Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಾಟ್ಸ್‌ ಅಪ್‌ ನಲ್ಲಿ ನಿಮ್ಮ ನಾಯಕನ ಪರ ಪ್ರಚಾರ ಮಾಡುವುದು ಅಪರಾಧವೇ…..?*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಾಟ್ಸ್‌ ಅಪ್‌ ನಲ್ಲಿ ನಿಮ್ಮ ನಾಯಕನ ಪರ ಪ್ರಚಾರ ಮಾಡುವುದು ಅಪರಾಧವೇ…..?*

ಏಪ್ರಿಲ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಮಾ.4 NEWS DESK :  ಚುನಾವಣೆ ಘೋಷಣೆ ಆಗುತಿದ್ದಂತೆಯೇ ಮಾಧ್ಯಮಗಳಲ್ಲಿ ವಾಟ್ಸ್‌ ಅಪ್‌ ಅಥವಾ ಫೇಸ್‌ ಬುಕ್‌ ನಲ್ಲಿ ಯಾರೂ ಪ್ರಚಾರ ಮಾಡಬಾರದು ಎಂದು ಪದೇ ಪದೇ ಪ್ರಸಾರ ಮಾಡಲಾಯಿತು. ಬಹುಶಃ ಇದು ಅವರ ಮಾಹಿತಿಯ ಕೊರತೆ ಎಂದು ಕಾನೂನು ತಜ್ಞರು ಅಭಿಪ್ರಾಯಿಸಿದ್ದಾರೆ.
ಪ್ರಚಾರ ಮಾಡದೇ ಯಾವುದೇ ಅಭ್ಯರ್ಥಿ ಗೆಲ್ಲುವುದು ಅಸಾಧ್ಯ. ಕನಿಷ್ಟ ಪಕ್ಷ ತಾನು ಅಥವಾ ತಮ್ಮ ಪಕ್ಷ ಮಾಡಿರುವ ಕೆಲಸಗಳ ಬಗ್ಗೆ ಮತದಾರರಿಗೆ ತಿಳಿಸುವುದಕ್ಕಾದರೂ ಪ್ರಚಾರ ಮಾಡಲೇಬೇಕಾಗುತ್ತದೆ. ಅಭ್ಯರ್ಥಿಯೊಬ್ಬರು ಸಾರ್ವಜನಿಕ ಸಭೆ ನಡೆಸಿ ಲಕ್ಷಾಂತರ ಜನರನ್ನು ಸೇರಿಸಿ ಭಾಷಣ ಮಾಡಿ ಪ್ರಚಾರ ಮಾಡುತ್ತಾರೆ. ಇದು ಲಕ್ಷಾಂತರ ಜನರು ನೋಡುವ ಟಿವಿ ಚಾನೆಲ್‌ , ವೃತ್ತ ಪತ್ರಿಕೆಗಳಲ್ಲಿ ವರದಿ ಆಗುವ ಮೂಲಕ ಮತ್ತೆ ಲಕ್ಷಾಂತರ ಜನರನ್ನು ತಲುಪುತ್ತದೆ. ಬಹಿರಂಗವಾಗಿಯೇ ಪ್ರಚಾರ ಮಾಡುವ ಮೂಲಕ ರಾಜಕೀಯ ಪ್ರಚಾರಕ್ಕೆ ಅವಕಾಶ ಇರುವಾಗ ವಾಟ್ಸ್‌ ಅಪ್‌ , ಫೇಸ್‌ ಬುಕ್‌ ನಲ್ಲಿ ಏಕೆ ಕೂಡದು ?
