ಮಡಿಕೇರಿ ಏ.2 NEWS DESK : ಭಾಗಮಂಡಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಸುನಿಲ್ ಕುಮಾರ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ಲಭಿಸಿದೆ.
ಇಂದು ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕೊಡಗು ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ ಮತ್ತು ಕಾರ್ಯಪ್ಪ ಟ್ರೋಫಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಟ್ರೋಫಿ ನೀಡಿ ಸುನಿಲ್ ಕುಮಾರ್ ಅವರ ಕಾರ್ಯದಕ್ಷತೆಯನ್ನು ಶ್ಲಾಘಿಸಿದರು.
ಸುನಿಲ್ ಕುಮಾರ್ ಅವರು ಗಾಂಜಾ ದಂಧೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.









