Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕಸಭಾ ಚುನಾವಣೆ : ಮಾ.28 ರಿಂದ ನಾಮಪತ್ರ ಸಲ್ಲಿಕೆ ಆರಂಭ : ಕೊಡಗಿನಲ್ಲಿ ಒಟ್ಟು ಮತದಾರರ ಸಂಖ್ಯೆ 4,66,154*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕಸಭಾ ಚುನಾವಣೆ : ಮಾ.28 ರಿಂದ ನಾಮಪತ್ರ ಸಲ್ಲಿಕೆ ಆರಂಭ : ಕೊಡಗಿನಲ್ಲಿ ಒಟ್ಟು ಮತದಾರರ ಸಂಖ್ಯೆ 4,66,154*

ಮಾರ್ಚ್ 25, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.25 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.
ನಾಮಪತ್ರ ಸಲ್ಲಿಸಲು ಏ.4 ಕೊನೆಯ ದಿನವಾಗಿದೆ. ಏ.5 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏ.8 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏ.26 ರಂದು ಮತದಾನ ನಡೆಯಲಿದ್ದು, ಜೂ.4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ 4,66,154 ಮತದಾರರು ಇದ್ದು, ಇವರಲ್ಲಿ 2,28,478 ಪುರುಷ ಮತದಾರರು ಮತ್ತು 2,37,660 ಮಹಿಳಾ ಮತದಾರರು ಇದ್ದಾರೆ. 16 ಮಂದಿ ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2,36,562 ಮತದಾರರು ಇದ್ದು, ಇವರಲ್ಲಿ 1,15,159 ಪುರುಷ ಮತದಾರರು ಮತ್ತು 1,21,394 ಮಹಿಳಾ ಮತದಾರರು ಇದ್ದು, ಇತರೆ 9 ಮಂದಿ ಮತದಾರರು ಇದ್ದಾರೆ.
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 2,29,592 ಮಂದಿ ಮತದಾರರು ಇದ್ದು, ಇವರಲ್ಲಿ 1,13,319 ಪುರುಷ ಮತದಾರರು ಮತ್ತು 1,16,266 ಮಹಿಳಾ ಮತದಾರರು ಇದ್ದಾರೆ, 7 ಮಂದಿ ಇತರೆ ಮತದಾರರು ಇದ್ದಾರೆ.
ಕೊಡಗು ಜಿಲ್ಲೆಯಲ್ಲಿ 1,357 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 1,298 ಪುರುಷ ಮತದಾರರು ಹಾಗೂ 59 ಮಹಿಳಾ ಮತದಾರರು ಇದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 622 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 596 ಪುರುಷ ಮತದಾರರು, 26 ಮಹಿಳಾ ಮತದಾರರು ಇದ್ದಾರೆ. ಹಾಗೆಯೇ ವಿರಾಜಪೇಟೆ ವಿಭಾನಸಭಾ ಕ್ಷೇತ್ರದಲ್ಲಿ 735 ಮಂದಿ ಸೇವಾ ಮತದಾರರು ಇದ್ದು, ಇವರಲ್ಲಿ 702 ಪುರುಷ ಮತದಾರರು, 33 ಮಂದಿ ಮಹಿಳಾ ಸೇವಾ ಮತದಾರರು ಇದ್ದಾರೆ.
::: 9076 ಯುವ ಮತದಾರರು :::
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 18 ರಿಂದ 19 ವಯಸ್ಸಿನ 9,076 ಯುವ ಮತದಾರರು ಇದ್ದು, 4,547 ಪುರುಷ ಯುವ ಮತದಾರರು ಮತ್ತು 4,529 ಮಹಿಳಾ ಮತದಾರರು ಇದ್ದಾರೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ವಿಶೇಷ ಚೇತನ ಮತದಾರರು ಇದ್ದಾರೆ.
ಕೊಡಗು ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳಿದ್ದು, ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ 273 ಮತಗಟ್ಟೆ ಹೊಂದಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ, ರ್ಯಾಂಪ್ ವ್ಯವಸ್ಥೆ ಕಲ್ಪಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ.
ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತದೆ.
ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿಗಳು ಪ್ರೈಯಿಂಗ್ ಸ್ಕ್ವಾಡ್, ಲೆಕ್ಕ ವೀಕ್ಷಕರ ತಂಡ, ವಿಡಿಯೋ ವಿವಿಂಗ್ ತಂಡ, ವಿಡಿಯೋ ಪರಿಶೀಲನಾ ತಂಡ, ಸಹಾಯಕ ವೆಚ್ಚ ವೀಕ್ಷಕರ ತಂಡಗಳನ್ನು ರಚಿಸಲಾಗಿದೆ.
ಜಿಲ್ಲೆಯಲ್ಲಿ 44 ಮಂದಿ ಸೆಕ್ಟರ್ ಅಧಿಕಾರಿಗಳು, 21 ಮಂದಿ ಪ್ಲೈಯಿಂಗ್ ಸ್ಕ್ವಾಡ್, 42 ಮಂದಿ ಸ್ಟಾಟಿಕ್ ಸರ್ವಿಲೆನ್ಸ್ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
::: ಅಕ್ರಮದ ಮಾಹಿತಿ ನೀಡಿ :::
ಭಾರತ ಚುನಾವಣಾ ಆಯೋಗವು ಸಿ-ವಿಜಿಲ್ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದ್ದು. ಈ ಅಪ್ಲಿಕೇಷನ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಾಗ್ರಿಗಳು, ಮದ್ಯ ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಅಪ್ಲಿಕೇಷನ್‍ನಲ್ಲಿ ವಿಡಿಯೋ ಮತ್ತು ಫೋಟೋಗಳ ಮೂಲಕ ಮಾಹಿತಿ ನೀಡಬಹುದಾಗಿದೆ.
85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಕೋವಿಡ್ ಶಂಕಿತ, ದೃಢಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಇಲಾಖೆಗಳ ನಿರತ ಅಧಿಕಾರಿ ಸಿಬ್ಬಂದಿಗಳಿಗೆ ವಿಶೇಷ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
::: ಪ್ರಮಾಣ ಪತ್ರ ಕಡ್ಡಾಯ :::
‘ಯಾವುದೇ ಚುನಾವಣಾ ಕರಪತ್ರಗಳು, ಪೋಸ್ಟರ್, ಬಿಲ್‍ಗಳಲ್ಲಿ ಪ್ರಕಾಶಕರು ಮತ್ತು ಪ್ರಕಾಶನ ಸಂಸ್ಥೆಯ ಮಾಹಿತಿಯನ್ನು ಕಡ್ಡಾಯವಾಗಿ ಮುದ್ರಿಸಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಅಭ್ಯರ್ಥಿಯ ಪರವಾಗಿ ಯಾವುದೇ ರೀತಿಯ ರಾಜಕೀಯ ಜಾಹೀರಾತನ್ನು ಪ್ರಕಟಿಸುವ/ಪ್ರಸಾರ ಮಾಡುವ ಮೊದಲು ಜಾಹೀರಾತಿನ ವಿವರವನ್ನು ಚುನಾವಣಾ ಎಂಸಿಎಂಸಿ ತಂಡದ ಗಮನಕ್ಕೆ ತಂದು ಪ್ರಮಾಣ ಪತ್ರ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.’
2024 ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪ್ರತಿಯೊಬ್ಬ ಮತದಾರರು ಸಹ ಅವರ ಹಕ್ಕನ್ನು ಚಲಾಯಿಸಲು ಅಡೆತಡೆಗಳಾಗದಂತೆ ಎಲ್ಲರೂ ಸಹ ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾಡಳಿತದಿಂದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದ ಎಲ್ಲಾ ನಿಯಮಗಳಂತೆ ಕಟ್ಟುನಿಟ್ಟಾಗಿ ಪಾಲಿಸಿ ಚುನಾವಣೆಯನ್ನು ನಡೆಸಲು ಜಿಲ್ಲೆಯ ಎಲ್ಲಾ ಮತದಾರರು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಕಾರ ಕೋರಿದೆ.
ಚುನಾವಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ www.eci.nic.in ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ www.ceokarnataka.kar.nic.in ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್ www.kodagu.nic.in ನಲ್ಲಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.