Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಿ.ಸೂದನ ರಾಘವಯ್ಯ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಿ.ಸೂದನ ರಾಘವಯ್ಯ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ*

ಏಪ್ರಿಲ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಏ.1 NEWS DESK  : ವಿದ್ಯಾರ್ಥಿಗಳು ಮೊಬೈಲ್‍ಗಳನ್ನು ಉತ್ತಮ ವಿಚಾರಗಳಿಗಾಗಿ ಮಾತ್ರ ಬಳಸಿಕೊಳ್ಳಬೇಕೆಂದು ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಅಧ್ಯಾಪಕಿ ಕೆ.ಬಿ.ಉಷಾರಾಣಿ ಹೇಳಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ.ಸೂದನ ರಾಘವಯ್ಯ ದತ್ತಿನಿಧಿ ಕಾರ್ಯ ಕ್ರಮದಲ್ಲಿ ದತ್ತಿ ಉಪನ್ಯಾಸ ನೀಡಿ ಮಾತನಾಡಿದರು.
ವಿಷಯಧಾರಿತ ಪುಸ್ತಕಗಳನ್ನು ಬೋಧನೆ ಮಾಡುವ ಶಿಕ್ಷಕರನ್ನು ಪ್ರೀತಿಸಿ ಸಹನೆಯಿಂದ ಶಿಕ್ಷಣವನ್ನು ಬೋಧಿಸುವ ಶಿಕ್ಷಕರನ್ನು ಗೌರವಿಸಿ ಅವರ ಸಕಾರಾತ್ಮಕ ಗುಣಗಳನ್ನು ಸ್ಮರಿಸಿಕೊಂಡಾಗ ವಿಚಾರಗಳು ಶಾಶ್ವತವಾಗಿ ಮನಸ್ಸಿನಲ್ಲಿ ಉಳಿದುಕೊಳ್ಳುತ್ತವೆ. ಪಠ್ಯದ ಪರೀಕ್ಷೆಯೊಂದಿಗೆ ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಜವರಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯ ಚಟುವಟಿಕೆಗಳಿಗೆ ಸೀಮಿತವಾಗದೆ ದತ್ತಿನಿದಿಗಳಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗಲಿದೆ ಎಂದು ಎಂದು ಹರ್ಷ ವ್ಯಕ್ತಪಡಿಸಿದರು.
ದತ್ತಿ ದಾನಿಗಳಾದ ನಿವೃತ್ತ ಪ್ರಾಂಶುಪಾಲ ಮಲೆಬಾವು ಉಷಾ ರವಿ ಪರಿಷತ್ತಿನ ಗೌರವ ಸ್ವೀಕರಿಸಿ ಮಾತನಾಡಿ, ತಮ್ಮ ತಂದೆ ನಿವೃತ್ತ ಶಿಕ್ಷಕರು. ರಾಜ್ಯ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಸೂದನ ರಾಘವಯ್ಯ ಅವರ ಹೆಸರಿನಲ್ಲಿ ದತ್ತಿ ಸ್ಥಾಪನೆ ಮಾಡಲಾಗಿದೆ ಪ್ರತಿ ವರ್ಷ ಕನ್ನಡ ಮಾಧ್ಯಮ ದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಯನ್ನು ಗೌರವಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಸವಾಲು ಕುರಿತು ಉಪನ್ಯಾಸ ನೀಡುವಂತೆ ದತ್ತಿ ನೀಡಲಾಗಿದೆ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ದತ್ತಿ ಉಪನ್ಯಾಸ ಕಾರ್ಯಕ್ರಮಗಳಿಂದ ದತ್ತಿ ದಾನಿಗಳ ಹೆಸರು ಬದುಕು ಅವರ ಸಾಧನೆಯ ಬಗ್ಗೆ ಪ್ರತಿವರ್ಷವೂ ನೆನಪಿನಲ್ಲಿ ಉಳಿಯುವಂತೆ ಮಾಡುತ್ತದೆ ಹಾಗೂ ಅವರ ವಿಚಾರ ತಿಳಿದಂತಾಗುತ್ತದೆ ಎಂದು ದತ್ತಿ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಇದೇ ಸಂದರ್ಭ 2022 /23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ಐಗೂರು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಿ.ಬಿ. ಬೆಸಿಲ್ ಅವರ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹ್ಮದ್ , ರೇವತಿ ರಮೇಶ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್, ಕಾರ್ಯದರ್ಶಿ ರಿಶಿತ್ ಮಾದಯ್ಯ, ರೇಣುಕಾ , ಅಲ್ಲಾರಂಡ ವಿಠಲ್ ನಂಜಪ್ಪ, ಕಾಲೇಜಿನ ಉಪನ್ಯಾಸಕರು, ಪೋಷಕರು ಸೇರಿದಂತೆ ಮುಖ್ಯ ಪಟ್ಟವರು ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ ಉಪನ್ಯಾಸಕಿ ಡಾ.ಕೋರನ ಸರಸ್ವತಿ ಪ್ರಕಾಶ್ ಸ್ವಾಗತಿಸಿ , ಉಪನ್ಯಾಸಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು, ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮ ರಾಘವಯ್ಯ ವಂದಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.