Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಯುವ ಸಂವಾದ : ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಕರೆ*
ಇತ್ತೀಚಿನ ಸುದ್ದಿಗಳು

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಯುವ ಸಂವಾದ : ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಕರೆ*

March 30, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.30 NEWS DESK  : ಯುವ ಪೀಳಿಗೆಯ ಸೂಕ್ತ ಚಿಂತನೆಯ ರಹದಾರಿಯಲ್ಲಿ ಮುನ್ನಡೆಯಬೇಕು. ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಮತದಾನದಂತಹ ಪ್ರಜಾಪ್ರಭುತ್ವದ ಹಬ್ಬದಲ್ಲಿ ಯುವ ತಲೆಮಾರು ಸಕ್ರಿಯವಾಗಿ ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಬಲವರ್ಧನೆಗೆ ಸಹಕಾರಿಯಾಗಬೇಕು ಎಂದು ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷರಾದ ಪ್ರಮೋದ್ ರೈ ಹೇಳಿದರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕೊಡಗು ಜಿಲ್ಲಾ ಅಂತರಕಾಲೇಜು ಎನ್ ಎಸ್ ಎಸ್ ಸ್ವಯಂ ಸೇವಕರಿಗಾಗಿ ನಡೆಸಿದ ಯುವ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಪಿಡಿಒ ಅಬ್ದುಲ್ಲಾ ಸ್ಪರ್ಧಾತ್ಮಕ “ಜಗತ್ತು ಮತ್ತು ಯುವ ಜನತೆ : ಶೈಕ್ಷಣಿಕ, ಸಾಮಾಜಿಕ ಸಾಧ್ಯತೆ” ಎಂಬ ವಿಷಯದ ಕುರಿತು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿರುವ ನಾವು ಶೈಕ್ಷಣಿಕ ಸಾಧ್ಯತೆಯ ಮೂಲಕ ಸರಕಾರಿ ಉದ್ಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ನಮ್ಮ ನಡಾವಳಿಗಳನ್ನು ನಾವೇ ರೂಪಿಸಿಕೊಳ್ಳಬೇಕು. ಆಗಿದ್ದಾಗ ಮಾತ್ರ ಇಡೀ ಜಗತ್ತೆ ನಮ್ಮ ಸಾಧನೆಗೆ ಬೆನ್ನೆಲುಬಾಗಿ ನಿಲ್ಲುತ್ತದೆ ಎಂದು ಅಭಿಪ್ರಾಯಪಟ್ಟರು. ಜೊತೆಗೆ ಯುಪಿಎಸಿ, ಕೆಪಿಎಸ್ ಸಿ ಪರೀಕ್ಷೆಗಳ ತಯಾರಿ ಮಾರ್ಗದರ್ಶನ ನೀಡಿದರು.

ಕೆನರಾ ಬ್ಯಾಂಕ್ ಮಡಿಕೇರಿ ಪಶ್ಚಿಮ ಶಾಖೆಯ ವ್ಯವಸ್ಥಾಪಕ ಪಿ.ಕೆ.ಅವಿನಾಶ್ ಮಾತನಾಡಿ, ತಂತ್ರಜ್ಞಾನದ ಮೂಲಕ ಹೇಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಬಹುದು ಎಂಬ ವಿಚಾರದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪೆÇ್ರ. ಬಿ.ರಾಘವ, ನನಗೆ ಯಾವ ವಿಚಾದ ಕುರಿತು ಅರಿವಿಲ್ಲ ಎಂಬ ತಿಳುವಳಿಕೆ ಪ್ರತಿಯೊಬ್ಬನಿಗೂ ಅಗತ್ಯ. ಉತ್ತಮವಾದ ಮಾನವ ಸಂಪನ್ಮೂಲವನ್ನು ಶಿಕ್ಷಣ ಸಂಸ್ಥೆಗಳು ಉತ್ಪಾದಿಸಬೇಕಾಗಿದೆ. ಸಮಯವನ್ನು ವ್ಯರ್ಥ ಮಾಡಬೇಡಿ. ಸಂವಾದದ ನೆಲೆಯನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು. ಸಮಾಜ ವಿರೋಧಿ ನಿಲುವುಗಳ ಬಗ್ಗೆ ಎಚ್ಚರ ವಹಿಸಬೇಕು. ಯುವ ಸಂವಾದ ದೇಶವ್ಯಾಪಿ ರಾಷ್ಟ್ರೀಯ ಅಭಿಯಾನವಾಗಿ ಆಚರಿಸಲ್ಪಡುತ್ತಿರುವ ಯುವ ಸಮೂಹದ ಹಬ್ಬ. ಯುವ ಸಂವಾದದ ಮೂಲಕ ತಮ್ಮ ಸೃಜನಶೀಲತೆ, ಕೌಶಲ್ಯಾಭಿವೃದ್ಧಿ ಆಯಾಮವನ್ನು ವಿಸ್ತರಿಸಲಿರುವ ಮಹೋನ್ನತವಾದ ವೇದಿಕೆಯಾಗಿದೆ ಎಂದರು.

