ಸುಂಟಿಕೊಪ್ಪ ಏ.8 NEWS DESK : ಹರದೂರು ಗ್ರಾಮದ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ವತಿಯಿಂದ ಆದಿನಾಗಬ್ರಹ್ಮ ಮೊಗೇರ ದೈವಗಳ ಹಾಗೂ ಕೊರಗ ತನಿಯ ದೈವ ಮತ್ತು ಮಂತ್ರವಾದಿ ಗುಳಿನಗ 84ನೇ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.
ಆಯುಧಾ ಪೂಜೆ, ನಿತ್ಯ ಪೂಜೆ ಮತ್ತು ಭಂಡಾರ ಹೊರಡುವುದರ ಮೂಲಕ ನೇಮೋತ್ಸವಕ್ಕೆ ಚಾಲನೆ ದೊರೆಯಿತು.
ನಂತರ ಮಂತ್ರವಾದಿ ಗುಳಿಗನ ನೇಮ ನಡೆಯಿತು. ರಾತ್ರಿ ಆದಿನಾಗಬ್ರಹ್ಮ ಮೊಗೇರ ದೈವಗಳ ಆದಿಮಾಯೆ ತನ್ನಿ ಮಾನಿಗ ಗರಡಿ ಇಳಿಯಿತು.
ಮರುದಿನ ದೇವಾಲಯದ ಮತ್ತು ಭಕ್ತರ ಸೇರಿದಂತೆ ಮೂರು ಕೊರಗ ತನಿಯ ದೈವದ ಕಾರಣಿಕ ನೇಮೋತ್ಸವವು ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಣಿಕ ದೈವಗಳಿಗೆ ಹರಕೆ ಮತ್ತು ಕಾಣಿಕೆ ಅರ್ಪಿಸಿದರು.
ಎರೆದಿದ್ದ ಭಕ್ತಾಧಿಗಳಿಗೆ ಗಂಧ ಪ್ರಸಾದ ಹಾಗೂ ಅನ್ನದಾನ ನೆರವೇರಿತು.
ಸುಂಟಿಕೊಪ್ಪ, ಹರದೂರು, ಮಾದಾಪುರ, ಮಡಿಕೇರಿ, ಕುಶಾಲನಗರ, ಮೈಸೂರು, ಮಂಗಳೂರು ಸೂಳ್ಯ, ಪುತ್ತೂರು, ಸಕಲೇಶಪುರ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ನೇಮೋತ್ಸವ ವೀಕ್ಷಿಸಿದರು.








