅನ್ಯಾಯವೆಸಗುವ ರಾಜ್ಯ ಸರ್ಕಾರದ ‘ಪ್ಲಾಂಟೇಶನ್ ಬೆಳೆಗಳ ಜಮೀನು ಗುತ್ತಿಗೆ’ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಕೊಡಗು ಜಿಲ್ಲೆಯಲ್ಲಿ ಸಹಸ್ರಾರು ಕಾರ್ಮಿಕರು ಸೂರಿಲ್ಲದೆ, ವಿವಿಧ ತೋಟಗಳ ಲೈನ್‍ಮನೆಗಳಲ್ಲಿ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಇತ್ತೀಚೆಗೆ ಚೆರಿಯಪರಂಬು ವಿಭಾಗದಲ್ಲಿ ಬಡವರ್ಗದ ಮಂದಿಯ ಗುಡಿಸಲುಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಹೋರಾಟಗಳನ್ನು ನಡೆಸಲಾಗಿದೆ. ಇದರ ನಡುವೆ ಹಿಂದಿನ ಬಿಜೆಪಿ ಸರ್ಕಾರ ಪ್ರಸ್ತಾಪಿಸಿದ್ದ ಪ್ಲಾಂಟೇಶನ್ ಬೆಳೆಗಳ ಭೂಮಿಯನ್ನು ಗುತ್ತಿಗೆ ನೀಡುವ ಪ್ರಸ್ತಾಪವನ್ನು ಈಗಿನ ಕಾಂಗ್ರೆಸ್ ಸರ್ಕಾರ ಕಾರ್ಯರೂಪಕ್ಕೆ ತರುವ ಮೂಲಕ ಶ್ರಮಿಕ ವರ್ಗಕ್ಕೆ ಅನ್ಯಾಯ ಮಾಡಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಕಂದಾಯ ಸಚಿವ ಅಶೋಕ್ ಅವರು ಪ್ಲಾಂಟೇಶನ್ ಮಾಡಿದ ಸರ್ಕಾರಿ ಜಾಗವನ್ನು ಗುತ್ತಿಗೆ ನೀಡುವ ಪ್ರಯತ್ನಕ್ಕೆ ಮುಂದಾಗಿದ್ದರು. ಈಗಿನ ಸರ್ಕಾರ ಇದೇ ಮಾ.12 ರಂದು ಹೊರಡಿಸಿರುವ ಆದೇಶದಲ್ಲಿ 25 ಏಕರೆ ವರೆಗಿನ ಪ್ಲಾಂಟೇಶನ್ ಮಾಡಿದ ಸರ್ಕಾರಿ ಜಾಗವನ್ನು ಭೂ ಹಿಡುವಳಿದಾರರಿಗೆ ನೀಡಲು ಮುಂದಾಗಿದೆಯೆಂದು ಆಕ್ಷೇಪ ವ್ಯಕಪಡಿಸಿದರು.
ಈ ಆದೇಶದಲ್ಲಿ ಒಂದು ಏಕರೆ ಜಾಗ ಗುತ್ತಿಗೆ ಪಡೆಯುವವರಿಗೆ ವಾರ್ಷಿಕ 1 ಸಾವಿರ ರೂ., 1 ರಿಂದ 5 ಏಕರೆ ವರೆಗೆ 1500 ರೂ., 5 ರಿಂದ 10 ಏಕರೆಗೆ 2 ಸಾವಿರ ರೂ., 10 ರಿಂದ 15 ಏಕರೆಗೆ 25 ಸಾವಿರ ರೂ., 15 ರಿಂದ 20 ಏಕರೆಗೆ 3 ಸಾವಿರ ಹಾಗೂ 20 ರಿಂದ 25 ಏಕರೆವರೆಗೆ ಗುತ್ತಿಗೆ ಪಡೆಯುವವರಿಗೆ 3500 ರೂ. ಗುತ್ತಿಗೆ ಮೊತ್ತ ನಿಗದಿ ಪಡಿಸಿದೆ. ಬಡ ವರ್ಗದ ಮಂದಿಗೆ ಇದೇ ಜಾಗವನ್ನು ಹೆಚ್ಚಿನ ಗುತ್ತಿಗೆ ಮೊತ್ತಕ್ಕೆ ನೀಡಲಿ ನಾವೇ ಅದನ್ನು ಪಡೆಯುವುದಾಗಿ ತಿಳಿಸಿದರು.
ಜಾಗವಿಲ್ಲ ಎನ್ನುತ್ತಲೆ ಗುತ್ತಿಗೆ ನೀಡಲು ಮುಂದಾದ ಸರ್ಕಾರ-ಕಳೆದ ಹಲವಾರು ವರ್ಷಗಳಿಂದ ನಿರ್ವಸತಿಗ ಕೂಲಿ ಕಾರ್ಮಿಕರು, ಲೈನ್ ಮನೆಯಲ್ಲಿ ನೆಲೆಸಿರುವ ಕಾರ್ಮಿಕರು ನಿವೇಶನಕ್ಕಾಗಿ ಸರ್ಕಾರವನ್ನು ಒತ್ತಾಯಿಸುತ್ತಲೆ ಬಂದಿದ್ದಾರೆ. ಈ ಎಲ್ಲಾ ಸಂದರ್ಭಗಳಲ್ಲಿ ಅಗತ್ಯ ಸರ್ಕಾರಿ ಜಾಗವಿಲ್ಲವೆನ್ನುವ ಕಾರಣಗಳನ್ನು ನೀಡುತ್ತಾ ಬಂದಿರುವ ಸರ್ಕಾರ, ಇದೀಗ ಒತ್ತುವರಿ ಮಾಡಿಕೊಂಡು ಪ್ಲಾಂಟೇಶನ್ ಮಾಡಿದ ಜಾಗವನ್ನು ಉಳ್ಳವರಿಗೆ ಗುತ್ತಿಗೆ ನೀಡಲು ಮುಂದಾಗಿದೆ ಎಂದರು.
