Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಏ.14 ರಂದು ಕಾಂಗ್ರೆಸ್ ಬೃಹತ್ ಸಮಾವೇಶ : ಸಿಎಂ, ಡಿಸಿಎಂ ಭಾಗಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಏ.14 ರಂದು ಕಾಂಗ್ರೆಸ್ ಬೃಹತ್ ಸಮಾವೇಶ : ಸಿಎಂ, ಡಿಸಿಎಂ ಭಾಗಿ*

ಏಪ್ರಿಲ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.12 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರ ಪರ ಮತಯಾಚಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾನುವಾರ ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಭೋಸರಾಜು, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೊಡಗು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಸೇರಿದಂತೆ ಹಿರಿಯ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಈಗಾಗಲೇ ಕೊಡಗು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ಕಾರ್ಯ ನಡೆದಿದೆ. ಜನರಿಂದ ಎಂ.ಲಕ್ಷ್ಮಣ ಗೌಡ ಅವರ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವೆಂದು ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು.
::: ಗ್ಯಾರಂಟಿ ಋಣ ತೀರಿಸಲಿದ್ದಾರೆ :::
ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ರಾಜ್ಯದ ಜನ ಕಾಂಗ್ರೆಸ್ ಸರಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳ ಲಾಭದ ಋಣ ತೀರಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡ ಅವರು ಗೆಲವು ಸಾಧಿಸಲಿದ್ದಾರೆ. ಪಕ್ಷಾತೀತವಾಗಿ ಎಲ್ಲರೂ ಗ್ಯಾರಂಟಿ ಯೋಜನೆಗಳ ಲಾಭ ಪಡೆದಿದ್ದು, ಬಿಜೆಪಿ, ಜೆಡಿಎಸ್ ಸೇರಿದಂತೆ ಇತರ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಮತದಾರರು ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಚಲಾಯಿಸಲಿದ್ದಾರೆ ಎಂದರು.
ಕಳೆದ ವರ್ಷ ವಿಧಾನಸಭಾ ಚುನಾವಣೆ ನಡೆದಾಗ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದೆವು. ನಮ್ಮ ನಿರೀಕ್ಷೆಯಂತೆ ಇಬ್ಬರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿ ಕೇವಲ 9 ತಿಂಗಳಿನಲ್ಲಿ 500 ಕೋಟಿ ರೂ.ಗೂ ಅಧಿಕ ಅನುದಾನದ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ರಸ್ತೆ, ಸೇತುವೆ, ಮೋರಿ ನಿರ್ಮಾಣವಾಗುತ್ತಿದೆ, ಕುಡಿಯುವ ನೀರಿನ ಯೋಜನೆಗಳು ಸಾಕಾರಗೊಳ್ಳುತ್ತಿದೆ. ಇದರ ಜೊತೆಯಲ್ಲೇ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದೆ. ಕಾಂಗ್ರೆಸ್ ಸರಕಾರದ ಜನಪರ ಕಾಳಜಿಯನ್ನು ಜನ ಅರ್ಥಮಾಡಿಕೊಂಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮತ್ತೊಮ್ಮೆ ಹೇಳುತ್ತಿದ್ದೇವೆ ಎಂದು ತಿಳಿಸಿದರು.
ಐದು ಗ್ಯಾರಂಟಿ ಯೋಜನೆಗಳಂತೆ ರಾಷ್ಟ್ರ ಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖಂಡ ರಾಹುಲ್ ಗಾಂಧಿ ಅವರ ಸಹಿ ಇರುವ ಗ್ಯಾರಂಟಿ ಕಾರ್ಡ್‍ಗಳನ್ನು ಮನೆ ಮನೆಗೆ ತಲುಪಿಸುತ್ತಿದ್ದೇವೆ. ನಿರುದ್ಯೋಗಿಗಳಿಗೆ ವಾರ್ಷಿಕ ರೂ.1 ಲಕ್ಷ, ಬಡ ಮಹಿಳೆಗೆ ರೂ.1 ಲಕ್ಷ, ನರೇಗಾದಡಿ ಕಾರ್ಮಿಕರಿಗೆ ದಿನಕ್ಕೆ 400 ರೂ. ವೇತನ, ಉದ್ಯೋಗ ಭಾಗ್ಯ ಸೇರಿದಂತೆ 25 ಗ್ಯಾರಂಟಿಗಳ ಭರವಸೆಯನ್ನು ನೀಡಲಾಗಿದೆ. ಏ.14 ರಂದು ಮಡಿಕೇರಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಈ 25 ಗ್ಯಾರಂಟಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ವಿವರಿಸಲಿದ್ದಾರೆ ಎಂದು ರಮೇಶ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಗರಾಧ್ಯಕ್ಷ ಬಿ.ವೈ.ರಾಜೇಶ್ ಹಾಗೂ ಸದಸ್ಯ ಭವಿನ್ ಕುಮಾರ್ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.