Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*
  • *ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*
  • *ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*
  • *ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*
  • *ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಸಭೆ : ಕಾಂಗ್ರೆಸ್ ಗೆಲುವಿಗೆ ಶಕ್ತಿ ಮೀರಿ ಶ್ರಮಿಸಿ : ಧರ್ಮಜ ಉತ್ತಪ್ಪ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಸಭೆ : ಕಾಂಗ್ರೆಸ್ ಗೆಲುವಿಗೆ ಶಕ್ತಿ ಮೀರಿ ಶ್ರಮಿಸಿ : ಧರ್ಮಜ ಉತ್ತಪ್ಪ ಕರೆ*

ಏಪ್ರಿಲ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.6 NEWS DESK : ಲೋಕಸಭಾ ಚುನಾವಣೆಯ ಮತದಾನವು ಇದೇ ಏ.26ರಂದು ನಡೆಯಲಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವಿಗೆ ಪ್ರತಿ ಮತಗಟ್ಟೆಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬಿಎಲ್‍ಎ ಗಳು, ಡೆಲಿಗೇಟರ್‍ಗಳು, ವಲಯ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರುಗಳು ಶಕ್ತಿ ಮೀರಿ ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಕರೆ ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ಬ್ಲಾಕ್ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಮತಗಟ್ಟೆ ಸಮಿತಿ ಅಧ್ಯಕ್ಷರುಗಳ, ಬಿಎಲ್‍ಎ ಗಳ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಡಿಕೇರಿ ಬ್ಲಾಕಿನಲ್ಲಿ 72 ಮತಗಟ್ಟೆಗಳಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗಳಿಸಿದ ಮತಕ್ಕಿಂತ ಹೆಚ್ಚಿನ ಮತವನ್ನು ಪಡೆಯುವಲ್ಲಿ ಕಾರ್ಯಕರ್ತರು ಮುಂದಾಗಬೇಕು ಹಾಗೂ ಸರ್ಕಾರ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತಯಾಚಿಸಬೇಕೆಂದರು.
ಕೊಡಗು ಜಿಲ್ಲಾ ಕಾಂಗ್ರೆಸ್‍ನ ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪಕ್ಷ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗುವುದಾಗಿ ಮತದಾರರಿಗೆ ಗ್ಯಾರಂಟಿ ಕಾರ್ಡ್‍ಗಳನ್ನು ನೀಡಿ ಅವರೆಲ್ಲರ ಬೆಂಬಲದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂತು. ನುಡಿದಂತೆ ನಡೆದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಉಚಿತ ಪ್ರಯಾಣ ಮತ್ತು ಪದವಿದರ ಹಾಗೂ ಡಿಪ್ಲೋಮಾದಾವರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ ಎಂದರು.
ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಪ್ರಮುಖ ಗ್ಯಾರಂಟಿಗಳೊಂದಿಗೆ 20 ವಿಶೇಷ ಕಾರ್ಯಕ್ರಮಗಳನ್ನು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಅದರಲ್ಲಿ ಐದು ಭಾಗ್ಯಗಳಾದ ಯುವ ನ್ಯಾಯ, ಪಾಲುದಾರಿಕೆ ನ್ಯಾಯ, ಮಹಿಳಾ ನ್ಯಾಯ, ಶ್ರಮಿಕ ನ್ಯಾಯ ಹಾಗೂ ರೈತರ ಸಾಲಮನ್ನಾ ನ್ಯಾಯವನ್ನು ಸೇರಿಸಿದೆ ಎಂದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಗರಾಧ್ಯಕ್ಷ ಬಿ.ವೈ.ರಾಜೇಶ್, ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.ನಟೇಶ್ ಗೌಡ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಹನೀಫ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಮಿತಿ ಸಂಯೋಜಕ ತೆನ್ನಿರಾ ಮೈನಾ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಮತ್ತಿತರರು ಹಾಜರಿದ್ದರು.
ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಸ್ವಾಗತಿಸಿದರು, ಮಡಿಕೇರಿ ಬ್ಲಾಕ್ ಸಮಿತಿ ಉಪಾಧ್ಯಕ್ಷ ರಾವೂಫ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಏಪ್ರಿಲ್ 24, 2026

*ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*

ಏಪ್ರಿಲ್ 24, 2026

*ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*

ಏಪ್ರಿಲ್ 24, 2026

*ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*

ಏಪ್ರಿಲ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು ಏ.24 NEWS DESK : ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೀಯಕಪೂವಂಡ ಕುಟುಂಬ ಆಯೋಜಿತ 5ನೇ ವರ್ಷದ ಕೊಡವ…

*ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*

ಏಪ್ರಿಲ್ 24, 2026

*ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*

ಏಪ್ರಿಲ್ 24, 2026

*ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*

ಏಪ್ರಿಲ್ 24, 2026

*ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*

ಏಪ್ರಿಲ್ 24, 2026

*ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.