ಮಡಿಕೇರಿ ಏ.10 NEWS DESK : ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ಯಾವುದೇ ಚುನಾವಣಾ ಸಂಬಂಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.







