Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಂಡ್ಯೋಳಂಡ ಹಾಕಿ ಹಬ್ಬಕ್ಕೆ ಕ್ಷಣಗಣನೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಕುಂಡ್ಯೋಳಂಡ ಹಾಕಿ ಹಬ್ಬಕ್ಕೆ ಕ್ಷಣಗಣನೆ

ಮಾರ್ಚ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.28 NEWS DESK : ಕೊಡವ ಕುಟುಂಬಗಳ ನಡುವಿನ 24ನೇ ವರ್ಷದ ಪ್ರತಿಷ್ಠಿತ ‘ಕುಂಡ್ಯೋಳಂಡ ಹಾಕಿ ಹಬ್ಬ’ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮಾ.30ರಿಂದ ಏಪ್ರಿಲ್28ರವರೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಪಂದ್ಯಾಟ ನಡೆಯಲಿದ್ದು, ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿದೆ.
ಏಕಕಾಲಕ್ಕೆ 30 ಸಾವಿರ ಮಂದಿ ಆಸೀನರಾಗಿ ಪಂದ್ಯಾಟ ವೀಕ್ಷಿಸಲು ಅನುಕೂಲವಾಗುವಂತೆ ಮೈದಾನದ ಸುತ್ತಲೂ ಗ್ಯಾಲರಿ ನಿರ್ಮಾಣವಾಗಿದೆ. ಗಣ್ಯಾತಿಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗಳಿದ್ದು, ಒಟ್ಟು 3 ಮೈದಾನಗಳನ್ನು ಹಾಕಿ ಪಂದ್ಯಾವಳಿಗೆ ಸಿದ್ಧ ಮಾಡಲಾಗಿದೆ.
ಅಂತರ್ ರಾಷ್ಟ್ರೀಯ ಗುಣಮಟ್ಟದ ಮಾದರಿಯಲ್ಲಿ ಮೈದಾನವನ್ನು ಸಿದ್ಧಗೊಳಿಸಲಾಗಿದೆ. ಮೈದಾನದಲ್ಲಿ ಚೆಂಡು ಮತ್ತು ಆಟಗಾರರ ನಡುವೆ ಸಮತೋಲನೆ ಕಾಪಾಡುವ ಸಲುವಾಗಿ ಮೈದಾನವನ್ನು ನುಣುಪಾಗಿಸಲು ಟ್ರ್ಯಾ ಮೂಲಕ ನೀರನ್ನು ಹರಿಸಲಾಗುತ್ತಿದೆ. ಪ್ರತಿ ಮೈದಾನದಲ್ಲಿ 6 ಪಂದ್ಯಗಳಂತೆ 1 ದಿನಕ್ಕೆ 18 ಪಂದ್ಯಾಟಗಳು ನಡೆಯಲಿವೆ. 10 ದಿನಗಳ ಬಳಿಕ 2 ಮೈದಾನ, ಫ್ರೀ ಕ್ವಾಟರ್ ಹಂತದ ಬಳಿಕ 1ನೇ ಮೈದಾನದಲ್ಲಿ ಹಾಕಿ ಕ್ರೀಡಾಕೂಟಗಳು ನಡೆಯಲಿವೆ.
24ನೇ ವರ್ಷದ ಕುಂಡ್ಯೋಳಂಡ ಹಾಕಿ ನಮ್ಮೆಯಲ್ಲಿ ಈ ಬಾರಿ 360 ಕೊಡವ ಕೌಟುಂಬಿಕ ತಂಡಗಳು ನೋಂದಾವಣೆ ಮಾಡಿಕೊಂಡಿವೆ. ಈ ಹಿನ್ನೆಲೆಯಲ್ಲಿ ಈ ಕ್ರೀಡಾ ಕೂಟವನ್ನು ಗಿನ್ನಿಸ್ ದಾಖಲೆ ಮಾಡುವ ಆಶಯವನ್ನು ಕುಂಡ್ಯೋಳಂಡ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಈ ಹಿಂದಿನಂತೆ ಹಲವು ತಂಡಗಳಲ್ಲಿ ಮಕ್ಕಳು, ಮಹಿಳಾ ಹಾಕಿ ಪಟುಗಳ ಸಹಿತ ಹಿರಿಯ ನಾಗರಿಕ ಆಟಗಾರರು ಕೂಡ ಮೈದಾನದಲ್ಲಿ ತಮ್ಮ ಕ್ರೀಡಾ ಸ್ಫೂರ್ತಿ ಪ್ರದರ್ಶಿಸಲಿದ್ದಾರೆ.
