Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೊಬಸ್ಟಾ ಬೆಳೆಗಾರರರಿಗೆ ಶುಕ್ರ ದೆಸೆ : ಕಾಫಿ ಇತಿಹಾಸದಲ್ಲೇ ಮೊದಲ ಬಾರಿಗೆ ಅರೇಬಿಕಾ ದರವನ್ನೂ ಹಿಂದಿಕ್ಕಿ ಮುನ್ನುಗ್ಗಿದ ರೊಬಸ್ಟಾ ಕಾಫಿ ದರ : ಸರ್ವಕಾಲಿಕ ದಾಖಲೆ ಬೆಲೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೊಬಸ್ಟಾ ಬೆಳೆಗಾರರರಿಗೆ ಶುಕ್ರ ದೆಸೆ : ಕಾಫಿ ಇತಿಹಾಸದಲ್ಲೇ ಮೊದಲ ಬಾರಿಗೆ ಅರೇಬಿಕಾ ದರವನ್ನೂ ಹಿಂದಿಕ್ಕಿ ಮುನ್ನುಗ್ಗಿದ ರೊಬಸ್ಟಾ ಕಾಫಿ ದರ : ಸರ್ವಕಾಲಿಕ ದಾಖಲೆ ಬೆಲೆ*

ಮಾರ್ಚ್ 28, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಮಾ.28 NEWS DESK : ಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ ದಾಖಲಿಸಿದೆ. ಸೋಮವಾರ ವಯನಾಡ್‌ ಮಾರುಕಟ್ಟೆಯಲ್ಲಿ ರೋಬಸ್ಟಾ ಹಸಿ ಕಾಫಿ ಹಣ್ಣುಗಳ ಫಾರ್ಮ್‌ಗೇಟ್ ಬೆಲೆ ಪ್ರತಿ ಕಿಲೋಗ್ರಾಂಗೆ ದಾಖಲೆಯ ರೂ.172 ಅನ್ನು ಮುಟ್ಟಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕೆಜಿಗೆ ರೂ.115 ಇತ್ತು. ಇದೇ ಸಮಯದಲ್ಲಿ ರೋಬಸ್ಟಾ ಪಾರ್ಚ್‌ಮೆಂಟ್‌ ಕಾಫಿ ಬೀಜಗಳ ಸ್ಪಾಟ್ ಬೆಲೆಯು ಕೆಜಿಗೆ ರೂ.315 ಕ್ಕೆ ಸರ್ವಕಾಲಿಕ ಏರಿಕೆ ದಾಖಲಿಸಿದೆ. 2023 ರ ಇದೇ ಅವಧಿಯಲ್ಲಿ ದರ ಕಿಲೋಗೆ 220 ರೂಪಾಯಿಗಳಷ್ಟಿತ್ತು. ಮಾರ್ಚ್ 2022 ರಲ್ಲಿ ಕಚ್ಚಾ ಹಣ್ಣುಗಳು ಮತ್ತು ಪಾರ್ಚ್‌ ಮೆಂಟ್‌ ಗೆ ದರ ಕ್ರಮವಾಗಿ ರೂ. 80 ಮತ್ತು ರೂ. 145 ರಷ್ಟಿತ್ತು.
ಕೊಡಗಿನ ಮಾರುಕಟ್ಟೆಯಲ್ಲಿ ಬುಧವಾರ ರೊಬಸ್ಟಾ ಪಾರ್ಚ್‌ಮೆಂಟ್‌ ದರ 50 ಕೆಜಿ ಚೀಲಕ್ಕೆ 14,400 ರಿಂದ 14,700 ರೂಪಾಯಿಗಳಿಗೆ ಏರಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ. ರೊಬಸ್ಟಾ ದರ ಯಾವತ್ತೂ ಅರೇಬಿಕಾ ಪಾರ್ಚ್‌ ಮೆಂಟ್‌ ದರಕ್ಕಿಂತ ಜಾಸ್ತಿ ಆಗಿದ್ದೇ ಇಲ್ಲ. ಆದರೆ ಇದೇ ಮೊದಲ ಬಾರಿಗೆ ಚೆರ್ರಿ ಹಾಗೂ ಪಾರ್ಚ್‌ ಮೆಂಟ್‌ ಕಾಫಿ ದರದಲ್ಲಿ ಅರೇಬಿಕಾ ದರವನ್ನೂ ಹಿಂದಿಕ್ಕಿದೆ. ಅರೇಬಿಕಾ ಚೆರಿ ಕಾಫಿ ದರ 50 ಕೆಜಿ ಚೀಲಕ್ಕೆ 8000-8200 ಇದ್ದರೆ ( ಔಟರ್ನ್‌ ಆಧರಿಸಿ )ರೊಬಸ್ಟಾ ದರ 8600 ರೂಪಾಯಿಗೂ ಹೆಚ್ಚಾಗಿದೆ.

