ಮಡಿಕೇರಿ ಮಾ.26 NEWS DESK : ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಬೋಗಸ್ ಶ್ವೇತಪತ್ರ ಬಿಡುಗಡೆ ಮಾಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಡುಗಡೆ ಮಾಡಿರುವ ಶ್ವೇತಪತ್ರದಲ್ಲಿ ಅರ್ಧದಷ್ಟು ಅನುದಾನ ಈ ಹಿಂದಿನ ಶಾಸಕ ಕೆ.ಜಿ.ಬೋಪಯ್ಯ ಅವರ ಅವಧಿಯದ್ದಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆ ಪೊನ್ನಣ್ಣ ಅವರು ಜನರನ್ನು ಮರುಳು ಮಾಡಲು ಶ್ವೇತಪತ್ರ ಬಿಡುಗಡೆ ಮಾಡಿದ್ದಾರೆ. ಆದರೆ ಕೊಡಗು ಜಿಲ್ಲೆಯ ಜನ ಬುದ್ದಿವಂತರಾಗಿದ್ದು, ಇದನ್ನೆಲ್ಲ ನಂಬುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಜಿಲ್ಲಾ ವಕ್ತಾರ ಅರುಣ್ ಕುಮಾರ್ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.








