Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಜಲ ಸಂರಕ್ಷಣಾ ದಿನಾಚರಣೆ: ಜಲಮೂಲ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಟಿ.ಜಿ.ಪ್ರೇಮಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಜಲ ಸಂರಕ್ಷಣಾ ದಿನಾಚರಣೆ: ಜಲಮೂಲ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಟಿ.ಜಿ.ಪ್ರೇಮಕುಮಾರ್

ಮಾರ್ಚ್ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, ಮಾ.22 NEWS DESK :  ಪ್ರತಿಯೊಬ್ಬರೂ ನಾಳಿನ ಉತ್ತಮ ಭವಿಷ್ಯತ್ತಿಗಾಗಿ ನೀರನ್ನು ಮಿತವಾಗಿ ಬಳುಸುವುದರ ಮೂಲಕ ಜಲ ಸಂರಕ್ಷಣೆಗಾಗಿ ನಾವು ಸಾಮೂಹಿಕವಾಗಿ ಜಲ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದು ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು.
ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕ, ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕ ಸಹಯೋಗದೊಂದಿಗೆ “ಶಾಂತಿಗಾಗಿ ನೀರು” ಎಂಬ ಧ್ಯೇಯದೊಂದಿಗೆ ವಿಶ್ವ ಜಲ ದಿನ:2024ರ ಅಂಗವಾಗಿ ನಡೆದ ಜಲ ಸಂರಕ್ಷಣಾ ಜಾಗೃತಿ ಆಂದೋಲನದಲ್ಲಿ ನೀರಿನ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿ ಜಲ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ನಿತ್ಯ ಬಳಸುವ ನೀರನ್ನು ಮರುಬಳಕೆ ಮಾಡಬೇಕು. ಮಿತಿಮೀರಿ ಕೊಳವೆ ಬಾವಿ ತೆಗೆಸುವುದರಿಂದ ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಪ್ರಕೃತಿಯಲ್ಲಿ ಅಮೂಲ್ಯವಾಗಿರುವ ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಜಲಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಟಿ.ಜಿ.ಪ್ರೇಮಕುಮಾರ್ ಹೇಳಿದರು.
ಪ್ರಕೃತಿಯ ಅತ್ಯಮೂಲ್ಯ ಸಂಪತ್ತಾದ ನೀರನ್ನು ಅಪವ್ಯಯ ಮಾಡದೇ ಸಂರಕ್ಷಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ನೀರನ್ನು ಸಂಗ್ರಹಿಸಿಡಬೇಕಾಗಿದೆ. ಮಳೆಯ ಸಂಗ್ರಹಣೆ ಹಾಗೂ ಅಂತರ್ಜಲ ಸಂರಕ್ಷ ಣೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಪ್ರಸಕ್ತ ವರ್ಷ ಬೇಸಿಗೆಗೂ ಮುನ್ನ ಜೀವ ನದಿ ಕಾವೇರಿ ಸೇರಿದಂತೆ ನಾಡಿನ ಎಲ್ಲಾ ನದಿ ಗಳು, ಕೆರೆಗಳು ಹಾಗೂ ಜಲಮೂಲಗಳು ಕ್ಷೀಣಿಸುತ್ತಿವೆ. ಈ ದಿಸೆಯಲ್ಲಿ ಅಂತರ್ಜಲ ಮತ್ತು ಜಲಮೂಲಗಳ ಸಂರಕ್ಷಣೆ ದೃಷ್ಠಿಯಲ್ಲಿ ಜನರಲ್ಲಿ ನೀರಿನ ಮಿತ ಬಳಕೆ ಮತ್ತು ಜಲ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ತಿಳಿಸಿದರು.
ಜಲ ದಿನದ ಮಹತ್ವ ಕುರಿತು ಮಾತನಾಡಿದ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಜನರಲ್ಲಿ ಜಲ ಸಂರಕ್ಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾ.22 ರಂದು ವಿಶ್ವ ಜಲ ದಿನ ಎಂದೂ ಕರೆಯುವ ಅಂತರಾಷ್ಟ್ರೀಯ ಜಲ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ನಾವು ಜಲ ಸಂರಕ್ಷಣೆ ಬಗ್ಗೆ ತ್ವರಿತಗತಿಯಲ್ಲಿ ಎಚ್ಚೆತ್ತುಕೊಳ್ಳಬೇಕಾದ ಕಾಲ ಸನ್ನಿಹಿತವಾಗಿದೆ. ವಿದ್ಯಾರ್ಥಿಗಳು ನೀರಿನಮಿತ ಬಳಕೆ ಕುರಿತು ಜನರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ರಮ್ಯ ಹೇಳಿದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ ಹಾಗೂ ವಿದ್ಯಾರ್ಥಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.28: ಕೊಡಗಿನ ಸುಗ್ಗಿ ಸಂಭ್ರಮ ಹಾಗೂ ಸಾಂಪ್ರದಾಯಿಕ ಶ್ರೀಮಂತಿಕೆಯ ಪ್ರತೀಕವಾದ ಪುತ್ತರಿ ಹಬ್ಬದ ಸಡಗರ ಅಮ್ಮತ್ತಿ…

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್‌ನ 147ನೇ ವಾರ್ಷಿಕ ಮಹಾಸಭೆ; ಪಶ್ಚಿಮಘಟ್ಟ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನವೂ ರಕ್ಷಣೆಯಾಗಬೇಕು: ಸಂಸದ ಯದುವೀರ್ ಒಡೆಯರ್

ನವೆಂಬರ್ 28, 2026

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.