Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂತಂಡ ಪಾವ೯ತಿ ಪೂವಯ್ಯ ಅವರ ಕುರಿತಾದ “ಅವ್ವ” ಪುಸ್ತಕ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂತಂಡ ಪಾವ೯ತಿ ಪೂವಯ್ಯ ಅವರ ಕುರಿತಾದ “ಅವ್ವ” ಪುಸ್ತಕ ಬಿಡುಗಡೆ*

ಏಪ್ರಿಲ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.7 NEWS DESK : ಗಾಂಧೀಜಿ ಅನುಯಾಯಿಯಾಗುವುದು ಸುಲಭವಲ್ಲದ ದಿನಗಳಲ್ಲಿ ಗಾಂಧೀಜಿ ತತ್ವಾದಶ೯ಗಳನ್ನು ಜೀವನದಲ್ಲಿ ಹಾಸುಹೊಕ್ಕಾಗಿಸಿ ಸರಳವಾಗಿ ಆದಶ೯ಪ್ರಾಯವಾಗಿ ಬದುಕಿದ ಹಿರಿಮೆ ಕೂತಂಡ ಪಾವ೯ತಿ ಪೂವಯ್ಯ ಅವರಿಗೆ ಸಲ್ಲಬೇಕೆಂದು ಹಿರಿಯ ಪತ್ರಕತ೯ ಕೆ.ಬಿ.ಗಣಪತಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಭಾರತೀಯ ವಿದ್ಯಾಭವನದಲ್ಲಿ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ವತಿಯಿಂದ ಆಯೋಜಿತ ಕೂತಂಡ ಪಾವ೯ತಿ ಪೂವಯ್ಯ ಅವರ ಕುರಿತಾದ ಅವ್ವ ಪುಸ್ತಕ ಲೋಕಾಪ೯ಣೆಗೊಳಿಸಿ ಮಾತನಾಡಿದ ಕೆ.ಬಿ.ಗಣಪತಿ, ಪಂದ್ಯಂಡ ಗಣಪತಿಯವರು ಅಂದಿನ ಕಾಲದಲ್ಲಿ ಕೊಡಗಿನ ಗಾಂಧಿ ಎಂದು ಖ್ಯಾತರಾಗಿದ್ದರೆ ಕೂತಂಡ ಪೂವ೯ತಿ ಪೂವಯ್ಯ ಅವರು ಕೊಡಗಿನ ಸರೋಜಿನಿ ನಾಯ್ದು ಎಂದು ಹೆಸರುವಾಸಿಯಾಗಿದ್ದರು ಎಂದು ಸ್ಮರಿಸಿಕೊಂಡರು.  ಕೂತಂಡ ಪಾವ೯ತಿ ಅವರನ್ನು ಪ್ರತ್ಯಕ್ಷ ಕಂಡವುರು ಕೆಲವೇ ಕೆಲವರಾದರೂ ಪಾವ೯ತಿ  ಅವರ ಜೀವನಾದಶ೯ಗಳನ್ನು ಅರಿತವರು ಅನೇಕರಿದ್ದಾರೆ.  ತನ್ನ ಬರವಣಿಗೆ ಮೂಲಕ ಕೊಡವರಂಥ ಸಣ್ಣ ಸಮುದಾಯವನ್ನು ಭಾರತಾದ್ಯಂತ ಪ್ರಚುರಪಡಿಸಿದ ಕೀತಿ೯ ಅಂದಿನ ಕಾಲದ  ಅಗ್ರ ಮಹಿಳಾ ಲೇಖಕಿಯಾಗಿದ್ದ  ಪಾವ೯ತಿ ಪೂವಯ್ಯನವರಿಗೆ ಸಲ್ಲುತ್ತದೆ ಎಂದು ಗಣಪತಿ ಶ್ಲಾಘಿಸಿದರು.
ಕೊಡವ, ಕನ್ನಡ, ಇಂಗ್ಲೀಷ್ ಭಾಷೆಯಲ್ಲಿ ಹಿಡಿತ ಹೊಂದುವ ಮೂಲಕ ಅಂದಿನ ಕಾಲಘಟ್ಟದಲ್ಲಿಯೇ ಕೊಡಗಿನ ಪ್ರಥಮ ಮಹಿಳಾ ಲೇಖಕಿಯಾಗಿ ಪಾವ೯ತಿ ಪೂವಯ್ಯ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರವಾದದ್ದು ಎಂದೂ ಗಣಪತಿ ಬಣ್ಣಿಸಿದರು. ಸಾಹಿತಿಯಾದಂತೆಯೇ ಜೀವನದಲ್ಲಿಯೂ ತನ್ನದೇ ಆದಶ೯ ಹೊಂದಿದ್ದ ಪಾವ೯ತಿ ಓವ೯ ಮಾದರಿ ತಾಯಿ ಕೂಡ ಆಗಿ ಕುಟುಂಬವನ್ನು ಅಚ್ಚುಕಟ್ಟಾಗಿ ನಿವ೯ಹಿಸುತ್ತಾ ಬಂದದ್ದೂ ಹೆಗ್ಗಳಿಕೆಯಾಗಿದೆ ಎಂದೂ ಗಣಪತಿ ಹೇಳಿದರು.
