Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿ ಸೋಲಿಸಿ, ಪ್ರಜಾತಂತ್ರ ಉಳಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿ ಸೋಲಿಸಿ, ಪ್ರಜಾತಂತ್ರ ಉಳಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಏಪ್ರಿಲ್ 15, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.15 NEWS DESK : ಬಿಜೆಪಿ ಸಂವಿಧಾನ ವಿರೋಧಿಯಾಗಿದೆ, ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ನಡೆದ ಜನಧ್ವನಿ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ, ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಸಂವಿಧಾನ ವಿರೋಧಿ, ಸಂವಿಧಾನ ಬದಲಾಯಿಸುವುದು ಬಿಜೆಪಿ ಪರಿವಾರದ ಹುನ್ನಾರ. ಆರ್‍ಎಸ್‍ಎಸ್ ಪರಿವಾರ ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇವರು ದೇಶಭಕ್ತರಾಗಲು ಸಾಧ್ಯವೇ ಇಲ್ಲ ಎಂದರು.
ಸಮಾಜದಲ್ಲಿನ ಎಲ್ಲಾ ಜಾತಿ, ವರ್ಗ ಮತ್ತು ಧರ್ಮದ ಬಡವರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವುದಕ್ಕಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಪ್ರಧಾನಿ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಸಿದ್ದರಾಮಯ್ಯ ಹೇಳಿದರು.

ಭಾರತೀಯರನ್ನು ನಂಬಿಸಿ, ಭ್ರಮೆ ಹುಟ್ಟಿಸಿ, ಭಾವನೆಗಳನ್ನು ಕೆರಳಿಸಿ ವಂಚಿಸುವವರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ನುಡಿದಂತೆ ನಡೆದು ರಾಜ್ಯದ ಜನರ ಬದುಕಿಗೆ ಸ್ಪಂದಿಸಿದ ನಮಗೆ ಮತ ಹಾಕಿದರೆ ಆ ಮತಕ್ಕೆ ಗೌರವ ಬರುತ್ತದಾ? ಕೊಡಗು ಜಿಲ್ಲೆಯ ಮತದಾರರು ಪ್ರಜ್ಞಾವಂತರಾಗಿದ್ದಾರೆ. ಯೋಚಿಸಿ ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು.
ಕೊಡಗಿನ ಶಾಸಕರಾದ ಪೊನ್ನಣ್ಣ ಹಾಗೂ ಮಂಥರ್ ಗೌಡ ಅವರು ಕ್ಷೇತ್ರದ ಅಭಿವೃದ್ಧಿಗೆ ಏನೇನು ಕೇಳ್ತಾರೋ ಅದೆಲ್ಲವನ್ನೂ ಕೊಡಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಮೆಹರೂಜ್ ಖಾನ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.