Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದಿಂದ 88ನೇ ಪುಸ್ತಕ “ಚುಪ್ಪಿ ಕತೆರ ಜೊಪ್ಪೆ” ಬಿಡುಗಡೆ : ಯುವ ಬರಹಗಾರರಿಗೆ ಪ್ರೋತ್ಸಾಹ ನೀಡಲು ಸದಾ ಸಿದ್ಧ : ಬೊಳ್ಳಜಿರ ಬಿ.ಅಯ್ಯಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದಿಂದ 88ನೇ ಪುಸ್ತಕ “ಚುಪ್ಪಿ ಕತೆರ ಜೊಪ್ಪೆ” ಬಿಡುಗಡೆ : ಯುವ ಬರಹಗಾರರಿಗೆ ಪ್ರೋತ್ಸಾಹ ನೀಡಲು ಸದಾ ಸಿದ್ಧ : ಬೊಳ್ಳಜಿರ ಬಿ.ಅಯ್ಯಪ್ಪ*

ಮಾರ್ಚ್ 25, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.25 NEWS DESK : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಯುವ ಬರಹಗಾರರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು, ಯುವ ಬರಹಗಾರರಿಗೆ ಪ್ರೋತ್ಸಾಹ ನೀಡಲು ಕೊಡವ ಮಕ್ಕಡ ಕೂಟ ಸದಾ ಸಿದ್ಧವಿದೆ ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ 88ನೇ ಪುಸ್ತಕ ಹಾಗೂ ಲೇಖಕಿ ಯಶೋಧ ಪೇರಿಯಂಡ ಅವರ ಪ್ರಥಮ ಪುಸ್ತಕ “ಚುಪ್ಪಿ ಕತೆರ ಜೊಪ್ಪೆ” ಯ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ರಚನೆಗೊಂಡ ಒಟ್ಟು 87 ಪುಸ್ತಕಗಳನ್ನು ಕೂಟದ ಮೂಲಕ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೊಸ ಬರಹಗಾರರೊಂದಿಗೆ ಯುವ ಬರಹಗಾರರನ್ನೂ ಪರಿಚಯಿಸುತ್ತಾ ಬರಲಾಗಿದೆ. ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಯುವ ಬರಹಗಾರರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕಾಗಿದೆ, ಆ ಮೂಲಕ ಸಾಹಿತ್ಯ ಕೃಷಿ ಆಗಬೇಕಾಗಿದೆ. ಇದೇ ಕಾರಣಕ್ಕೆ ಕೂಟ ಯುವ ಬರಹಗಾರರಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದರು.
ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯ, ಸಾಹಿತ್ಯ, ಸಂಸ್ಕೃತಿಯ ಬೆಳೆವಣಿಗೆಗಾಗಿ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ 100 ಪುಸ್ತಕಗಳ ಗಡಿ ಮುಟ್ಟುವ ಗುರಿ ಹೊಂದಿದೆ. ಉಳಿದಿರುವ 12 ಪುಸ್ತಕಗಳು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಮತ್ತಷ್ಟು ಬರಹಗಾರರು ಮುಂದೆ ಬಂದರೆ ಪ್ರೋತ್ಸಾಹ ನೀಡಲಾಗುವುದು ಎಂದರು.
ಕೊಡವ ಮಕ್ಕಡ ಕೂಟ ಪ್ರಕಟಿಸಿರುವ 87 ಪುಸ್ತಕಗಳಲ್ಲಿ ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು, ಚಿಗುರೆಲೆಗಳು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ, ಅಗ್ನಿಯಾತ್ರೆ ಪುಸ್ತಕಕ್ಕೆ “ಗೌರಮ್ಮ ದತ್ತಿ ನಿಧಿ “ಪ್ರಶಸ್ತಿ ಲಭಿಸಿದೆ. ನಾಲ್ಕು ಪುಸ್ತಕಗಳು ಕೊಡವ ಸಿನಿಮಾವಾಗಿದೆ.
