ಮಡಿಕೇರಿ ಮಾ.30 NEWS DESK : ನಾಪೋಕ್ಲು ಹಳೇ ತಾಲೂಕು ಮುಖ್ಯ ರಸ್ತೆಯಲ್ಲಿ ಪಿಕ್‍ಅಪ್ ಜೀಪ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ. ಅಯ್ಯಂಗೇರಿ ಗ್ರಾಮದ ನಿವಾಸಿ ಹಕೀಂ(23) ಮೃತ ದುರ್ದೈವಿ.
ಮಾ.20ರಂದು ನಾಪೋಕ್ಲು ಹಳೇ ತಾಲೂಕು ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಪಿಕ್‍ಅಪ್ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಚಾಲಕ ಹಕೀಂ ಚಿಕಿತ್ಸೆ ಫಲಿಸದೆ ಹಕೀಂ ಇಂದು ಮೃತಪಟ್ಟರು.
ಯುವಕ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ನಾಪೋಕ್ಲು ಠಾಣೆಯ ಮುಂಭಾಗದಲ್ಲಿ ಜಮಾಯಿಸಿದ ಗ್ರಾಮಸ್ಥರು ಪಿಕ್‍ಅಪ್ ವಾಹನದ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.