ಮಾರುಕಟ್ಟೆ ತಜ್ಞರ ಪ್ರಕಾರ ಜಾಗತಿಕ ಬೇಡಿಕೆಯಲ್ಲಿ ಗಣನೀಯ ಏರಿಕೆ, ವಿಶ್ವದ ಅಗ್ರಗಣ್ಯ ಕಾಫಿ ರಫ್ತುದಾರ ಬ್ರೆಜಿಲ್‌ , ಇಂಡೋನೇಷ್ಯಾ ಮತ್ತು ವಿಯಟ್ನಾಂ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಬೆಳೆ ನಾಶವಾಗಿರುವುದೇ ದರ ಏರಿಕೆಗೆ ಕಾರಣವಾಗಿದೆ. ಈ ಸಾಲಿನಲ್ಲಿ ಕಳಪೆ ಇಳುವರಿ ಹೊರತಾಗಿಯೂ, ದೇಶದ ಕಾಫಿ ಉತ್ಪಾದನೆಯು 3.54 ಲಕ್ಷ ಟನ್‌ಗಳಿಗೆ ತಲುಪುವ ನಿರೀಕ್ಷೆಯಿದೆ, ಇದು ಕಳೆದ ವರ್ಷದ ಉತ್ಪಾದನೆ 3.52 ಲಕ್ಷ ಟನ್‌ಗಳಿಗಿಂತ ಸ್ವಲ್ಪ ಹೆಚ್ಚಳವಾಗಿದೆ ಎಂದು ಕಾಫಿ ಮಂಡಳಿ ಅಧಿಕಾರಿಗಳು ತಿಳಿಸಿದರು.
ಕಾಫಿ ದರದ ಸರ್ವಕಾಲಿಕ ದಾಖಲೆ ಏರಿಕೆ ಕುರಿತು ಪ್ರತಿಕ್ರಿಯಿಸಿದ ಕಾಫಿ ಮಂಡಳಿಯ ಮಾಜಿ ಸದಸ್ಯ ಡಾ ಸಣ್ಣುವಂಡ ಕಾವೇರಪ್ಪ ಅವರು ರೊಬಸ್ಟಾ ಕಾಫಿ ದರವು ಮತ್ತಷ್ಟು ಏರಿಕೆ ದಾಖಲಿಸಲಿದೆ ಎಂದರು. ವಿಯಟ್ನಾಂ ಹಾಗೂ ಇಂಡೋನೇಷ್ಯಾ ರಾಷ್ಟ್ರಗಳಲ್ಲಿ ಕಾಫಿ ಬೆಳೆ ನಾಶ ಆಗಿರುವುದರಿಂದ ಅಲ್ಲದೆ ಗುಣಮಟ್ಟದಲ್ಲಿ ಭಾರತೀಯ ಕಾಫಿ ಇತರ ದೇಶಗಳಿಗಿಂತ ಮೇಲ್ಮಟ್ಟದಾಗಿರುವುದರಿಂದ ಪ್ರೀಮಿಯಂ ಬೆಲೆಗೆ ಮಾರಾಟವಾಗುತ್ತಿದೆ , ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸರಬರಾಜಿನ ಕೊರತೆಯಿಂದಾಗಿ ಬೇಡಿಕೆ ಹೆಚ್ಚಾಗಿರುವುದರಿಂದ ಸಹಜವಾಗೇ ದರ ಹೆಚ್ಚಳವಾಗಿದೆ ಎಂದರು.
ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕರ್ನಾಟಕವು 71% ನಷ್ಟು ಭಾಗವನ್ನು ಹೊಂದಿದೆ, ನಂತರ ಕೇರಳ (21%), ಮತ್ತು ತಮಿಳುನಾಡು (5%) ಇವೆ. ಆಂಧ್ರ ಪ್ರದೇಶ , ಅಸ್ಸಾಂ ನಲ್ಲಿ ಕಾಫಿ ಬೆಳೆಯಲಾಗುತ್ತದಾದರೂ ಉತ್ಪಾದನೆ ತೀರಾ ಕಡಿಮೆ ಇದೆ. ಭಾರತದಿಂದ ರಫ್ತಾಗುವ ಶೇಕಡಾ 70 ರಷ್ಟು ಕಾಫಿ ಮುಖ್ಯವಾಗಿ ಇಟಲಿ, ಬೆಲ್ಜಿಯಂ, ಜರ್ಮನಿ ಮತ್ತು ರಷ್ಯಾ ಗೆ ಹೋಗುತ್ತಿದೆ. ಸಾಮಾನ್ಯವಾಗಿ ಕಾಫಿ ಬೆಳೆಯುವ ದೇಶಗಳು ತಮ್ಮ ಎಲ್ಲಾ ಕಾಫಿಯನ್ನು ಮಾರಾಟ ಮಾಡುವುದಿಲ್ಲ. ಮಾರುಕಟ್ಟೆ ಬೆಲೆ ಸ್ಥಿರತೆಗಾಗಿ ಬಫರ್‌ ಸ್ಟಾಕ್‌ (Buffer stock) ಇಟ್ಟುಕೊಂಡಿರುತ್ತವೆ. ಆದರೆ ಈ ಬಾರಿ ಎಲ್ಲಾ ಬಫರ್‌ ಸ್ಟಾಕ್‌ ನ್ನೂ ಮಾರುಕಟ್ಟೆಗೆ ಬಿಡುಗಡೆ ಮಾಡಿರುವುದರಿಂದ ಬಫರ್‌ ಸ್ಟಾಕ್‌ ಕೂಡ ಇಲ್ಲದಾಗಿದ್ದು ಇದೂ ಕೂಡ ಮುಂದಿನ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣ ಆಗಲಿದೆ.