ಕೊಡವ ಕ್ರೀಡಾ ಕಲಿಗಳು, ಪುಣ್ಯಕ್ಷೇತ್ರ ಪರಿಚಯ ಸೇರಿದಂತೆ ಹಲವು ದಾಖಲೀಕರಣ ಪುಸ್ತಕ, ಸಾಧಕರ ವಿವರದ ಪುಸ್ತಕ ಕೊಡಗಿನ ಹಾಗೂ ಕೊಡವ ಆಚಾರ, ವಿಚಾರ ಸಂಬಂಧಪಟ್ಟಂತ ಪುಸ್ತಕ, ಕೊಡಗಿನ ಎರಡು ಮಹಾವೀರ ಚಕ್ರ ಪುರಸ್ಕೃತ ವೀರ ಯೋಧರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಹೇಳಿದರು. ಅಲ್ಲದೇ ಕೊಡವ ಸಾಧಕ ಯುವಕ-ಯುವತಿಯರನ್ನು ಸೇರಿದಂತೆ ಹಲವು ಸಾಧಕರನ್ನು ಸನ್ಮಾನಿಸಿ, ಗೌರವಿಸಿದೆ ಎಂದು ಅಯ್ಯಪ್ಪ ಹೇಳಿದರು.
“ಚುಪ್ಪಿ ಕತೆರ ಜೊಪ್ಪೆ” ಪುಸ್ತಕದ ಲೇಖಕಿ ಯಶೋಧ ಪೇರಿಯಂಡ ಮಾತನಾಡಿ, ಈ ಪುಸ್ತಕ ವಿಭಿನ್ನ ವಿಷಯಗಳ ಸಣ್ಣಕಥೆಗಳ ಸಂಗ್ರಹವಾಗಿದ್ದು, ಮಕ್ಕಳ ಸಾಹಸ, ಹೆಣ್ಣುಮಕ್ಕಳ ಸಬಲೀಕರಣ, ಜೀವನ ಪರಿವರ್ತನೆ ಮತ್ತಿತರ ವಿಚಾರಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.
ಚಿಕ್ಕವಯಸ್ಸಿನಿಂದಲೇ ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದ ನಾನು ಸಣ್ಣ ಸಣ್ಣ ಕಥೆಗಳನ್ನು ಬರೆಯಲು ಪ್ರಾರಂಭಿಸಿದೆ, ಹಲವು ಕಥೆಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಕೆಲವು ಸಮಯ ಬರೆಯುವುದನ್ನು ನಿಲ್ಲಿಸಿದ ನಾನು ತಂದೆ-ತಾಯಿಯ ಪ್ರೇರಣೆಯಿಂದ ಹಾಗೂ ಹಿತೈಷಿಗಳ ಪ್ರೋತ್ಸಾಹದಿಂದ ಮತ್ತೆ ಬರೆಯುವುದನ್ನು ಪ್ರಾರಂಭಿಸಿರುವುದಾಗಿ ತಿಳಿಸಿದರು. ತಂದೆ ಪೇರಿಯಂಡ ಸುಬ್ರಮಣಿ ಅವರ 75ನೇ ಜನ್ಮದಿನಾಚರಣೆ ಪ್ರಯುಕ್ತ ಪುಸ್ತಕವನ್ನು ಹೊರತರಲಾಗುತ್ತಿದೆ ಎಂದರು.
ಇದೇ ಸಂದರ್ಭ ಪುಸ್ತಕ ಬಿಡುಗಡೆಗೆ ಸಹಕರಿಸಿದ ಕೊಡವ ಮಕ್ಕಡ ಕೂಟ ಸಂಘಟನೆಗೆ ಧನ್ಯವಾದ ಸಲ್ಲಿಸಿದರು.
ಸಮಾಜ ಸೇವಕ ಚಂಗಂಡ ಗಿರೀಶ್ ತಮ್ಮಯ್ಯ ಮಾತನಾಡಿ, ಬರಹವನ್ನು ಪುಸ್ತಕದ ರೂಪದಲ್ಲಿ ಹೊರತರುವುದು ಕಷ್ಟದ ಕೆಲಸ, ಆದರೆ ಕೊಡವ ಮಕ್ಕಡ ಕೂಟ ಇದನ್ನು ಸುಲಭ ಮಾಡಿಕೊಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಲೇಖಕಿ ಯಶೋಧ ಪೇರಿಯಂಡ ಅವರಿಂದ ಮತ್ತಷ್ಟು ಪುಸ್ತಕಗಳು ಹೊರಬರುವಂತಾಗಲಿ ಎಂದು ಹಾರೈಸಿದರು.
ಲೇಖಕಿ ಯಶೋಧ ಪೇರಿಯಂಡ ಅವರ ತಂದೆ ಪೇರಿಯಂಡ ಸುಬ್ರಮಣಿ ಹಾಗೂ ತಾಯಿ ಪೇರಿಯಂಡ ಕನ್ನು ಭೋಜಮ್ಮ ಅವರು ಪುಸ್ತಕ ಬಿಡುಗಡೆಗೊಳಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಮುಕ್ಕಾಟಿರ ಅಂಜು ಸುಬ್ರಮಣಿ ಉಪಸ್ಥಿತರಿದ್ದರು.