ಹಾಕಿ ಕ್ರೀಡೆಯ ಜೊತೆಯಲ್ಲಿಯೇ ವಾರಾಂತ್ಯದಂದು ಕೊಡವ ಸಾಂಪ್ರದಾಯಿಕ ಸಂಸ್ಕೃತಿ ಪ್ರತಿಬಿಂಬಿಸುವ ಉಮ್ಮತ್ತಾಟ್, ಬೊಳಕಾಟ್, ಮೆರಥಾನ್, ಆಹಾರ ಮೇಳ, ವಧುವರರ ಸಮಾವೇಶ, ಆರೋಗ್ಯ ಶಿಬಿರ, ವೃತ್ತಿ ಮಾರ್ಗದರ್ಶನ, ಹಾಕಿ ರಾಷ್ಟ್ರೀಯ, ಅಂತರರಾಷ್ಟ್ರೀಯ ಆಟಗಾರರ ಪುನರ್ ಮಿಲನ ಮತ್ತು ಬಾಳೋಪಾಟ್ ತರಬೇತಿ ಮತ್ತಿತರ ಕಾರ್ಯಕ್ರಮಗಳು ಕೂಡ ನಡೆಯಲಿದೆ.
ಮಾ.30ರಂದು ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯವನ್ನು ಆಯೋಜಿಸಲಾಗಿದ್ದು, ಇದಕ್ಕೂ ಮುನ್ನ ಮಡಿಕೇರಿ ಮತ್ತು ಸಾಯಿ ಪೊನ್ನಂಪೇಟೆ ಬಾಲಕಿಯರ ತಂಡಗಳ ನಡುವೆ ಪ್ರದರ್ಶನ ಪಂದ್ಯಾಟವನ್ನು ಆಯೋಜಿಸಲಾಗಿದೆ. ಕುಂಡ್ಯೋಳಂಡ ಹಾಕಿ ಹಬ್ಬದ ಚಾಂಪಿಯನ್ ತಂಡಕ್ಕೆ ರೂ.4ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ 3 ಲಕ್ಷ, ತೃತೀಯ 2 ಲಕ್ಷ ಮತ್ತು 4ನೇ ಸ್ಥಾನ ಪಡೆಯುವ ತಂಡಕ್ಕೆ ರೂ.1 ಲಕ್ಷ ನಗದು ಹಾಗೂ ಟ್ರೋಫಿ ನೀಡಲಾಗುತ್ತಿದೆ.
ಭಾರತೀಯ ಹಾಕಿಯ ತೊಟ್ಟಿಲು ಎಂದೇ ಪರಿಗಣಿಸಲ್ಪಟ್ಟಿರುವ ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ. 50ಕ್ಕೂ ಹೆಚ್ಚು ಕೊಡವ ಅಂತರ್ ರಾಷ್ಟ್ರೀಯ ಹಾಕಿ ಆಟಗಾರರು ಹಾಕಿ ಕ್ರೀಡೆಯ ಪರಂಪರೆಗೆ ಕೊಡುಗೆ ನೀಡಿದ್ದಾರೆ. ಪಾಂಡಂಡ ಕುಟ್ಟಣ್ಣಿ ಹಾಗೂ ಅವರ ಸಹೋದರ ಕಾಶಿಯವರಿಂದ ಕೊಡವ ಹಾಕಿ ಉತ್ಸವ ಆರಂಭವಾಯಿತು. 1997ರಲ್ಲಿ ಕರಡದಲ್ಲಿ ಪಾಂಡಂಡ ಕುಟುಂಬ ಮೊದಲ ಬಾರಿಗೆ ಆಯೋಜಿಸಿದ್ದ ಹಾಕಿಹಬ್ಬದಲ್ಲಿ 60 ತಂಡಗಳು ಪಾಲ್ಗೊಂಡಿದ್ದವು. ಈ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳ ನೋಂದಣಿಯೊಂದಿಗೆ ಹೊಸ ದಾಖಲೆ ಸೃಷ್ಟಿಸುವ ಮೂಲಕ ಪ್ರತಿಷ್ಠಿತ ಕಪ್‌ಗಾಗಿ ಸೆಣಸಾಡುತ್ತಿರುವುದು ವಿಶೇಷವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ…

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.