ಕಾಫಿ ದರ ಏರಿಕೆಯಿಂದಾಗಿ ಮುಂದಿನ ತಿಂಗಳುಗಳಲ್ಲಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಕಾಫಿ ಶಾಪ್‌ಗಳಲ್ಲಿ ಬೆಲೆಗಳು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು ಬಳಕೆದಾರರಿಗೂ ಹೊರೆ ಆಗಬಹುದು ಇದರಿಂದ ಅನಿವಾರ್ಯವಾಗಿ ಬಳಕೆದಾರರು ಟೀ ಸೇವನೆಗೆ ಒಲವು ತೋರಬಹುದು. ಅಲ್ಲದೆ ಇದೇ ರೀತಿ ಮುಂದಿನ 2-3 ವರ್ಷ ರೊಬಸ್ಟಾ ದರ ಏರುಮುಖ ಆಗಿದ್ದರೆ ಅರೇಬಿಕಾ ಬೆಳೆಗಾರರು ಸಹಜವಾಗಿಯೇ ರೊಬಸ್ಟಾ ಬೆಳೆ ಬೆಳೆಯಲು ಮುಂದಾಗಬಹುದು. ಏಕೆಂದರೆ ಅರೇಬಿಕಾ ತೋಟದ ನಿರ್ವಹಣೆಯ ಶೇಕಡಾ 50 ರಷ್ಟು ವೆಚ್ಚದಲ್ಲಿ ರೊಬಸ್ಟಾ ಕಾಫಿ ಬೆಳೆಯಬಹುದಲ್ಲದೆ ಇದಕ್ಕೆ ಬೋರರ್‌ ಕಾಟ ವಿರಳ.
ಮುಂದಿನ ದಿನಗಳಲ್ಲಿ ಈ ದರವು ಮತ್ತಷ್ಟು ಏರಿಕೆ ದಾಖಲಿಸಲಿದ್ದು ಅಲ್ಪ ಕುಸಿತ ದಾಖಲಿಸಿದರೂ ದರ ಸ್ಥಿರತೆ ಕಾಯ್ದುಕೊಳ್ಳಬಹುದು ಎಂದು ಮಾರುಕಟ್ಟೆ ತಜ್ಞರು ಹೇಳುತ್ತಾರೆ.

ವರದಿ :  ಕೋವರ್‌ ಕೊಲ್ಲಿ ಇಂದ್ರೇಶ್‌

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.