ಪರಿಚಯ ::
ಯಶೋಧ ಪೇರಿಯಂಡ :: ಬಲಂಬೇರಿಯ ಪೇರಿಯಂಡ ಒಕ್ಕದ ಸುಬ್ರಮಣಿ ಕನ್ನು ಬೋಜಮ್ಮ (ತಾಮನೆ : ಮಡೆಯಂಡ) ದಂಪತಿಯ ಪುತ್ರಿಯಾಗಿರುವ ಯಶೋಧ ಅವರಿಗೆ ಸಹೋದರ ವಿನು ಮುದ್ದಪ್ಪ ಹಾಗೂ ಸಹೋದರಿ ಅನಿತಾ (ಬಾಕೆಮನೆ ಕೇಚಿಟ್ಟಿರ ಪೊನ್ನಂಪೇಟೆ) ಇದ್ದಾರೆ.
ಇವರು ಪ್ರಾಥಮಿಕ ವಿದ್ಯಾಭ್ಯಾಸ ಬಲಂಬೇರಿ ಸರ್ಕಾರಿ ಸ್ಕೂಲ್, ಪ್ರೌಢ ವಿದ್ಯಾಭ್ಯಾಸ ಪಾರಾಣೆ ಹೈಸ್ಕೂಲ್, ಪಿಯುಸಿ ಮೂರ್ನಾಡ್ ಪಿ.ಯು.ಕಾಲೇಜ್, ಬಿ.ಕಾಂ ಪದವಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಮುಗಿಸಿದ್ದಾರೆ.
ಬೆಂಗಳೂರಿನ ಜಾಲಹಳ್ಳಿಯಲ್ಲಿ ಕ್ಯಾಂಪಸ್ ಕಂಪ್ಯೂಟರ್ ಸೆಂಟರ್‍ನಲ್ಲಿ ಕಂಪ್ಯೂಟರ್ ತರಬೇತಿ ಪಡೆದಿದ್ದು, ಫ್ಯಾಷನ್ ಡಿಸೈನಿಂಗ್ ಹಾಗೂ ಬ್ಯೂಟಿಶನ್‍ನ ಅನುಶ್ರುತ ಫೌಂಡೇಶನ್ ಕರುಬರಗಳ್ಳಿಯಲ್ಲಿ, ಕರಕುಶಲ ತರಬೇತಿಯನ್ನು ವಿಶ್ವಾನಿಡಂ ಹೇರೋಹಳ್ಳಿ ಬೆಂಗಳೂರಿನಲ್ಲಿ ಮಾಡಿದ್ದಾರೆ.
ವಿಶ್ವಾನಿಡಂನಲ್ಲಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುವ ಮೂಲಕ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿರುವ ಯಶೋಧ ರಾಜ್ಯಮಟ್ಟದ ಹೈ ಜಂಪ್, ಲಾಂಗ್ ಜಂಪ್ ಕ್ರೀಡಾಪಟು, ಸ್ನಾತಕೋತ್ತರ ಪದವಿಯಲ್ಲಿರುವಾಗ ಎನ್.ಸಿ.ಸಿ.ಯಲ್ಲಿ ಭಾಗವಹಿಸಿ ಬಿ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರ ಉಮ್ಮತಾಟ್ ತಂಡದಲ್ಲಿ ಭಾಗವಹಿಸಿ ಹಲವುಕಡೆ ಪ್ರದರ್ಶನ ನೀಡಿದ್ದಾರೆ.
ಇವರು ಬರೆದ ಕಥೆ, ಕವನ ಬ್ರಹ್ಮಗಿರಿ, ಪೂಮಾಲೆ, ಶಕ್ತಿ ಪತ್ರಿಕೆ, ಕೊಡವ ಅಕಾಡೆಮಿಯ ಪೊಂಗುರಿಯಲ್ಲಿ ಪ್ರಕಟವಾಗಿದೆ. ಆಕಾಶವಾಣಿಯಲ್ಲೂ ಪ್ರಸಾರವಾಗಿದೆ. ಯಶೋಧ ಅವರಿಗೆ ಪುಣ್ಯ ಹಾಗೂ ಸುದರ್ಶನ್ ಎಂಬ ಇಬ್ಬರು ಮಕ್ಕಳಿದ್ದು, ಪ್ರಸ್ತುತ ಇವರು ಮೂರ್ನಾಡು ಟಿ.ಎ.ಪಿ.ಸಿ.ಎಂ.ಎಫ್ ಸೊಸೈಟಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.