Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ದ್ವಿತೀಯ ಪಿಯುಸಿ ಫಲಿತಾಂಶ : ಸುಂಟಿಕೊಪ್ಪ ವಿದ್ಯಾರ್ಥಿಗಳ ಸಾಧನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ದ್ವಿತೀಯ ಪಿಯುಸಿ ಫಲಿತಾಂಶ : ಸುಂಟಿಕೊಪ್ಪ ವಿದ್ಯಾರ್ಥಿಗಳ ಸಾಧನೆ

ಏಪ್ರಿಲ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ ಏ.11 NEWS DESK : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿನ ಸರಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳು ಉತ್ತಮ ಸಾಧನೆ ಮಾಡಿರುವುದು ಪೋಷಕರಲ್ಲಿ ಮತ್ತು ಕಾಲೇಜಿನ ಉಪನ್ಯಾಸಕರಲ್ಲಿ ಹರ್ಷ ಉಂಟು ಮಾಡಿದೆ.
ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ 51 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು, ಶೇ.97 ರಷ್ಟು ಫಲಿತಾಂಶ ಪಡೆದಿದ್ದಾರೆ.
ವಿಜ್ಞಾನ ವಿಷಯದಲ್ಲಿ ಶೇ.100, ವಾಣಿಜ್ಯ ವಿಷಯದಲ್ಲಿ ಶೇ.96, ಹಾಗೂ ಕಲಾ ವಿಷಯದಲ್ಲಿ ಶೇ.94 ಫಲಿತಾಂಶವನ್ನು ಪಡೆದಿದೆ. ಮೂವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಎಂ.ಪಿ.ಶ್ವೇತಾ ಕಲಾವಿಭಾಗದಲ್ಲಿ, ವಾಣಿಜ್ಯ ವಿಭಾಗದಲ್ಲಿ ಕವಿತ ಮತ್ತು ವಿಜ್ಞಾನ ಕೆ.ಎಂ.ಶಫ್‍ರೀನಾ ಮೊದಲಿಗರಾಗಿದ್ದಾರೆ.
ಕಾಲೇಜಿನ ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದವು ಮಕ್ಕಳ ಸಾಧನೆಯನ್ನು ಶ್ಲಾಘಿಸಿದರು.
ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವಕಾಲೇಜು 96.66 ಫಲಿತಾಂಶ ಪಡೆದಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 17 ಮಂದಿ, ಪ್ರಥಮ ದರ್ಜೆ 45 ಮಂದಿ, ದ್ವಿತೀಯ ದರ್ಜೆಯಲ್ಲಿ 26 ಮಂದಿ ಮತ್ತು ಸಾಮಾನ್ಯ ದರ್ಜೆಯಲ್ಲಿ 7 ಮಂದಿ ಉತ್ತೀರ್ಣರಾಗಿದ್ದಾರೆ. ಕಾಲೇಜಿ ಐಶ್ವರ್ಯ 569 ಅಂಕಗಳನ್ನು, ಬಿ.ವಿ.ಬೃಂದಾ 568 ಅಂಕಗಳನ್ನು ಹಾಗೂ ಪಿ.ಎಂ.ಕೀರ್ತನಾ 564 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿನಲ್ಲಿ ಮೊದಲ 3 ಸ್ಥಾನಗಳನ್ನುಗಳಿಸಿಕೊಂಡಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಮಕ್ಕಳ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಗರಗಂದೂರಿನಲ್ಲಿರುವ ಮೊರಾಜಿ ದೇಸಾಯಿ ಪದವಿಪೂರ್ವ ಕಾಲೇಜಿನ 80 ಮಕ್ಕಳು ಪರೀಕ್ಷೆಯನ್ನು ಎದುರಿಸಿದ್ದು, ಶೇ.100 ಫಲಿತಾಂಶವನ್ನು ಪಡೆದಿದೆ. ಈ ಪೈಕಿ 49 ಅತ್ಯುನ್ನತ ಶ್ರೇಣಿಯಲ್ಲಿ, ಪ್ರಥಮ ದರ್ಜೆಯಲ್ಲಿ 31 ಮಂದಿ ಮಕ್ಕಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಎಸ್.ಎಸ್.ವಿಶ್ವ 578 ಅಂಕಗಳನ್ನು, ಕೆ.ಎಸ್.ವನಿತಾ 574 ಅಂಕಗಳನ್ನು ಮತ್ತು ಟಿ.ವಿ.ಮೇಘನಾ 562 ಅಂಕಗಳನ್ನು ಪಡೆದಿದ್ದಾರೆ.