ಸಮಿತಿಯ ಮತ್ತೊಬ್ಬ ಸಂಚಾಲಕ ವೈ.ಕೆ.ಗಣೇಶ್ ಮಾತನಾಡಿ, ಸರ್ಕಾರದ ಈ ಆದೇಶ ನಿವೇಶನ ರಹಿತರಿಗೆ ಬಹುದೊಡ್ಡ ಹೊಡೆತವನ್ನು ನೀಡಿದೆ. ಉಳ್ಳವರಿಗೆ ಮತ್ತೆ ಸರ್ಕಾರಿ ಪ್ಲಾಂಟೇಶನ್ ಜಾಗವನ್ನು ಗುತ್ತಿಗೆ ನೀಡುತ್ತಿರುವುದಾದರು ಯಾಕೆ, ಆದಿವಾಸಿಗಳು ಹಾಗೂ ಬಡ ಕೂಲಿ ಕಾರ್ಮಿಕರ ಬಗ್ಗೆ ಸರಕಾರಕ್ಕೆ ಕಾಳಜಿ ಇಲ್ಲವೇ ಎಂದು ಪ್ರಶ್ನಿಸಿದರು.
ಸಿಪಿಐ ಜಂಟಿ ಕಾರ್ಯದರ್ಶಿ ರಮೇಶ್ ಮಾಯಮುಡಿ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 5 ಏಕರೆ ಸರ್ಕಾರಿ ಪ್ಲಾಂಟೇಶನ್ ಜಾಗವನ್ನಷ್ಟೆ ಗುತ್ತಿಗೆ ನೀಡಲು ಉದ್ದೇಶಿಸಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಈ ಮಿತಿಯನ್ನು 25 ಏಕರೆಗೆ ವಿಸ್ತರಿಸಿರುವುದು ಸಮಂಜಸವಲ್ಲ. ಜಿಲ್ಲೆಯಲ್ಲಿ 65 ಸಾವಿರಕ್ಕೂ ಹೆಚ್ಚಿನ ಬಡ ನಿರ್ವಸತಿಗ ಕುಟುಂಬಗಳಿದ್ದು, ಇವರಲ್ಲಿ ಬಹುತೇಕ ಮಂದಿ ಆಯಾ ಗ್ರಾಮ ಪಂಚಾಯ್ತಿಗಳಿಗೆ ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆ ಸರ್ಕಾರ ತನ್ನ ಆದೇಶವನ್ನು ರದ್ದುಗೊಳಿಸಿ, ಒತ್ತುವರಿ ಸರ್ಕಾರಿ ಪ್ಲಾಂಟೇಶನ್ ಜಾಗವನ್ನು ನಿರ್ವಸತಿಗ ಕಾರ್ಮಿಕರಿಗೆ ಒದಗಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಂಬೇಡ್ಕರ್ ವಾದದ ಜಿಲ್ಲಾ ಸಂಚಾಲಕ ಹೆಚ್.ಆರ್.ಶಿವಣ್ಣ ಮಾತನಾಡಿ, ಸರ್ಕಾರ ತನ್ನ ಆದೇಶ ಹಿಂದಕ್ಕೆ ಪಡೆಯದಿದ್ದಲ್ಲಿ, ಕೊಡಗನ್ನು ಒಳಗೊಂಡಂತೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ವಿಭಾಗದ ಲಕ್ಷಾಂತರ ಮಂದಿ ಕಾರ್ಮಿಕ ಸಮೂಹ ತೀವ್ರ ರೀತಿಯ ಹೋರಾಟ ನಡೆಸಲಿದೆ ಎಂದರು.
ದಸಂಸ ವಿಭಾಗೀಯ ಸಂಚಾಲಕ ಹೆಚ್.ಎಸ್.ಕೃಷ್ಣಪ್ಪ ಮಾತನಾಡಿ, ಒತ್ತುವರಿ ಸರ್ಕಾರಿ ಜಾಗವನ್ನು ತೆರವುಗೊಳಿಸಿ, ನಿರ್ವಸತಿಗ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳನ್ನು ನಡೆಸಲು 5 ಏಕರೆ ಜಾಗವನ್ನು ನೀಡಲು ಸರ್ಕಾರ ಮುಂದಾಗಬೇಕು. ಉಳ್ಳವರ ಪರವಾಗಿರುವ ಆದೇಶ ಹಿಂಪಡೆಯದಿದ್ದಲ್ಲಿ “ವಿಧಾನ ಸೌಧ” ಚಲೋ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ದಸಂಸ ಸಂಚಾಲಕ ಹೆಚ್.ಆರ್.ಪರಶುರಾಮ್ ಮಾತನಾಡಿ, ಲೋಕಸಭಾ ಚುನಾವಣೆಗೂ ಮೊದಲು ಸರಕಾರ ಉಳ್ಳವರ ಪರವಾಗಿರುವ ಆದೇಶವನ್ನು ಹಿಂದಕ್ಕೆ ಪಡೆದು ನಿವೇಶನ ರಹಿತರಿಗೆ ಭೂಮಿ ನೀಡಬೇಕು. ತಪ್ಪಿದಲ್ಲಿ ಮತದಾನದ ವಿಚಾರದಲ್ಲಿ ನಮ್ಮದೇ ಆದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.