ಅನೇಕ ವಾಟ್ಸ್‌ ಅಪ್‌ ಗ್ರೂಪ್‌ ಗಳಲ್ಲಿ ಈಗಾಗಲೇ ಗಾಳಿ ಸುದ್ದಿಗೆ ಬೆದರಿ ಅಡ್ಮಿನ್‌ ಗೆ ಮಾತ್ರ ಮಾಹಿತಿ ಶೇರ್‌ ಮಾಡುವ ಅವಕಾಶ ಮಾಡಿಕೊಂಡಿದ್ದಾರೆ. ಆದರೆ ಚುನಾವಣಾ ಆಯೋಗದ ಕಾನೂನು ಏನು ಹೇಳುತ್ತದೆ ಗೊತ್ತೇ ? ಲೋಕಸಭಾ ಅಭ್ಯರ್ಥಿಗಳಿಗೆ ಪ್ರಚಾರಕ್ಕಾಗಿ 75 ರಿಂದ 95 ಲಕ್ಷ ( ಕ್ಷೇತ್ರಗಳ ವಿಸ್ತೀರ್ಣ , ಜನಸಂಖ್ಯೆ ಮತ್ತು ಭೌಗೋಳಿಕತೆಯನ್ನು ಆಧರಿಸಿ) ರೂಪಾಯಿಗಳನ್ನು ವೆಚ್ಚ ಮಾಡಲು ಅವಕಾಶ ಇದೆ. ಆದರೆ ಇದನ್ನು ಮತದಾರರಿಗೆ ಅಮಿಷ ಒಡ್ಡಲು ಅಥವಾ ಲಂಚ ನೀಡಿ ಮತ ಗಳಿಸಲು ಬಳಸಲು ಅವಕಾಶವಿಲ್ಲ. ಪ್ರತಿ ವೆಚ್ಚವನ್ನೂ ದಾಖಲಿಸಿಕೊಂಡು ಚುನಾವಣಾ ಅಧಿಕಾರಿಗಳಿಗೆ ಲೆಕ್ಕ ನೀಡಬೇಕಿದೆ. ಲೆಕ್ಕ ನೀಡಿ ಅಭ್ಯರ್ಥಿಗಳು ಯಾವುದೇ ವೇದಿಕೆ ಅಥವಾ ಯಾವುದೇ ರೀತಿಯ ಪ್ರಚಾರ ಮಾಡಬಹುದಾಗಿದೆ. ಹೀಗಿರುವಾಗ ವಾಟ್ಸ್‌ ಅಪ್‌ ನಲ್ಲಿ ಪ್ರಚಾರ ಯಾಕೆ ನಿಷಿದ್ದ ಆಗುತ್ತದೆ ? ಹಾಗಾದರೆ ಪತ್ರಿಕೆಗಳ ತುಣುಕು , ವೀಡಿಯೋ ತುಣುಕು ಹಂಚಿಕೊಳ್ಳುವುದೂ ಕೂಡ ಅಪರಾಧವೇ ಆಗಬೇಕಲ್ಲವೇ ?
ಉದಾಹರಣೆಗೆ ನೀವು ಮೋದಿ ಅಥವಾ ರಾಹುಲ್‌ ಗಾಂಧಿ ಅಭಿಮಾನಿ ಎಂದಿಟ್ಟುಕೊಳ್ಳಿ. ನಿಮ್ಮ ನಾಯಕನ ಪರ ಮತ ಚಲಾಯಿಸಿ ಎಂದು ವಾಟ್ಸ್‌ ಅಪ್‌ ಬಳಕೆದಾರರಿಗೆ ಕರೆ ನೀಡುವುದು ಯಾವುದೇ ಕಾರಣಕ್ಕೂ ಕಾನೂನಿನ ಉಲ್ಲಂಘನೆ ಆಗುವುದಿಲ್ಲ. ಏಕೆಂದರೆ ಇದು ನಿಮಗೆ ಸಂವಿಧಾನವೇ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ದ ಹಕ್ಕು ಆಗಿದೆ. ಇದು ನೀವು ನಿಮ್ಮ ನಾಯಕನ ಪರ ಯಾವುದೇ ವೆಚ್ಚ ಇಲ್ಲದೆ ಮೆಸೇಜ್‌ ಕಳಿಸುವುದರಿಂದ ಚುನಾವಣಾ ಅಭ್ಯರ್ಥಿಯ ವೆಚ್ಚಕ್ಕೂ ಸೇರಿಸಲು ಬರುವುದಿಲ್ಲ. ನೀವು ನಿಮ್ಮ ನಾಯಕನ ಚಿತ್ರವನ್ನು ಡಿಪಿಯನ್ನಾಗಿ ಬದಲಾಯಿಸಿದರೆ ಅಥವಾ ಅರದಲ್ಲೂ ಪ್ರಚಾರ ಮಾಡಿದರೆ ಅದನ್ನು ನಿರ್ಭಂಧಿಸಲು ಆಗುವುದಿಲ್ಲ. ನಿಮ್ಮ ಮನೆಯ ಗೋಡೆಗೆ ಪೋಸ್ಟರ್‌ ಅಂಟಿಸಿ ಇಂತವರಿಗೆ ಮತ ನೀಡಿ ಎಂದು ಪ್ರಚಾರ ಮಾಡುವುದೂ ನೀತಿ ಸಂಹಿತೆಯ ಉಲ್ಲಂಘನೆ ಆಗುವುದಿಲ್ಲ , ಆದರೆ ಇದಕ್ಕೆ ತಗಲುವ ವೆಚ್ಚ ಅಭ್ಯರ್ಥಿಯ ವೆಚ್ಚದಲ್ಲಿ ಸೇರಿಸಬೇಕು ಅಷ್ಟೇ.
