ಮಡಿಕೇರಿ ಏ.11 NEWS DESK : ತೊರೆನೂರು ಗ್ರಾ.ಪಂ ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸಮ್ಮುಖದಲ್ಲಿ ತೊರೆನೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಕುಶಾಲನಗರ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಡಿ.ರವಿಕುಮಾರ್, ಸಿದ್ಧಲಿಂಗೇಶ್ವರ ಯುವಕ ಸಂಘದ ಮಾಜಿ ಅಧ್ಯಕ್ಷ ಉದಯ್ ಕುಮಾರ್, ಗ್ರಾಮದ ಮುಖಂಡರಾದ ಹರೀಶ್, ಮಂಜುನಾಥ್, ನಂದೀಶ್ ಹಾಗೂ ಅನೇಕ ಮುಖಂಡರು ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ನಟೇಶ್ ಗೌಡ, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಯೋಗಿಣಿ, ಶಾಂತಿ, ಪ್ರಮುಖರಾದ ಕೃಷ್ಣೆಗೌಡ ತೊರೆನೂರು, ಟಿ.ಬಿ.ಜಗದೀಶ್, ಶೇಖರ್ ಹೆಬ್ಬಾಲೆ, ಪಂಚಾಯತ್ ರಾಜ್ ಸಂಘಟನೆಯ ತಾಲೂಕು ಅಧ್ಯಕ್ಷ ಟಿ.ಕೆ.ವಸಂತ್, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಟಿ.ಜೆ.ಸಂಜೀವಯ್ಯ, ಚಿಕ್ಕಳುವಾರ ಬೂತ್ ಅಧ್ಯಕ್ಷ ಎ.ಆರ್.ಮಹಾದೇವ್ , ಸ್ವಾಮಿ ಗೌಡ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.







