
ಸುಂಟಿಕೊಪ್ಪ ಏ.15 NEWS DESK : ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಸಮಾರಂಭದಲ್ಲಿ ದಿನದ ಮಹತ್ವತೆ ಕುರಿತು ಮಾತನಾಡಿದರು.
ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ದೇಶದಲ್ಲಿ ಐಕ್ಯತೆ, ಸಾಮಾಜಿಕತೆ, ರಾಜಕೀಯ, ಆರ್ಥಿಕವಾಗಿ ದೇಶವು ಬಲಿಷ್ಠಗೊಳ್ಳಬೇಕಿದರೆ ದೇಶದ ಪ್ರತಿಯೊಬ್ಬ ಪ್ರಜೆಯು ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶವು ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಲು ಸಾಧ್ಯವೆಂದು ಮನಗಂಡಿದ್ದರು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ದೇಶವು ಬಲಿಷ್ಠ ರಾಷ್ಟ್ರವಾಗಲೂ ಕಾರಣಿಭೂತರಾಗಿದ್ದಾರೆಂದು ಅವರು ನುಡಿದರು.
ಗಣ್ಯರು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ಅಂಬೇಡ್ಕರ್ ಕಾಲೋನಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ನಿವಾಸಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.