ಆದರೆ ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಂಡು ಯಾರ ವಿರುದ್ದವೂ ಅಪಪ್ರಚಾರ ಅಥವಾ ಸುಳ್ಳನ್ನು ಪ್ರಸಾರಿಸುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಚುನಾವಣಾ ನೀತಿ ಸಂಹಿತೆ ಇಲ್ಲದಿದ್ದರೂ ಕೂಡ ಇದು ಅಪರಾಧವೇ ಎಂಬುದನ್ನು ಮರೆಯಬಾರದು.
ಇತ್ತೀಚೆಗೆ ಚುನಾವಣಾ ಆಯೋಗವು ಕೇಂದ್ರ ಪ್ರಚಾರ ಇಲಾಖೆ ಪ್ರತಿಯೊಬ್ಬರ ಮೊಬೈಲ್‌ ಗೂ ವೀಕ್ಷಿತ್‌ ಭಾರತ್‌ ಮೆಸೇಜ್‌ ಕಳಿಸುವುದನ್ನು ನಿರ್ಬಂಧಿಸಿದೆ. ಸರ್ಕಾರದ ವೆಚ್ಚದಲ್ಲಿ ಚುನಾವಣಾ ಸಂದರ್ಭದಲ್ಲಿ ಸಾಧನೆಯನ್ನು ಜನರಿಗೆ ತಿಳಿಸುವುದು ನೀತಿ ಸಂಹಿತೆಯ ಉಲ್ಲಂಘನೆ ಎಂಬ ಕಾರಣಕ್ಕಾಗಿ ಇದನ್ನು ನಿರ್ಬಂಧಿಸಲಾಗಿದೆ.
ಚುನಾವಣಾ ಆಯೋಗದ ನಿರ್ಬಂಧಗಳು ಏನೇ ಇದ್ದರೂ ಆನ್‌ ಲೈನ್‌ ಅಥವಾ ಡಿಜಿಟಲ್‌ ಜಾಲತಾಣದಲ್ಲಿ ಪ್ರಚಾರಕ್ಕಾಗಿ ಮಾಡಿದ ವೆಚ್ಚವು ಅಭ್ಯರ್ಥಿಯ ಚುನಾವಣಾ ವೆಚ್ಚದಲ್ಲಿ ಸೇರಿರಬೇಕು ಅಷ್ಟೇ. ಇದನ್ನು ಗಮನದಲ್ಲಿಟ್ಟುಕೊಂಡು ನೀವು ಯಾರ ಪರವಾಗಿಯಾದರೂ ಪ್ರಚಾರ ಮಾಡಿಕೊಳ್ಳಿ. ಅದು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ. ಅದನ್ನು ಅಂಜಿಕೆ ಅಳುಕಿಲ್ಲದೇ ಚಲಾಯಿಸಿ.

ವರದಿ : ಕೋವರ್‌ ಕೊಲ್ಲಿ ಇಂದ್ರೇಶ್‌ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.