Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು  : ಕುಂಡ್ಯೋಳಂಡ ಹಾಕಿ ಕಪ್ ನಮ್ಮೆ ಗೆ ಭರದ ಸಿದ್ಧತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು  : ಕುಂಡ್ಯೋಳಂಡ ಹಾಕಿ ಕಪ್ ನಮ್ಮೆ ಗೆ ಭರದ ಸಿದ್ಧತೆ*

ಮಾರ್ಚ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು  ಮಾ.27 NEWS DESK  : ಕೊಡವ ಕುಟುಂಬ ತಂಡಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ನಾಪೋಕ್ಲುವಿನಲ್ಲಿ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆ ಜರುಗಲಿದೆ.
ಪ್ರತಿವರ್ಷ ಜರುಗುವ ಹಾಕಿ ಉತ್ಸವ ಹೆಚ್ಚೆಚ್ಚು ಜನಪ್ರಿಯತೆ ಗಳಿಸಿಕೊಳ್ಳುತ್ತಿದೆ. ಹಾಕಿ ನಮ್ಮೆಯ ಆಯೋಜಕರಾದ ಕುಂಡ್ಯೋಳಂಡ ಕುಟುಂಬಸ್ಥರು ಬಿರುಸಿನ ಸಿದ್ಧತೆ ನಡೆಸಿದ್ದು, ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಮೈದಾನಗಳ ನಿರ್ಮಾಣ, ಗ್ಯಾಲರಿ, ವೇದಿಕೆ, ಸ್ಟಾಲ್‍ಗಳ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಗಳು ಭರದಿಂದ ಸಾಗುತ್ತಿವೆ.
ಮಾ.30 ರಿಂದ ಏ.28 ರವರೆಗೆ ಒಂದು ತಿಂಗಳ ಕಾಲ ಕೌಟುಂಬಿಕ ಹಾಕಿ ಉತ್ಸವ ನಡೆಯಲಿದ್ದು, ಮಾ.30ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ.
ಏ.28 ರಂದು ಅಂತಿಮ ಪಂದ್ಯ ನಡೆಯಲಿದೆ. ಸುಮಾರು 400 ಕೊಡವ ಕುಟುಂಬಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕುಟುಂಬಸ್ಥರು ಕಾರ್ಯೋನ್ಮುಖರಾಗಿದ್ದು, 360 ಕುಟುಂಬ ತಂಡಗಳು ಈ ಬಾರಿಯ ಹಾಕಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿವೆ ಅಂತೆಯೇ ಕುಂಡ್ಯೋಳಂಡ ಹಾಕಿ ಉತ್ಸವ ವಿಶ್ವ ದಾಖಲೆ ಪುಟ ಸೇರಲಿದೆ.

ಚೆರಿಯಪರಂಬುವಿನ ಜನರಲ್ ಕೆ ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಹಾಕಿ ನಮ್ಮೆಯ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಭಾನುವಾರ ಮಾಧ್ಯಮದೊಂದಿಗೆ ಮಾತನಾಡಿ ಮೈದಾನ, ಗ್ಯಾಲರಿಗಳ ನಿರ್ಮಾಣ ಅಂತಿಮ ಹಂತದಲ್ಲಿದೆ. ಕ್ರೀಡಾ ಉತ್ಸವದ ಯಶಸ್ವಿಗೆ ವಿವಿಧ ಸಮಿತಿಗಳು ಕಾರ್ಯ ಪ್ರವೃತ್ತವಾಗಿವೆ. ಈ ಬಾರಿ ದಾಖಲೆಯ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದು ಯಶಸ್ಸಿಗೆ ಕುಂಡ್ಯೋಳಂಡ ಹಾಕಿ ಸಮಿತಿ ಸಮಿತಿ ಶ್ರಮಿಸುತ್ತಿದೆಎಂದರು.
ಟೂರ್ನಮೆಂಟ್ ಡೈರೆಕ್ಟರ್ ಅಂಜಪರವಂಡ ಕುಶಾಲಪ್ಪ ಮಾತನಾಡಿ ದಿನಕ್ಕೆ ಆರು ಪಂದ್ಯಗಳಂತೆ ಮೂರು ಮೈದಾನಗಳಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿವೆ. ಉದ್ಘಾಟನಾ ದಿನದಂದು ಇಂಡಿಯನ್ ನೇವಿ ಹಾಗೂ ಕೂರ್ಗ್ 11 ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ ಪ್ರತಿದಿನ ನಿಗದಿತ ಸಮಯಕ್ಕೆ ತಂಡದ ಆಟಗಾರರು ಆಗಮಿಸಿ ಪಂದ್ಯಗಳನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ವಿನಂತಿಸಿದರು.
