Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಮತದಾರರ ಜಾಗೃತಿಗಾಗಿ ಕಾಲ್ನಡಿಗೆ ಜಾಥ : ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾನ ಅವಶ್ಯಕ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಮತದಾರರ ಜಾಗೃತಿಗಾಗಿ ಕಾಲ್ನಡಿಗೆ ಜಾಥ : ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾನ ಅವಶ್ಯಕ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಏಪ್ರಿಲ್ 12, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.12 NEWS DESK :  ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಹಾಗೂ ತಮ್ಮವರನ್ನು ಕೂಡ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಾರ್ವಜನಿಕರಿಗೆ ಕರೆ ನೀಡಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ  ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.
ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯು ವಿವೇಚನೆಯಿಂದ ಅರ್ಹ ವ್ಯಕ್ತಿಗೆ ನೀಡುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮುಂದಾಗಬೇಕು. ಈ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರವುಳಿಯದೆ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಏ.26 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಬೇಕು. ಪ್ರತೀ ಮತವು ಅತ್ಯಮೂಲ್ಯವಾದದ್ದು, ಪ್ರಜಾಪ್ರಭುತ್ವದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿನಾಕಾರಣ ದೂಷಿಸುವ ಬದಲು ಚುನಾವಣೆಯಲ್ಲಿ ಮತದಾನ ಮಾಡಿ ವಿಶ್ವಾಸಾರ್ಹ ಸರ್ಕಾರ ರಚನೆಯಲ್ಲಿ ನಾವು ಪಾಲ್ಗೊಳ್ಳಬೇಕು. ವ್ಯವಸ್ಥೆಯ ಸುಭದ್ರಕ್ಕಾಗಿ ಮತದಾನದ ಮಹತ್ವವನ್ನು ನಾವೆಲ್ಲರೂ ಅರಿಯಬೇಕು. ಉತ್ತಮ ವ್ಯಕ್ತಿಗಳ ಆಯ್ಕೆಗೆ ಪ್ರಜಾಪ್ರಭುತ್ವ ನಮಗೆ ನೀಡಿದ ಮತದಾನದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮತದಾನದ ದಿನದಂದು ಬೆಳಗ್ಗೆ ಬೇಗನೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ದೈನಂದಿನ ಕೆಲಸಗಳಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ ಏ.26 ರಂದು ಮನೆಯಿಂದ ಹೊರಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಭದ್ರಪಡಿಸೋಣ. ಕೊಡಗು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಪ್ರಮಾಣವನ್ನು ಅಧಿಕಗೊಳಿಸಲು ಈಗಾಗಲೇ ಹಲವಾರು ಚಟುವಟಿಕೆಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೈಗೊಳ್ಳಲಾಗಿದೆ. ಈ ಮತದಾನದ ಜಾಗೃತಿಯಿಂದ ಜಿಲ್ಲೆಯ ಮತದಾನದ ಪ್ರಮಾಣ ರಾಜ್ಯದಲ್ಲಿಯೇ ಅತೀ ಹೆಚ್ಚು ಆಗುವಂತೆ ನಾವೆಲ್ಲರೂ ಶ್ರಮಿಸೋಣ ಎಂದರು.
ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣೆ ಸಂದರ್ಭದಲ್ಲಿ ನಡೆಯುವ ಅಕ್ರಮ ಪತ್ತೆಗೆ ಹಾಗೂ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಸಿವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ದೂರು ನೀಡಬಹುದು. ಅಥವಾ ಸಹಾಯವಾಣಿ ಸಂಖ್ಯೆ 1950 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಚುನಾವಣೆಯ ಸಂದರ್ಭಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಹಣ, ಉಡುಗೊರೆ, ಆಸೆ ಆಮಿಷಗಳನ್ನು ನೀಡಿದರೆ ಮತದಾರರು ಸಿವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು ಎಂದರು.
ನಮ್ಮ ಮತ, ನಮ್ಮ ಹಕ್ಕು, ಪ್ರತೀ ಮತ ಅತ್ಯಮೂಲ್ಯ, ತಪ್ಪದೇ ಮತದಾನ ಮಾಡಿ, ನನ್ನ ಮತ ಮಾರಾಟಕ್ಕಿಲ್ಲ, ಮತ ಚಲಾಯಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಮುಂತಾದ ಶ್ಲೋಗನ್‍ಗಳನ್ನು ಒಳಗೊಂಡ ಬಂಟಿಂಗ್ಸ್‍ಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕಾಲ್ನಡಿಗೆ ಜಾಥ ಯಶಸ್ವಿಯಾಯಿತು.
ಬೀದಿನಾಟಕ: ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕಾಲ್ನಡಿಗೆ ಜಾಥ ಮೂಲಕ ಆಗಮಿಸಿದ ಗಣ್ಯರು, ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಲಾವಿದರಿಂದ ಬೀದಿನಾಟಕ ಪ್ರದರ್ಶನ ಜರುಗಿತು. ಮತ ಮಾರಾಟಕ್ಕಿಲ್ಲ, ಯಾವುದೇ ಆಮಿಷಗಳಿಗೆ ಮತ ನೀಡದೆ ಮಕ್ಕಳ ಹಾಗೂ ಪ್ರಜಾಪ್ರಭುತ್ವದ ಉತ್ತಮ ಭವಿಷ್ಯಕ್ಕಾಗಿ ನಮ್ಮ ಮತವನ್ನು ಅರ್ಹರಿಗೆ ಚಲಾಯಿಸೋಣ ಎಂಬ ಸಂದೇಶದ ನಾಟಕ ಪ್ರದರ್ಶನ ಉತ್ತಮವಾಗಿ ಪ್ರದರ್ಶನಗೊಂಡಿತು.
ಪ್ರತಿಜ್ಞಾ ವಿಧಿ ಬೋಧನೆ: ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದ ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾ ವಿಧಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅವರು ಬೋಧಿಸಿದರು.
ಕಾಲ್ನಡಿಗೆ ಜಾಥವು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಆರಂಭವಾಗಿ ಜನರಲ್ ವೃತ್ತದ ಮಾರ್ಗವಾಗಿ ಕಾವೇರಿ ಕಲಾಕ್ಷೇತ್ರ ತಲುಪುವ ಕಾಲ್ನಡಿಗೆ ಅಂತಿಮಗೊಂಡಿತು. ಜಾಥದಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರಾಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಕಾಲ್ನಡಿಗೆ ಜಾಥ ಯಶಸ್ವಿಯಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.