Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ಅಪಹರಣ- ದರೋಡೆ ಪ್ರಕರಣ : 8 ಆರೋಪಿಗಳ ಬಂಧನ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಕುಶಾಲನಗರ : ಅಪಹರಣ- ದರೋಡೆ ಪ್ರಕರಣ : 8 ಆರೋಪಿಗಳ ಬಂಧನ

ಏಪ್ರಿಲ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.7 NEWS DESK : ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏ.4ರಂದು ವ್ಯಕ್ತಿಯೋರ್ವರನ್ನು ಅಪಹರಿಸಿ ಚಿನ್ನಾಭರಣ ಮತ್ತು ನಗದು ದೋಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.
ಮೈಸೂರು ರಾಜೀವ್ ನಗರ 2ನೇ ಹಂತದ ನಿವಾಸಿ ಯಾಸಿನ್(21), ಶ್ರೀರಾಮ್‌ಪುರ ನಿವಾಸಿ ರುಕ್ಸಾನ(23), ಗೌಸಿಯ ನಗರ ರಿಯಾಜ್ ಜಿನ್ನಾ ಮಸೀದಿ ಸಮೀಪದ ನಿವಾಸಿ ಸಹಬಾಜ್(28), ಗೌಸಿಯ ನಗರ 10ನೇ ಕ್ರಾಸ್ ನಿವಾಸಿ ಅಬ್ದುಲ್(21) ರೇಣುಕಾ ದೇವಿ ಬ್ಲಾಕ್, 3ನೇ ಕ್ರಾಸ್, ಗೌಸಿಯ ನಗರದ ಸುಹೇಲ್ ಅಹಮ್ಮದ್(30), ಪಿರಿಯಾಪಟ್ಟಣ ನಿವಾಸಿ ಯಾಸಿನ್(23), ಗೌಸಿಯಾ ನಗರದ ಪೈಜಲ್ ಖಾನ್(23), ಮೈಸೂರು ರಾಜೀವ್ ನಗರ 3ನೇ ಹಂತದ ಮುದಾಸಿರ್(24) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ ಗೌಸಿಯಾ ನಗರದ ಪಿಳ್ಳೆ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
::: ಅಪಹರಣ ಮತ್ತು ದರೋಡೆ :::
ಏ.4ರಂದು ರಾತ್ರಿ 7.30 ಗಂಟೆಗೆ ಕುಶಾಲನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಣಿವೆ ಬಸವನಹಳ್ಳಿ ಗ್ರಾಮದ ಹೇಮಂತ್ ಎಂಬವರನ್ನು ಸ್ಕಾರ್ಪಿಯೋ ವಾಹನದಲ್ಲಿ ಬಂದಿದ್ದ ಆರೋಪಿಗಳು ಬಲವಂತವಾಗಿ ಅಪಹರಿಸಿ ಬೆಟ್ಟದಪುರ ರಸ್ತೆಯಲ್ಲಿ ಚಾಕು ತೋರಿಸಿ ಬೆದರಿಕೆ ಹಾಕಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಾತ್ರವಲ್ಲದೇ ಹೇಮಂತ್ ಅವರ ಕೈಯ್ಯಲ್ಲಿದ್ದ ಒಟ್ಟು 14 ಗ್ರಾಂ ತೂಕದ 6 ಚಿನ್ನದ ಉಂಗುರಗಳು, 7 ಗ್ರಾಂ ತೂಕದ 1 ಬ್ರಾಸ್ ಲೇಟ್, 12 ಗ್ರಾಂ ತೂಕದ 1 ಚಿನ್ನದ ಚೈನ್ ಹಾಗೂ ಲಾಕೆಟ್, 2 ಎ.ಟಿ.ಎಂ ಕಾರ್ಡ್ಗಳು, 2 ಮೊಬೈಲ್ ಮತ್ತು 1 ಸ್ಮಾರ್ಟ್ ವಾಚ್ ಹಾಗೂ ಪರ್ಸ್ ಸಹಿತ 4 ಸಾವಿರ ರೂ. ನಗದನ್ನು ದೋಚಿ ಪರಾರಿಯಾಗಿದ್ದರು. ಅಲ್ಲದೆ ನನ್ನ ಸ್ಕೂಟಿಯನ್ನು ತೆಗೆದುಕೊಂಡು ಹೋಗಿರುವುದಾಗಿ ಆರೋಪಿಸಿ ಹೇಮಂತ್ ಏ.5ರಂದು ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಪಹರಣ ಮತ್ತು ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ಆರೋಪಿಗಳನ್ನು ಬಂಧಿಸಿ ಸ್ವತ್ತುಗಳನ್ನು ವಶಪಡಿಸಿಕೊಂಡರು.
ಬAಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸ್ಥಾರ್ಪಿಯೋ ವಾಹನ(ಕೆಎ.01-ಎಂಜಿ.0602), 1.82 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನಾಭರಣಗಳು, 50 ಸಾವಿರ ಬೆಲೆಯ 2 ಮೊಬೈಲ್‌ಗಳು, ಹೇಮಂತ್ ಅವರ 30 ಸಾವಿರ ಬೆಲೆ ಬಾಳುವ ಸ್ಕೂಟಿ(ಕೆಎ.12-ಯು.7173), ಮಹಿಳಾ ಆರೋಪಿ ರುಕ್ಸಾನ ಕೃತ್ಯಕ್ಕೆ ಉಪಯೋಗಿಸಿದ 30 ಸಾವಿರ ಮೌಲ್ಯದ ಸ್ಕೂಟಿ, 5 ಸಾವಿರ ನಗದು ಹಾಗೂ ಆರೋಪಿಗಳಿಗೆ ಸೇರಿದ 7 ಮೊಬೈಲ್‌ಗಳು ಸೇರಿದಂತೆ ಒಟ್ಟು 5.97 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್.ಪಿ. ಮಾಹಿತಿ ನೀಡಿದರು.
ಸೋಮವಾರಪೇಟೆ ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ, ಕುಶಾಲನಗರ ಟೌನ್ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಬಿ.ಜಿ.ಪ್ರಕಾಶ್, ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.