ಮಡಿಕೇರಿಯ ಹಿರಿಯ ವೈದ್ಯ ಡಾ.ಎಂ.ಜಿ. ಪಾಟ್ಕರ್ ಮಾತನಾಡಿ,  ಅವ್ವ ಎಂಬುದು ಸರಳ ಶಬ್ದವಾಗಿದ್ದರೂ ಅವ್ವ ಪದ ನೀಡುವ ಅಥ೯ ವಿಶಾಲವಾದದ್ದು ಎಂದರಲ್ಲದೇ,  ಕೂತಂಡ ಪಾವ೯ತಿ ಪೂವಯ್ಯ ಅವರು ಜೀವಿಸಿದ್ದ ಕಾಲದಲ್ಲಿ ಭಾರತ ಅತ್ಯಂತ ಸಂಕಷ್ಟದ ದಿನಗಳನ್ನು ಕಂಡಿತ್ತು, ಬಡತನ ಎಲ್ಲಾ ಕಡೆ ತಾಂಡವವಾಡಿತ್ತು. ಇಂಥ ದಿನಗಳಲ್ಲಿಯೂ ಸಾಹಿತ್ಯ ಶ್ರೀಮಂತಿಕೆ ಮೆರೆದವರು ಪಾವ೯ತಿಯಾಗಿದ್ದರು ಎಂದು ಹೇಳಿದರು.
ಪ್ರಕೖತ್ತಿ ನಾಶ ಇಂದಿನ ಸಮಾಜದ ಮುಂದಿರುವ ಬಹಳ ದೊಡ್ಡ ಸವಾಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಡಾ. ಪಾಟ್ಕರ್, ನಿಸಗ೯ದ ನಾಶದೊಂದಿಗೆ ಮನುಷ್ಯತ್ವ, ಮಾನವೀಯತೆಯೆ ನಾಶ ಕೂಡ ಉಂಟಾಗುತ್ತದೆ ಎಂದೂ ಎಚ್ಚರಿಸಿದರು.
ಅವ್ವ ಕೖತಿಯ ಲೇಖಕಿ  ಡಾ.ನಯನ ಕಶ್ಯಪ್ ಮಾತನಾಡಿ,  ಪೂವ೯ತಿ ಪೂವಯ್ಯ ಅವರ ಜೀವನ ಮತ್ತು ಲೇಖನ ಎರಡೂ ಸರಳವಾಗಿತ್ತು. ಹೀಗಾಗಿಯೇ ಅವರು ಜನಮಾನಸದಲ್ಲಿ ಸ್ಮರಣೀಯವಾಗಿ ಉಳಿದರು ಎಂದರಲ್ಲದೇ,  ಆ ಕಾಲದ ಆಶೋತ್ತರಳನ್ನು ಅಥ೯ ಮಾಡಿಕೊಂಡು ಲೇಖನಗಳನ್ನು ಬರೆದದ್ದು ಕೂತಂಡ ಪಾವ೯ತಿ ಪೂವಯ್ಯ ಅವರ ಹೆಗ್ಗಳಿಕೆಯಾಗಿದೆ ಎಂದರು.  ಸಾಹಿತ್ಯ ಎಂದಿಗೂ ಘನಗಾಂಭೀಯ೯ದಿಂದ ಕೂಡಿರಬೇಕಾಗಿಲ್ಲ. ಸರಳ ರೂಪದಲ್ಲಿಯೂ ಓದುಗನನ್ನು ಚಿಂತನೆಗೆ ಒಳಪಡಿಸುವುದೇ ನಿಜವಾದ ಸಾಹಿತ್ಯ ಎಂದು ನಯನ ಹೇಳಿದರು.
ತನ್ನ ತಾಯಿ ಪಾವ೯ತಿ ಕುರಿತಂತೆ ಕೂತಂಡ ಉತ್ತಪ್ಪ ಕೆಲವೊಂದು ನೆನಪುಗಳನ್ನು ಸಭಿಕರ ಮುಂದಿಟ್ಟರು. ಭಾರತೀಯ ವಿದ್ಯಾಭವನದ ಕೊಡಗು ಕೇಂದ್ರದ ಅಧ್ಯಕ್ಷ ಕೆ.ಎಸ್. ದೇವಯ್ಯ ಸಭೆಯಲ್ಲಿ ಮಾತನಾಡಿದರು. ದೀಪಿಕಾ ಅಪ್ಪಯ್ಯ  ನಿರೂಪಿಸಿ, ಬಾಲಾಜಿ ಕಶ್ಯಪ್ ವಂದಿಸಿದರು.
::: ಕವಿತೆಗಳ ಮೌಲ್ಯ ಕುಸಿಯುತ್ತಿದೆ :::
ಈಗಿನ  ಕವಿತೆಗಳಲ್ಲಿ ಮೌಲ್ಯ ಕುಸಿಯುತ್ತಿದೆ, ತೋಚಿದ್ದು ಗೀಚಿದಂತೆ ಕಂಡು ಬರುತ್ತಿದೆ, ಹೀಗಾಗಿಯೇ ಅಥ೯ಹೀನ ಕವಿತೆಗಳು  ಹೆಚ್ಚಾಗುತ್ತಿದೆ.  ಹೀಗಿರುವಾಗ ಅಂದಿನ ಕಾಲಮಾನದಲ್ಲಿಯೇ ಮೌಲ್ಯ, ಸತ್ವಯುತ ಕವನ, ಲೇಖನಗಳನ್ನು ಬರೆದ ಕೂತಂಡ ಪಾವ೯ತಿ ಪೂವಯ್ಯ ಸದಾ ಆದಶ೯ಪ್ರಾಯರಾಗುತ್ತಾರೆ. – ಡಾ..ಎಂ..ಜಿ.  ಪಾಟ್ಕರ್, ಹಿರಿಯ ವೈದ್ಯರು. ಮಡಿಕೇರಿ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.