Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಏ.14 ರಂದು ಸಿಎನ್‌ಸಿಯಿಂದ 30ನೇ ವರ್ಷದ ಎಡ್ಮ್ಯಾರ್ ಆಚರಣೆ : ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಏ.14 ರಂದು ಸಿಎನ್‌ಸಿಯಿಂದ 30ನೇ ವರ್ಷದ ಎಡ್ಮ್ಯಾರ್ ಆಚರಣೆ : ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ

ಏಪ್ರಿಲ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.11 NEWS DESK : ಕೊಡವರ ಹೊಸ ವರ್ಷಾಚರಣೆ  ಎಡ್ಮ್ಯಾರ್  ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಏ.14 ರಂದು ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ವಸಂತಋತು ಫೆ.15 ರಿಂದ ಆರಂಭಗೊಂಡು ಏ.14 ಕ್ಕೆ ಕೊನೆಗೊಳ್ಳುವ “ ಎಡ್ಮ್ಯಾರ್ ” ನ್ನು ಸಿಎನ್‌ಸಿ ಸಂಘಟನೆ ಪ್ರತಿವರ್ಷ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದ್ದು, ಇದು 30ನೇ ವರ್ಷದ ಕಾರ್ಯಕ್ರಮವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಏ.14 ರಂದು ಸಂಜೆ 6.30ಗಂಟೆಗೆ ಗೋಣಿಕೊಪ್ಪಲಿನ ಶ್ರೀಉಮಾಮಹೇಶ್ವರಿ ದೇವಾಲಯದ ಬಳಿಯಿಂದ ದುಡಿಕೊಟ್ಟ್ ಪಾಟ್ ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಂಜಿನ ಮೆರವಣಿಗೆ ಸಾಗಿ ಆರ್‌ಎಂಸಿ ಯಾರ್ಡ್ ನಲ್ಲಿ ಕೊನೆಗೊಳ್ಳಲಿದೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗ ಕೊಡವರ ಹಕ್ಕುಗಳ ಕುರಿತು ಕಾರ್ಯಕ್ರಮದಲ್ಲಿ ಪ್ರತಿಪಾದನೆ ಮಾಡುವ ಮೂಲಕ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲಾಗುವುದು. ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಪ್ರಚುರಪಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಸಂವಿಧಾನದ ಆರ್ಟಿಕಲ್ 244 ರಡಿಯಲ್ಲಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ನಿರ್ಣಯದ ಹಕ್ಕು ನೀಡಬೇಕು. ಸಂವಿಧಾನದ 340 ಮತ್ತು 342 ನೇ ವಿಧಿಯಡಿಯಲ್ಲಿ ಮೈಕ್ರೋಸ್ಕ್ಯೂಲ್ ಕೊಡವ ಜನಾಂಗದ ರಕ್ಷಣೆಯಾಗಬೇಕು. ಸಂವಿಧಾನದ 25, 26 ರ ವಿಧಿಯಡಿ ಕೊಡವರ ಗನ್ ನ್ನು ಸೇರ್ಪಡೆಗೊಳಿಸಿ ಕೋವಿ ಹೊಂದುವ ಹಕ್ಕನ್ನು ಆಭಾದಿತಗೊಳಿಸಬೇಕು. ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕೆಂದು ಒತ್ತಾಯಿಸುವುದಾಗಿ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮೊದಲು ಅಂದು ಬೆಳಗ್ಗೆ 6ಗಂಟೆಗೆ ಮಡಿಕೇರಿ ತಾಲ್ಲೂಕಿನ ಮದೆನಾಡಿನ ಬೆಟ್ಟತ್ತೂರು ಗ್ರಾಮದಲ್ಲಿ ಕೂಪದಿರ ಒಕ್ಕದ ಮೋಹನ್ ಅವರ ಭೂಮಿಯಲ್ಲಿ ಉಳುಮೆ ಮಾಡುವ ಮೂಲಕ “ ಎಡ್ಮ್ಯಾರ್ ” ಆಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಎಡ್ಮ್ಯಾರ್ ಹಬ್ಬವು ವಸಂತಋತು ಫೆ.15 ರಿಂದ ಆರಂಭವಾಗಿ ಏ.14 ರಂದು ಮುಕ್ತಾಯವಾಗುವ ಹಂತವಾಗಿದೆ ಮತ್ತು ಸೂರ್ಯನು ಮೇಷ ನಕ್ಷತ್ರ ಪುಂಜಗಳತ್ತ ಸಾಗುವ ಪ್ರಕ್ರಿಯೆಯಾಗಿದೆ. ಎಲ್ಲಾ ಋತುಗಳಲ್ಲಿ ಈ ಋತು ಅತ್ಯಂತ ವರ್ಣರಂಜಿತವಾಗಿದೆ. ಕೃಷಿ ಚಟುವಟಿಕೆಯ ಮೂಲಕ ಪ್ರಕೃತಿಯೊಂದಿಗೆ ಬೆರೆತು ಹೋಗಿರುವ ಬುಡಕಟ್ಟು ಜನಾಂಗ ಕೊಡವರು ಕೊಡವ ಜನಾಂಗೀಯ ಪಂಚಾಂಗದ ಪ್ರಕಾರ ಸೌರಮಾನ ಹೊಸ ವರ್ಷವನ್ನು ಪ್ರಕೃತಿಯ ವಾರ್ಷಿಕ ಚಕ್ರದಲ್ಲಿ ಮೊದಲ ಹಬ್ಬವೆಂದು ಪರಿಗಣಿಸುತ್ತಾರೆ. ಕೊಡವ ಬುಡಕಟ್ಟಿನ ಹೊಸ ವರ್ಷ ಎಂದರೆ ಸೌರಮಾನ ಕ್ಯಾಲೆಂಡರ್ ಮೂಲಭೂತವಾಗಿ  ಎಡ್ಮ್ಯಾರ್  1 ಗ್ರೆಗೋರಿಯನ್ ಕ್ಯಾಲೆಂಡರ್ ನೊಂದಿಗೆ ಹೊಂದಿಕೆಯಾಗುತ್ತದೆ. ಇದು ಕೊಡವ ಬುಡಕಟ್ಟು ಜನಾಂಗದವರ ಕೃಷಿ ಚಟುವಟಿಕೆಗಳ ಆರಂಭವನ್ನು ಸೂಚಿಸುತ್ತದೆ. ಆದ್ದರಿಂದ ಪ್ರಕೃತಿಯನ್ನು ಆರಾಧಿಸುವ ಕೊಡವರು “ ಎಡ್ಮ್ಯಾರ್  1” ನ್ನು ಅತಿ ಉತ್ಸಾಹದಿಂದ ಆಚರಿಸಿ ಭೂದೇವಿಗೆ ನಮಿಸುತ್ತಾರೆ. ಈ ಜನಪದೀಯ ಬುಡಕಟ್ಟು ಆಚರಣೆ ಇಡೀ ವಿಶ್ವಕ್ಕೆ ಪರಿಚಯವಾಗಬೇಕು ಎನ್ನುವ ಉದ್ದೇಶದಿಂದ ಸಿಎನ್‌ಸಿ ಸಂಘಟನೆ ಪ್ರತಿವರ್ಷ ಸಾರ್ವಜನಿಕವಾಗಿ “ಎಡ್ಮ್ಯಾರ್” ನ್ನು ಆಚರಿಸುತ್ತಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.22 NEWS DESK : ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಒಂಬತ್ತು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ…

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.