Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹತಾಶೆಯಿಂದ ಹಾದಿ ತಪ್ಪಿಸುವ ಯತ್ನ : ಶಾಸಕರ ಹೇಳಿಕೆಗೆ ವಿರಾಜಪೇಟೆ ಬಿಜೆಪಿ ಆಕ್ಷೇಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹತಾಶೆಯಿಂದ ಹಾದಿ ತಪ್ಪಿಸುವ ಯತ್ನ : ಶಾಸಕರ ಹೇಳಿಕೆಗೆ ವಿರಾಜಪೇಟೆ ಬಿಜೆಪಿ ಆಕ್ಷೇಪ*

ಏಪ್ರಿಲ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದರಿಂದ ಹತಾಶೆಗೊಂಡಿರುವ ವಿರಾಜಪೇಟೆ ಕ್ಷೇತ್ರದ ಶಾಸಕರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಜನರ ಕೈಗೆ ಸಿಗುವುದಿಲ್ಲವೆಂದು ಹೇಳಿಕೆ ನೀಡುವ ಮೂಲಕ ಮತದಾರರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ರಾಜಪ್ರಭುತ್ವ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯದುವೀರ್ ಅವರು ಒಬ್ಬ ಸಾಮಾನ್ಯ ವ್ಯಕ್ತಿ ಮತ್ತು ಈಗ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಒಡೆಯರ್ ವಂಶಸ್ಥರಾಗಿ ಹಾಗೂ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರ ಸಂಕಷ್ಟದ ಬದುಕನ್ನು ಬಹಳ ಹತ್ತಿರದಿಂದ ಬಲ್ಲವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜವಂಶಸ್ಥರು ಅರಮನೆಯಲ್ಲಿದ್ದುಕೊಂಡೇ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದ ಉದಾಹರಣೆಗಳು ಇತಿಹಾಸದ ಪುಟಗಳಲ್ಲಿದೆ. ರಾಜ್ಯದ ರೈತರು ಹಾಗೂ ಜನರಿಗಾಗಿ ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಜನರು ಇಂದಿಗೂ ಇದೆಲ್ಲವನ್ನು ಮರೆತಿಲ್ಲ, ಆದ್ದರಿಂದ ಯದುವೀರ್ ಅವರ ಗೆಲುವು ನಿಶ್ಚಿತವಾಗಿದ್ದು, ಇವರು ಸಂಸದರಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಗತಿ ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರಾದ ನಾವು ಎದೆತಟ್ಟಿ ಹೇಳುತ್ತಿದ್ದೇವೆ “ರಾಜವಂಶಸ್ಥ ಯದುವೀರ್ ಅವರು ಅತಿ ಸುಲಭವಾಗಿ ಜನಸಾಮಾನ್ಯರಿಗೆ ಸಿಗಲಿದ್ದಾರೆ.” ಅವರ ಅನುಪಸ್ಥಿತಿಯ ಸಂದರ್ಭ ಕಾರ್ಯಕರ್ತರಾದ ನಾವು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇವೆ, ಸಂಸದರೊಂದಿಗೆ ಸಂಪರ್ಕ ಸಾಧಿಸುತ್ತೇವೆ. ಇದೇ ಕಾರಣದಿಂದ ಮತ್ತು ವಿಶ್ವಾಸದಿಂದ ಜನ ಬಿಜೆಪಿಗೆ ಅತಿಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಲಿದ್ದಾರೆ. ಇದನ್ನು ಅರಿತಿರುವ ಶಾಸಕರು ಕಾಂಗ್ರೆಸ್ ಅಭ್ಯರ್ಥಿಯ ಪರ ಮಾತನಾಡದೆ ಬಿಜೆಪಿ ಅಭ್ಯರ್ಥಿಯನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಯದುವೀರ್ ಅವರ ರಾಜವಂಶಸ್ಥ ಕುಟುಂಬ ಜಾತಿ, ಮತ ಬೇಧವಿಲ್ಲದೆ ಎಲ್ಲಾ ಧರ್ಮ, ಪಂಗಡದವರಿಗೂ ಸಹಾಯ ಮಾಡಿದೆ. ದಾನ ಧರ್ಮಗಳ ಮೂಲಕ ಹೊಸ ಜೀವನವನ್ನು ರೂಪಿಸಿಕೊಟ್ಟಿದೆ. ಮೈಸೂರು ಭಾಗದ ಜನ ಇಂದಿಗೂ ಒಡೆಯರ್ ಕುಟುಂಬದ ನೆರವನ್ನು ನೆನಪಿಸಿಕೊಳ್ಳುತ್ತಾರೆ. ಯದುವೀರ್ ಅವರ ಪರ ಎಲ್ಲರೂ ಮಾತನಾಡುತ್ತಿದ್ದಾರೆ. ಋಣ ತೀರಿಸುವ ಮತ್ತು ಮತ ನೀಡುವ ಭರವಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನ ಒಡೆಯರ್ ಕುಟುಂಬದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಕೊಡಗಿನ ಜನರಿಗೂ ಯದುವೀರ್ ಅವರ ಬಗ್ಗೆ ಅಪಾರ ಗೌರವವಿದೆ. ಇದೇ ಕಾರಣದಿಂದ ಸುಮಾರು 2ಲಕ್ಷ ಮತಗಳ ಅಂತರದಿಂದ ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ರಾಕೇಶ್ ದೇವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಾಸಕರು ಬಿಜೆಪಿ ಅಭ್ಯರ್ಥಿಯ ಕುರಿತು ಕ್ಷುಲ್ಲಕ ಹೇಳಿಕೆ ನೀಡುವುದನ್ನು ಮೊದಲು ನಿಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿ ಹೊಂದಿರುವ ಗುಣಲಕ್ಷಣಗಳನ್ನು ಗುಣಗಾನ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.