ಮಕ್ಕಳ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
ಸುಂಟಿಕೊಪ್ಪ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಇಲ್ಲಿನ ಸಂತ ಮೇರಿ ಆಂಗ್ಲ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆಗೆ ಹಾಜರಾದ 27 ವಿದ್ಯಾರ್ಥಿಗಳ ಪೈಕಿ 9 ಮಂದಿ ಉನ್ನತ ಶ್ರೇಣಿ, 18 ಮಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಆ ಪೈಕಿ ಎಸ್.ಕೀರ್ತಿ 584, ವಿ.ಷಣ್ಮುಗ 553, ಸಾನ ಫರ್ವಿನ್ 546 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಅರುಳ್ ಸೆಲ್ವಕುಮಾರ್ ಮತ್ತು ಕಾಲೇಜು ಪ್ರಾಂಶುಪಾಲ ಸೆಲ್ವರಾಜ್ ಮಕ್ಕಳ ಸಾಧನೆಯನ್ನು ಪ್ರಶಂಸಿದ್ದಾರೆ.
ಕವಿತ ಮಾತನಾಡಿ ವಾಣಿಜ್ಯ ವಿಷಯದಲ್ಲಿ ಪದವಿಯನ್ನು ಪಡೆಯುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ. ಕಷ್ಟಪಟು ಓದಿದ್ದಾರೆ. ಫಲವಾಗಿ ಉನ್ನತ ಅಂಕಗಳು ಲಭ್ಯವಾಗಿದ್ದು ಇದು ಮನೆಯವರ ಮತ್ತು ಕುಟುಂಬ ವರ್ಗದವರ ಹಾಗೂ ಶಿಕ್ಷಣ ನೀಡಿದ ಶಿಕ್ಷಕ ವೃಂದ ಸಹಪಾಠಿಗಳ ಸಂತೋಷಕ್ಕೆ ಕಾರಣವಾಗಿದೆ. ಕವಿತ ಹೊರೂರು ಗ್ರಾಮದ ಚೆಲುವ ಮತ್ತು ಕುಸುಮ ದಂಪತಿಗಳ ದ್ವಿತೀಯ ಪುತ್ರಿಯಾಗಿದ್ದು, ಹಿರಿಯ ಪುತ್ರಿ ಗಾಯತ್ರಿ ನರ್ಸಿಂಗ್ ತರಬೇತಿ ಪಡೆಯುತ್ತಿದ್ದಾರೆ.
ಸಫ್‍ರಿನಾ ಅವರು 7ನೇ ಮೈಲ್ ನಿವಸಿಗಳಾದ ಮಹಮದಾಲಿ ಮತ್ತು ಜರೀನ ದಂತಿಗಳ ಮೂವರು ಮಕ್ಕಳಲ್ಲಿ ಹಿರಿಯವಳಾಗಿದ್ದು ಸಹೋದರಿ 10ನೇ ತರಗತಿ ಸಹೋದರ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಸಫ್‍ರಿನಾ ಸಿಇಟಿಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಒಳ್ಳೆಯ ಶಿಕ್ಷಣ ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಫ್‍ರಿನಾ ಪೋಷಕರು ರಂಜಾನ್ ಹಬ್ಬದ ದಿನವೇ ಮಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ರಂಜಾನ್ ಹಬ್ಬದ ಸಂಭ್ರವನ್ನು ಇಮ್ಮಡಿಗೊಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.27 : ಮಡಿಕೇರಿ ಕ್ಷೇತ್ರದ ಜನಪರ ಕಾಳಜಿಯ ಶಾಸಕ ಡಾ.ಮಂತರ್ ಗೌಡ ಅವರ ಭಾವಚಿತ್ರವಿದ್ದ ಫ್ಲೆಕ್ಸ್…

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026

ಆವಂಡಿ ಗ್ರಾಮದ ಕೋಟೆ ಅಬ್ಬಿ ಹೊಳೆಯಲ್ಲಿ ಅಕ್ರಮ ಮೀನುಗಾರಿಕೆ : ಕ್ರಮಕ್ಕೆ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.