Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*
  • *ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*
  • *ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*
  • *ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*
  • *ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*
  • *ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಕ್ಷಿಣ ಕೊಡಗಿನಲ್ಲಿ ಯದುವೀರ್ ಪ್ರಚಾರ ಬಿರುಸು : ರಾಮ ರಾಜ್ಯದ ಕನಸು ನನಸಾಗುತ್ತಿದೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ದಕ್ಷಿಣ ಕೊಡಗಿನಲ್ಲಿ ಯದುವೀರ್ ಪ್ರಚಾರ ಬಿರುಸು : ರಾಮ ರಾಜ್ಯದ ಕನಸು ನನಸಾಗುತ್ತಿದೆ*

ಮಾರ್ಚ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮಾ.23 NEWS DESK : ರಾಮ ರಾಜ್ಯದ ಕನಸು ನನಸಾಗುತ್ತಿದೆ, ದೇಶವನ್ನು ಮತ್ತಷ್ಟು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದು ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ತಿಳಿಸಿದ್ದಾರೆ.
ತಿತಿಮತಿ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆದ ತಿತಿಮತಿ, ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಾವೇರಿ ತವರು ಕೊಡಗು ಮತ್ತು ಮೈಸೂರಿಗೂ ಅವಿನಾಭಾವ ಸಂಬ0ಧವಿದೆ. ಈ ಭಾಗದ ಜನರ ಸೇವೆ ಮಾಡುವ ಆಕಾಂಕ್ಷೆಯೊ0ದಿಗೆ ಚುನಾವಣೆ ಕಣಕ್ಕೆ ಇಳಿದಿದ್ದೇನೆ. ಪಕ್ಷದ ಆತ್ಮ ಬಲವಾಗಿರುವ ಕಾರ್ಯಕರ್ತರು ದೇಶ ಮುನ್ನಡೆಸುವ ಮತ್ತು ಅಭಿವೃದ್ಧಿಪಡಿಸುವ ಕರ್ತವ್ಯಕ್ಕಾಗಿ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಪ್ರಪಂಚವೇ ನಿಬ್ಬೆರಗಾಗಿ ನೋಡುವ ವಾತಾವರಣ ಸೃಷ್ಟಿಯಾಗಿದೆ. ಹಿಂದೆ ಅರಸು ಮನೆತನದವರು ಮೈಸೂರು ರಾಜ್ಯವನ್ನು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರು. ಸ್ವದೇಶಿ ಉತ್ಪನ್ನಗಳಿಗೆ ಸಾಕಷ್ಟು ಒತ್ತು ನೀಡಿ ಮೈಸೂರು ಬ್ರಾಂಡ್‌ನಲ್ಲಿ ಪ್ರಚಾರ ಮತ್ತು ಮಾರಾಟ ಮಾಡಲಾಗುತ್ತಿತ್ತು. ಅದೇ ಮಾದರಿಯಲ್ಲಿ ಇಂದು ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಸ್ವದೇಶಿ ಉತ್ಪನ್ನಗಳ ಬಳಕೆಗೆ ಆದ್ಯತೆಯನ್ನು ನೀಡುತ್ತಿದೆ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪಣತೊಟ್ಟಿದೆ ಎಂದು ಹೇಳಿದರು.
ರಾಮ ರಾಜ್ಯದ ಕನಸು ನನಸಾಗುತ್ತಾ ಸಾಗುತ್ತಿದೆ. ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಪ್ರಪಂಚಕ್ಕೆ ತಿಳಿಸಲಾಗಿದೆ. ಸರ್ಕಾರದ ಯೋಜನೆಗಳು ಮತ್ತು ಉದ್ದೇಶಗಳನ್ನು ಜನರಿಗೆ ತಿಳಿಸುವ ಕೆಲಸ ಕಾರ್ಯಕರ್ತರಿಂದ ನಿರಂತರವಾಗಿ ಆಗಬೇಕಾಗಿದೆ ಎಂದರು.
ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಮಾತನಾಡಿ ಚುನಾವಣೆಯ ಯುದ್ಧಕ್ಕೆ ದೇಶವೇ ಸಜ್ಜಾಗಿದೆ. ದೇಶದ ಸುಧಾರಣೆಗಾಗಿ ಮೋದಿ ಸರ್ಕಾರದ ಗೆಲುವಿಗೆ ಕಾರ್ಯಕರ್ತರು ಪರಿಶ್ರಮ ಪಡಬೇಕಾಗಿದೆ. ಕೊಡಗಿನಲ್ಲಿ ಕಳೆದ 20 ವರ್ಷಗಳ ಅವಧಿಯಲ್ಲಿ ಪ್ರತಿ ಕಾಲೋನಿಗಳಿಗೆ ಕಾಂಕ್ರಿಟ್ ರಸ್ತೆ, ಕುಡಿಯುವ ನೀರು, ಶೌಚಾಲಯ, ಸಮುದಾಯ ಭವನ ನೀಡಲಾಗಿದೆ. ದೇವಸ್ಥಾನ, ಚರ್ಚ್, ಮಸೀದಿಗಳ ಅಭಿವೃದ್ಧಿಯು ನಿರಂತರವಾಗಿ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಕೊಡಗಿನಲ್ಲಿ ಬಿಜೆಪಿಯ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಚ್ಯುತಿ ಬಾರದ ಹಾಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ದೇಶದಲ್ಲಿ ಜನರು ಶಾಂತಿಯುತವಾದ ಬದುಕು ನಡೆಸಬೇಕೆಂದರೆ ಮೋದಿ ಸರ್ಕಾರದ ಅಗತ್ಯವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡು ಎಂಟು ತಿಂಗಳ ಅವಧಿಯಲ್ಲಿ ವಿಧಾನಸೌದದಲ್ಲಿ ಪಾಕಿಸ್ತಾನಕ್ಕೆ ಜಯಘೋಷ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಮಂಡೇಪ0ಡ ಸುಜಾ ಕುಶಾಲಪ್ಪ ಮಾತನಾಡಿ, ದೇಶದ ಭದ್ರತೆಗಾಗಿ ಮತ್ತು ಉಳಿವಿಗಾಗಿ ಮೋದಿ ಸರ್ಕಾರವನ್ನು ಬೆಂಬಲಿಸುವ ಅಗತ್ಯವಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ಜಿಲ್ಲಾ ಉಪಾಧ್ಯಕ್ಷ ಕಿಲನ್ ಗಣಪತಿ, ರಾಜ್ಯ ಶಿಸ್ತು ಸಮಿತಿ ಸದಸ್ಯ ಪಟ್ಟಡ ರೀನಾ ಪ್ರಕಾಶ್, ಮಾಪಂಗಡ ಯಮುನಾ ಚಂಗಪ್ಪ, ಚುನಾವಣಾ ಉಸ್ತುವಾರಿಗಳಾದ ಡಾ.ವಿಕಾಸ್, ಡಾ.ವಸಂತ್ ಕುಮಾರ್, ಪಕ್ಷದ ಮುಖಂಡ ಅಡ್ಡಂಡ ಕಾರ್ಯಪ್ಪ, ಕುಂಞ0ಗಡ ಅರುಣ್ ಭೀಮಯ್ಯ, ತಾಲ್ಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು ಗಣಪತಿ, ಶಕ್ತಿ ಕೇಂದ್ರದ ಪ್ರಮುಖರು, ಸಹ ಪ್ರಮುಖರು, ಭೂತ್ ಅಧ್ಯಕ್ಷರುಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು, ಪಕ್ಷದ ಕಾರ್ಯಕರ್ತರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*

ಮಾರ್ಚ್ 3, 2026

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 2026

*ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*

ಮಾರ್ಚ್ 3, 2026

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.03:-ಬಲಿಜ ಸಮಾಜದ ವಿದ್ಯಾರ್ಥಿಗಳ ಉದ್ಯೋಗದ ಅನುಕೂಲಕ್ಕಾಗಿ 2ಎ ಹಿಂದುಳಿದ ವರ್ಗದ ಮೀಸಲಾತಿ ನೀಡುವಂತಾಗಬೇಕು ಎಂದು ಯೋಗಿ…

*ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*

ಮಾರ್ಚ್ 3, 2026

*ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*

ಮಾರ್ಚ್ 3, 2026

*ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*

ಮಾರ್ಚ್ 3, 2026

*ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*

ಮಾರ್ಚ್ 3, 2026

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.