ಈ ಸಂದರ್ಭ ಹಾಕಿ ನಮ್ಮೆಯ ಸಮಿತಿ ಕಾರ್ಯದರ್ಶಿ ಕುಂಡ್ಯೋಳಂಡ ವಿಶು ಪೂವಯ್ಯ ಹಾಗೂ ಪದಾಧಿಕಾರಿ ಸದಸ್ಯರುಗಳು ಉಪಸ್ಥಿತರಿದ್ದರು.
ಇದುವರೆಗೆ 23 ಹಾಕಿ ಪಂದ್ಯಾಟಗಳನ್ನು ಆಯೋಜಿಸಲಾಗಿದ್ದು 24ನೇ ಹಾಕಿ ಉತ್ಸವದಲ್ಲಿ ಅತಿ ಹೆಚ್ಚಿನ ಕೊಡವ ಕುಟುಂಬಗಳು ಪಾಲ್ಗೊಳ್ಳುತ್ತಿವೆ.1997ರಲ್ಲಿ ಕರಡದಲ್ಲಿ ಆಯೋಜಿಸಲಾಗಿದ್ದ ಪ್ರಥಮ ಕೊಡವ ಕೌಟುಂಬಿಕ ಹಾಕಿ ಉತ್ಸವ ಪಾಂಡ0ಡ ಕಪ್ ನಲ್ಲಿ 60 ತಂಡಗಳು ಪಾಲ್ಗೊಂಡಿದ್ದವು. ಬಳಿಕ 1998ರಲ್ಲಿ ಕಡಗದಲ್ಲಿ ನಡೆದ ಕೋಡಿರ ಕಪ್ ನಲ್ಲಿ 116 ತಂಡಗಳು ಪಾಲ್ಗೊಂಡಿದ್ದವು. ನಂತರದ ವರ್ಷದಲ್ಲಿ ಕಾಕೋಟು ಪರಂಬುವಿನಲ್ಲಿ ನಡೆದ ಬಲ್ಲಚಂಡ ಕಪ್ ನಲ್ಲಿ 140 ತಂಡಗಳು ಪೊನ್ನಂಪೇಟೆಯಲ್ಲಿ ನಡೆದ ಚೆಪ್ಪುಡಿರ ಕಪ್ ನಲ್ಲಿ 170 ತಂಡಗಳು ಪಾಲ್ಗೊಂಡಿದ್ದುಕುಲ್ಲೇಟಿರ ಕಪ್ ನಲ್ಲಿ 320 ತಂಡಗಳು ಪಾಲ್ಗೊಂಡಿದ್ದವು. ಕಳೆದ ವರ್ಷ 336 ತಂಡಗಳು ಪಾಲ್ಗೊಂಡಿದ್ದವು.
ಇದುವರೆಗೆ ನಡೆದ ಕೊಡವ ಕೌಟುಂಬಿಕ ಹಾಕಿ ನಮ್ಮೆಯಲ್ಲಿ ಪಳ0ಗಂಡ ಕುಟುಂಬ ತಂಡ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಕೊಡವ ಹಾಕಿ ಉತ್ಸವದಲ್ಲಿ ದಾಖಲೆ ನಿರ್ಮಿಸಿದೆ. ಕೂತಂಡ ತಂಡವು ನಾಲ್ಕು ಬಾರಿ ಕಲಿಯಂಡ, ಕುಲ್ಲೇಟಿರ, ನೆಲ್ಲ ಮಕ್ಕಡ ತಂಡಗಳು ಕ್ರಮವಾಗಿ ಮೂರು ಬಾರಿ ಅಂಜಪರವಂಡ, ಮಂಡೆಪಂಡ, ಕುಪ್ಪಂಡ (ಕೈಕೆರಿ) ತಂಡಗಳು ತಲಾ ಒಂದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿವೆ.
ಈ ಬಾರಿಯ ಹಾಕಿದ ಮೇಲೆ ಬಿರುಸಿನ ಸಿದ್ಧತೆಗಳಾಗುತ್ತಿದ್ದು, ಹಾಕಿ ನಮ್ಮೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲು ಕುಂಡ್ಯೋಳಂಡ ಕುಟುಂಬ ಭರದ ಸಿದ್ಧತೆ ನಡೆಸಿವೆ.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.