ಮಡಿಕೇರಿ ಏ.3 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಾಮಪತ್ರ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಬೃಹತ್ ಮೆರವಣಿಗೆ ನಡೆಯಿತು.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಸಂಸದ ಪ್ರತಾಪ್ ಸಿಂಹ, ಅಶ್ವಥ್ ನಾರಾಯಣ್, ಶಾಸಕರುಗಳು, ಮಾಜಿ ಶಾಸಕರು, ಬಿಜೆಪಿ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.







