Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹಲವು ಬೆಂಬಲಿಗರೊಂದಿಗೆ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಬಿಜೆಪಿಗೆ ಸೇರ್ಪಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹಲವು ಬೆಂಬಲಿಗರೊಂದಿಗೆ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಬಿಜೆಪಿಗೆ ಸೇರ್ಪಡೆ

ಏಪ್ರಿಲ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.8 NEWS DESK : ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚಯ್ಯ ಅವರ ಕಾರ್ಯದರ್ಶಿಯಾಗಿದ್ದ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.
ಕುಶಾಲನಗರದ ಕಾರು ನಿಲ್ದಾಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಸಮ್ಮುಖದಲ್ಲಿ ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಚನ್ನಪಂಡ ದರ್ಶನ್, ಅಜ್ಜಮಕ್ಕಡ ನವೀನ್, ಸುಮಂತ್ ಪೂಜಾರಿ, ನಿತಿನ್ ಪೂಜಾರಿ, ತಂಬುಕುತ್ತಿರ ಮೊಣ್ಣಯ್ಯ, ಸಿ.ಡಿ.ಪ್ರಸಾದ್, ಕೆ.ಜಿ.ವಿನಯ್, ಕೆ.ಎಸ್.ರಕ್ಷಿತ್, ಕೆ.ಜೆ.ಹರ್ಷಿತ್, ಬಿ.ಇ.ಲೋಹಿತ್, ಕೆ.ಕೆ.ಗಿರೀಶ್, ಸಿ.ಎಂ.ಪ್ರಮೋದ್, ಎಸ್.ಎಸ್.ಅಕ್ಷಿತ್, ಎಂ.ಬಿ.ಆನಂದ್, ಪಿ.ಆರ್.ಚಂದ್ರಕಾಂತ್, ಸಿ.ಆರ್.ಬಿಪಿನ್, ಜಿ.ಕೆ.ಬೀನಾ, ಸಿ.ಎಸ್.ತೀರ್ಥ, ಶಿವಯ್ಯ, ವೀರನ್ ದೇವಯ್ಯ, ಕವನ್ ಕಾರ್ಯಪ್ಪ, ಶರೀಫ್, ಕೆ.ಕೆ.ಕೌಶಿಕ್, ಜಗದೀಶ್, ಹೃತಿಕ್, ವಂಸತ್, ರಾಜ, ಆನಂದ್, ಲೋಕೇಶ್, ರಂಜಿತ್, ಶಶಾಂಕ್, ಮಂಜು, ಅಜ್ಜಮಕ್ಕಡ ವಿನುಕುಶಾಲಪ್ಪ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಬೊಳ್ಳಜಿರ ಬಿ.ಅಯ್ಯಪ್ಪ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಕಳೆದ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದೆ. ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮೋದಿ ಅವರ ಸಿದ್ಧಾಂತವನ್ನು ಮೆಚ್ಚಿ ಮತ್ತು ಬಿಜೆಪಿ ಮೇಲಿನ ಅಭಿಮಾನದಿಂದ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಸ್ಪಷ್ಟಪಡಿಸಿದರು.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ವಿದ್ಯಾವಂತ, ಬುದ್ಧಿವಂತ, ಸುಸಂಸ್ಕೃತವಂತ ವ್ಯಕ್ತಿಯಾಗಿದ್ದು, ಭ್ರಷ್ಟಾಚಾರ ರಹಿತ ದಕ್ಷ ಆಡಳಿತ ನೀಡುವ ವಿಶ್ವಾಸ ಮೂಡಿಸಿದ್ದಾರೆ. ಇವರ ಗೆಲುವಿಗಾಗಿ ಶ್ರಮಿಸುವುದಾಗಿ ತಿಳಿಸಿದ ಬೊಳ್ಳಜಿರ ಅಯ್ಯಪ್ಪ ಅವರು, ಇನ್ನು ಮುಂದೆ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಗೌಡ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
::: ಕಾಂಗ್ರೆಸ್ ನಲ್ಲಿದ್ದ ಅಯ್ಯಪ್ಪ :::
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚಯ್ಯ ಅವರ ಆತ್ಮೀಯ ಸಲಹೆಗಾರರು ಹಾಗೂ ಕಾರ್ಯದರ್ಶಿಯಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕಾರ್ಯನಿರ್ವಹಿಸಿದ್ದಾರೆ. ಸದಸ್ಯತ್ವ ಅಭಿಯಾನ ಸೇರಿದಂತೆ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ರಾಜಕೀಯಕ್ಕಿಂತ ಹೆಚ್ಚಾಗಿ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಅವರು ತಮ್ಮ ಕೊಡವ ಮಕ್ಕಡ ಕೂಟ ಸಂಘಟನೆಯ ಮೂಲಕ 88 ಪುಸ್ತಕಗಳನ್ನು ಸಾಹಿತ್ಯ ಲೋಕಕ್ಕೆ ಅರ್ಪಿಸಿದ್ದಾರೆ. ಆ ಮೂಲಕ 100 ಕ್ಕೂ ಅಧಿಕ ಬರಹಗಾರರನ್ನು ಪರಿಚಯಿಸಿ ಪ್ರೋತ್ಸಾಹಿಸಿದ್ದಾರೆ. ಹೊಸ ಹೊಸ ಬರಹಗಾರರಿಗೆ ಅವಕಾಶಗಳನ್ನು ನೀಡಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಅಯ್ಯಪ್ಪ ಅವರು ಸ್ನೇಹಾಚಾರ, ಒಡನಾಟವಿಟ್ಟುಕೊಂಡಿದ್ದರೂ ಎಲ್ಲೂ ಕ್ಷುಲ್ಲಕ ಸ್ವಾರ್ಥ ರಾಜಕಾರಣ ಮಾಡಿಲ್ಲ. ಕೊಡವ ಸ್ನಾತಕೋತ್ತರ ಪದವಿ ಪಡೆದವರಲ್ಲಿ ಮೊದಲಿಗರಾದ ಅಯ್ಯಪ್ಪ ಅವರು ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷರಾಗಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಸಾಹಿತ್ಯ ಕ್ಷೇತ್ರದ ಬಗ್ಗೆ ಹೆಚ್ಚು ಒಲವು ಹೊಂದಿದ್ದ ಅಯ್ಯಪ್ಪ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನ ಲಭಿಸುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಗಳನ್ನು ಕಾಂಗ್ರೆಸ್ ಪಕ್ಷ ಪರಿಗಣಿಸದೆ ನಿರೀಕ್ಷೆಗಳನ್ನು ಹುಸಿ ಮಾಡಿ ನಿರಾಶೆ ಮೂಡಿಸಿತ್ತು.

Follow us Follow us
Share. WhatsApp Facebook Twitter Email Telegram Copy Link

Related Posts

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.22 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ ಬಿದ್ದಿದೆ. ದಶಮಂಟಪಗಳ ಶೋಭಾಯಾತ್ರೆಯಲ್ಲಿ ಶ್ರೀ…

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.