ಉನ್ನತ ಶಿಕ್ಷಣದ ಜೊತೆಯಲ್ಲಿ ಕೌಶಲ್ಯ ಭಾರತದ ಕಲ್ಪನೆಯನ್ನು ಇಲ್ಲಿ ಗ್ರಹಿಸಲು ಸಾಧ್ಯವಿದೆ. ತಂತ್ರಜ್ಞಾನ, ಕೃತಕಬುದ್ದಿಮತ್ತೆಯನ್ನು ದುಡಿಸಿಕೊಂಡೆ ದೇಶದ ಅಭಿವೃದ್ಧಿಗೆ ಯುವ ಜನತೆಯ ಮನೋಭೂಮಿಕೆಯನ್ನು ರೂಪಿಸುವ ಪ್ರಯತ್ನ ಇಲ್ಲಿದೆ.

ಪ್ರತಿಭೆಯನ್ನು ಸಮಾಜಮುಖಿಗೊಳಿಸಿ ಪ್ರಜಾಪ್ರಭುತ್ವವಾದ ನಿರೂಪಣೆಗಳನ್ನು ಸ್ಥಾಪಿಸಲು ಇಲ್ಲಿ ನಡೆಸುವ ಸ್ಪರ್ಧೆಗಳು ಪೂರಕವಾಗಿದೆ. ಪ್ರಜಾಪ್ರಭುತ್ವ, ಸಂವಿಧಾನ, ವ್ಯಕ್ತಿಗೌರವ, ನಾಯಕತ್ವ, ಗುಂಪು ನಿರ್ಣಯ, ಕಲೆ, ಸಾಹಿತ್ಯ ಸಂಗೀತದಂತಹ ಪರಿಕಲ್ಪನಾತ್ಮಕ ಅಂಶಗಳ ಕಡೆಗೆ ಈ ಕಾರ್ಯಕ್ರಮ ಹೆಚ್ಚು ಬೆಳಕು ಚೆಲ್ಲುತ್ತದೆ. ಬೌದ್ಧಿಕತೆ, ಸಾಮಾಜಿಕ ಬದ್ಧತೆ, ಸಾಂಸ್ಕೃತಿಕ ಅನುಸಂಧಾನವನ್ನು ವಿದ್ಯಾರ್ಥಿ ದೆಸೆಯಿಂದ ರೂಪಿಸಲು ಸಹಕಾರಯುತವಾದ ವೇದಿಕೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಎನ್.ಎಸ್.ಎಸ್ ಘಟಕ-2 ಯೋಜನಾಧಿಕಾರಿ ಡಾ. ಎ.ಎನ್.ಗಾಯತ್ರಿ ಸ್ವಾಗತಿಸಿದರು. ಎನ್.ಎಸ್.ಎಸ್ ಘಟಕ-1 ಯೋಜನಾಧಿಕಾರಿ ಡಾ. ಮಹದೇವಯ್ಯ ವಂದಿಸಿದರು.

ಮಧ್ಯಾನದ ನಂತರ ಕೊಡಗು ಜಿಲ್ಲಾ ವ್ಯಾಪ್ತಿಯ ಅಂತರ ಕಾಲೇಜು ಎನ್.ಎಸ್.ಎಸ್ ಸ್ವಯಂ ಸೇವಕರಿಗೆ ಸಾಮಾಜಿಕ ಜವಾಬ್ದಾರಿ ಮತ್ತು ಯುವಜನತೆ ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡನೆ ಸ್ಪರ್ಧೆ, ವಿವಿಧ ವಿಚಾರಗಳ ಕುರಿತು ವಿಚಾರ ಸಂವಾದ, ನನ್ನ ಕನಸಿನ ಭಾರತ ಎಂಬ ವಿಷಯದ ಬಗ್ಗೆ ಕೊಲಾಜ್ ಮೇಕಿಂಗ್ ಸ್ಪರ್ಧೆ ನಡೆದು ವಿಜೇತರಿಗೆ ಪ್ರಮಾಣಪತ್ರ ಮತ್ತು ಪುಸ್ತಕ ಬಹುಮಾನ ವಿತರಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ನಿಮ್ಮ ಶೋಕಿ, ನಿಮ್ಮ ಶರವೇಗ ಮನೆಯವರ ಶೋಕಕ್ಕೆ ಕಾರಣವಾಗಬಹುದು, ಯುವಕರೇ ಎಚ್ಚರ…*
Next Article *ಸುಂಟಿಕೊಪ್ಪದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಮುತ್ತಪ್ಪ ದೇವಸ್ಥಾನದ ವಾರ್ಷಿಕೋತ್ಸವ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.