Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಸಂಸ್ಕೃತ, ಜ್ಞಾನವಂತ ಅಭ್ಯರ್ಥಿ ಯದುವೀರ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಸುಸಂಸ್ಕೃತ, ಜ್ಞಾನವಂತ ಅಭ್ಯರ್ಥಿ ಯದುವೀರ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ

ಏಪ್ರಿಲ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.8 NEWS DESK : ದೇಶಕ್ಕೆ ಮೋದಿ ಎಂಬ ಶಕ್ತಿ ಅನಿವಾರ್ಯ, ಈ ಶಕ್ತಿಗೆ ಪರ್ಯಾಯವೆಂಬ ಪದವೇ ಉದ್ಭವಿಸುವುದಿಲ್ಲ. ಚುನಾವಣಾ ಹಬ್ಬದಲ್ಲಿ ಕಮಲ ಅರಳುವುದು ಗ್ಯಾರಂಟಿ ಎಂಬುವುದು ಈಗಾಗಲೇ ಜಗಜ್ಜಾಹೀರಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.
ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಸೋಮವಾರಪೇಟೆಯ ಜೇಸೀ ವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆ ಯಾವತ್ತಿಗೂ ಬಿಜೆಪಿ ಭದ್ರಕೋಟೆ. ಸುಶಿಕ್ಷಿತ, ಬುದ್ದಿವಂತ ಮತದಾರರಿರುವ ಕೊಡಗಿನವರು ಉತ್ತಮ ಅಯ್ಕೆಯನ್ನೇ ಮಾಡಲಿದ್ದಾರೆ. ಮಾಹಿತಿ ತಂತ್ರಜ್ಞಾನದ ಬಗ್ಗೆ ಅಪಾರ ಜ್ಞಾನ ಹೊಂದಿರುವ ಸುಸಂಸ್ಕೃತ ಕುಟುಂಬದ ಹಿನ್ನೆಲೆಯುಳ್ಳ ಯದುವೀರ್ ಅವರು ಅತ್ಯಧಿಕ ಮತಗಳ ಅಂತರದಿಂದ ಜಯಗಳಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಮಾತನಾಡಿ, ಭವಿಷ್ಯದಲ್ಲಿ ಶ್ರೇಷ್ಠ ಭಾರತ ನಿರ್ಮಾಣ ಮೋದಿಯವರಿಂದ ಮಾತ್ರ ಸಾಧ್ಯ. ಇಂದು ದೇಶ ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರೆದಿದ್ದು, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಂಚೂಣಿಯಲ್ಲಿದೆ ಎಂದಾದರೆ ಅದು ಮೋದಿಯಂತಹ ಸಮರ್ಥ ನಾಯಕರನ್ನೂಳಗೊಂಡ ತಂಡದಿಂದ ಮಾತ್ರ ಸಾಧ್ಯ. ಈಗಾಗಲೇ ಭಾರತ ವಿಭಜನೆ ಮಾಡುವಂತಹ ಹೇಳಿಕೆಗಳನ್ನು ನೀಡುವಂತಹ ಹುನ್ನಾರ ನಡೆಯುತ್ತಿರುವುದು ಕೂಡ ಆತಂಕಕಾರಿ ವಿಷಯವಾಗಿದೆ ಎಂದ ಅವರು ಭವಿಷ್ಯದಲ್ಲಿ ಆರ್ಥಿಕ ಪ್ರಗತಿ, ಭಾರತದ ಸಂಸ್ಕೃತಿ, ಪರಂಪರೆಯ ರಕ್ಷಣೆ, ಶ್ರೇಷ್ಠ ಭಾರತ ನಿರ್ಮಾಣ ಆಗಬೇಕಾದರೆ ಜಿಲ್ಲೆಯ ಪ್ರಭುದ್ದ ಮತದಾರರು ಯೋಚಿಸಿ ಮತದಾನ ಮಾಡುವ ಅಗತ್ಯವಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಅಧ್ಯಕ್ಷತೆ ವಹಿಸಿದ್ದರು.ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜೆಡಿಎಸ್ ಪಕ್ಷದ ಪ್ರಮುಖರಾದ ಸಿ.ಎಲ್.ವಿಶ್ವ ಮಾತನಾಡಿದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಹಾಗೂ ತಾಲೂಕು ಘಟಕದ ಬಿಜೆಪಿ ಪದಾಧಿಕಾರಿಗಳು, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.