Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರಿಗೆ ದಲಿತ ಸಂಘರ್ಷ ಸಮಿತಿ ಬೆಂಬಲ ಘೋಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರಿಗೆ ದಲಿತ ಸಂಘರ್ಷ ಸಮಿತಿ ಬೆಂಬಲ ಘೋಷಣೆ*

ಏಪ್ರಿಲ್ 11, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.11 NEWS DESK : ಮತಗಳಿಕೆಗಾಗಿ ಪರಿಶಿಷ್ಟರ ಹಾದಿ ತಪ್ಪಿಸುವ ಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕದ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಸಾಮಾನ್ಯರು, ದೀನ ದಲಿತರು, ಪರಿಶಿಷ್ಟರು, ಕಾರ್ಮಿಕರು, ಕಡುಬಡವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡÀರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದೆ.
ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ ಜಿಲ್ಲೆಯಲ್ಲಿ ಅಭಿವೃದ್ಧಿಪರ ಚಿಂತನೆಯ ಇಬ್ಬರು ಕಾಂಗ್ರೆಸ್ ಶಾಸಕರಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರನ್ನು ಗೆಲ್ಲಿಸಿದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ದೊರೆಯಲಿದೆ. ಆದ್ದರಿಂದ ಎಲ್ಲರೂ ಲಕ್ಷ್ಮಣ್ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಕೊಡಗಿನಲ್ಲಿ ಈ ಹಿಂದೆ ಇದ್ದ ಶಾಸಕರನ್ನು ಜನಸಾಮಾನ್ಯರು ಭೇಟಿ ಮಾಡುವುದೇ ಕಷ್ಟಕರವಾಗಿತ್ತು. ಆದರೆ ಈಗ ಇರುವ ಇಬ್ಬರು ಕಾಂಗ್ರೆಸ್ ಶಾಸಕರು ಕೇವಲ ಒಂದು ಫೋನ್ ಕರೆಗೆ ಜನಸಾಮಾನ್ಯರ ಮನವಿಗೆ ತಕ್ಷಣ ಸ್ಪಂದಿಸುವ ಮನೋಸ್ಥಿತಿ ಹೊಂದಿದ್ದಾರೆ. ಅಲ್ಲದೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿದ್ದು, ಬಂಡವಾಳಶಾಹಿಗಳ ಸಾಲಮನ್ನಾ ಮಾಡುವ ಮೂಲಕ ಜನಸಾಮಾನ್ಯರು, ದೀನ ದಲಿತರು, ಪರಿಶಿಷ್ಟರು, ಕಾರ್ಮಿಕರನ್ನು ಕಡೆಗಣಿಸಿದೆ. ಕೇವಲ ಮತಗಳಿಕೆಗಾಗಿ ಬಿಜೆಪಿ ಪರಿಶಿಷ್ಟರನ್ನು ಓಲೈಸುತ್ತಿದೆ. ಅಧಿಕಾರ ಸ್ಥಾನದಲ್ಲಿ ಮತ್ತು ಪಕ್ಷದಲ್ಲಿ ಅದು ಪರಿಶಿಷ್ಟರಿಗೆ ಯಾವುದೇ ಉನ್ನತ ಸ್ಥಾನಮಾನಗಳನ್ನು ನೀಡಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆಡಳಿತಕ್ಕೆ ಬಂದ ಕೇವಲ 10 ತಿಂಗಳಲ್ಲೇ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಳಿಗೆ ಐದು ಗ್ಯಾರಂಟಿಗಳ ಮೂಲಕ ಬಲ ತುಂಬಿದೆ. ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಎಲ್ಲರೂ ಬೆಂಬಲಿಸಬೇಕು ಎಂದು ದಿವಾಕರ್ ಮನವಿ ಮಾಡಿದರು.
ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ದೇಶದ ಭವಿಷ್ಯ ನಿರ್ಧರಿಸುವ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಲೋಕಸಭೆಗೆ ಆಯ್ಕೆಯಾಗಿ ಹೋಗುವ ಸಂಸದರು ತಮ್ಮ ಕ್ಷೇತ್ರದ ಜನಸಾಮಾನ್ಯರು, ದೀನ ದಲಿತರು, ಪರಿಶಿಷ್ಟರು, ಕಾರ್ಮಿಕರು, ಕಡು ಬಡವರ ಬಗ್ಗೆ ಕಾಳಜಿ ಹೊಂದಿರುವವರು ಆಗಿರಬೇಕಾಗುತ್ತದೆ. ಆದರೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಹತ್ತು ವರ್ಷಗಳ ಕಾಲ ಸಂಸದರಾಗಿದ್ದವರು ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಬಡವರ ಏಳಿಗೆ ಬಗ್ಗೆ ಯಾವುದೇ ಆಸಕ್ತಿ ತೋರಿಲ್ಲ ಎಂದು ಆರೋಪಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯುದಯಕ್ಕಾಗಿ ಕಾಂಗ್ರೆಸ್ ಪಕ್ಷ ಜನಪರ ಯೋಜನೆಗಳನ್ನು ರೂಪಿಸುತ್ತಲೇ ಬಂದಿದೆ. ಆದ್ದರಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೆಂಬಲಿಸಲಿದೆ. ಅಲ್ಲದೆ ಜನಸಾಮಾನ್ಯರು, ದೀನ ದಲಿತರು, ಕಾರ್ಮಿಕರು, ಕಡು ಬಡವರು, ಅಲ್ಪಸಂಖ್ಯಾತರು, ನಿವೇಶನ ವಂಚಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದಾರೆ. ಇವರು ಸಂಸದರಾಗಿ ಆಯ್ಕೆಯಾದರೆ ಎಲ್ಲಾ ವರ್ಗದ ಜನರಿಗೆ ಸುಲಭವಾಗಿ ಸಿಗಬಲ್ಲರು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸಬಲ್ಲವರಾಗಿದ್ದಾರೆ. ಜನಸಾಮಾನ್ಯರೊಂದಿಗೆ ಬೆರೆತು ಕೆಲಸ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜವಂಶಸ್ಥರಾಗಿದ್ದು, ಗೆದ್ದ ನಂತರ ಅವರನ್ನು ಭೇಟಿ ಮಾಡುವುದು ಹೇಗೆ ಎನ್ನುವ ಸಂಶಯ ಜನಸಾಮಾನ್ಯರಿಗೆ ಮೂಡುವುದು ಸಹಜ. ಆದ್ದರಿಂದ ಸಾಮಾನ್ಯ ವ್ಯಕ್ತಿಯಾಗಿ ದಕ್ಷತೆಯನ್ನು ಹೊಂದಿರುವ ಎಂ.ಲಕ್ಷ್ಮಣ ಗೌಡ ಅವರ ಗೆಲುವನ್ನು ನಾವು ಬಯಸುತ್ತೇವೆ ಎಂದು ಹೇಳಿದರು.
ಕಳೆದ 10 ವರ್ಷಗಳಿಂದ ಮೈಸೂರು- ಕೊಡಗು ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಸಂಸದರು ಒಂದು ದಿನವೂ ಪರಿಶಿಷ್ಟರು, ಆದಿವಾಸಿಗಳು ಹಾಗೂ ಕಾರ್ಮಿಕರ ಪರವಾಗಿ ಧ್ವನಿ ಎತ್ತಿಲ್ಲ. ವನ್ಯಜೀವಿಗಳ ದಾಳಿಯಿಂದ ಪ್ರಾಣ ಕಳೆದುಕೊಂಡ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವ ಕನಿಷ್ಠ ಮಾನವೀಯತೆಯನ್ನು ಕೂಡ ತೋರಿಲ್ಲ ಎಂದು ದೀಪಕ್ ಪೊನ್ನಪ್ಪ ಟೀಕಿಸಿದರು.
ಕೇಂದ್ರ ಸರಕಾರದ ತೆರಿಗೆ ಹೊರೆ ಮಾತ್ರವಲ್ಲದೆ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ದೇಶದ ಜನ ತತ್ತರಿಸಿ ಹೋಗಿದ್ದಾರೆ. ಈ ಹಂತದಲ್ಲೇ ಕರ್ನಾಟದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರಕಾರ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ನೆರವಾಗಿದೆ. ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ, ಮನೆಯಲ್ಲೇ ಇದ್ದ ಮಹಿಳೆಯರು ಉಚಿತ ಬಸ್ ಸೇವೆಯಿಂದ ಸಮಾಜದ ಮುಖ್ಯ ವಾಹಿನಿಯಲ್ಲಿ ಸ್ವತಂತ್ರವಾಗಿ ಗುರುತಿಸಿಕೊಳ್ಳುವಂತಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮನೆಯ ಖರ್ಚುವೆಚ್ಚವನ್ನು ನಿಭಾಯಿಸುತ್ತಿದ್ದಾರೆ. ನಿರುದ್ಯೋಗಿ ಯುವ ಸಮೂಹ ಉದ್ಯೋಗ ಸಿಗುವವರೆಗೆ ನೆಮ್ಮದಿಯಿಂದ ಇರುವಂತ್ತಾಗಿದೆ. ಇದೆಲ್ಲದರ ನಡುವೆ ಸರಕಾರ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಬಿಡುಗಡೆ ಮಾಡುತ್ತಿದೆ. ಕೊಡಗು ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರುಗಳು ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ತಮ್ಮ ತಮ್ಮ ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ಕಳೆದ 25 ವರ್ಷಗಳಿಂದ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದ ಗಿರಿಜನ ಹಾಡಿಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ನಿವೇಶನ ವಂಚಿತರಿಗೆ ನಿವೇಶನ ನೀಡಲು ಯೋಜನೆ ರೂಪಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಬಿಜೆಪಿ ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಬೇರೆ ಕಾರ್ಯಗಳಿಗೆ ಸರಕಾರ ಬಳಸುತ್ತಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನಾ ಸಂಚಾಲಕ ಹೆಚ್.ಆರ್.ಶ್ರೀಕಂಠಯ್ಯ ಹಾಗೂ ಪೊನ್ನಂಪೇಟೆ ತಾಲ್ಲೂಕು ಸಂಚಾಲಕ ಹೆಚ್.ಆರ್.ಜಗದೀಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಡಾ. ಹರ್ಷ ಪ್ರಿಯಂವದ IPS ಅವರು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡರು.…

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.