Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಕಾಂಗತ ಮೂಡ್” ಕೊಡವ ಸಿನಿಮಾ ಚಿತ್ರೀಕರಣ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಕಾಂಗತ ಮೂಡ್” ಕೊಡವ ಸಿನಿಮಾ ಚಿತ್ರೀಕರಣ ಆರಂಭ*

ಏಪ್ರಿಲ್ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.15 NEWS DESK :  ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಾಣ -ನಿರ್ದೇಶನದ ಕೊಡವ ಚಲನಚಿತ್ರ “ಕಾಂಗತ ಮೂಡ್” (The shadow) ಚಿತ್ರದ ಮುಹೂರ್ತ ಮೂರ್ನಾಡಿನ ಬಿದ್ದಂಡ ಪೊನ್ನಪ್ಪ ಅವರ ನಿವಾಸದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿ ಮಾತನಾಡಿದ ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ನಾವು ಎಷ್ಟು ಓದುತ್ತೇವೆ ಎಂಬುದು ಮುಖ್ಯವಲ್ಲ. ನಾವು ಜೀವನದಲ್ಲಿ ಎಷ್ಟರ ಮಟ್ಟಿಗೆ ಮನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುತ್ತಿದ್ದೇವೆ ಎಂಬುದು ಮುಖ್ಯ ಗ್ರಂಥಾಲಯಕ್ಕೆ ಎಲ್ಲರೂ ಹೋಗುತ್ತಾರೆ. ಅಲ್ಲಿರುವ ಪ್ರತಿ ಪುಸ್ತಕಗಳನ್ನು ಓದುತ್ತಾರೆ. ಆದರೆ ಅದನ್ನು ಓದುವಿಕೆಗೆ ಅಷ್ಟೇ ಸೀಮಿತ ಪಡಿಸದೇ ಅದರಿಂದ ಪಡೆದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಳ್ಳಬೇಕು ಎಂದು ಹೇಳಿದರು.
ಬಾಹ್ಯಕ್ಕಿಂತಲೂ ಅಂತರಾಳದಲ್ಲಿ ನೋಡುವ ದೃಷ್ಠಿಕೋನ ಬಾಳನ್ನು ಅಭ್ಯಾಸ ಮಾಡುತ್ತದೆ. ನಮ್ಮ ಒಳಗಿನ ಬಾಳನ್ನು ನಮ್ಮ ಮನಸ್ಸನ್ನು ನಾವು ಓಡಾಡುವ ನೆಲ, ಜಲ ಹಾಗೂ ಪರಿಸರವನ್ನು ನಾವು ಗಮನದಲ್ಲಿಟ್ಟುಕೊಳ್ಳುವುದು ಅತ್ಯಂತ ಅವಶ್ಯಕ ಎಂದರು.
ಕಲೆಯನ್ನು ಬೆಳಕಿಗೆ ತರುವವರು ಎಲ್ಲಾ ಇರಿಸುಮುರಿಸುಗಳನ್ನು ಸರಿಪಡಿಸಿಕೊಂಡು ನಗುಮುಖದಲ್ಲಿ ಮುಂದುವರೆಯುವುದು ಶ್ಲಾಘನೀಯ ಎಂದು ಹೇಳಿದರು.
ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಈಗಾಗಲೇ ಹಲವು ಸಿನಿಮಾಗಳನ್ನು ನಿರ್ಮಿಸಿದ್ದು ಅದರಲ್ಲಿ ಹಲವು ಸಿನಿಮಾಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ತಮ್ಮ ಚಿತ್ರಗಳ ಮೂಲಕ ಕೊಡಗಿನ ಆಚಾರ, ವಿಚಾರ, ಸಂಪ್ರದಾಯಗಳನ್ನು ಪ್ರಚಾರ ಪಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.
ಚಿತ್ರದ ನಿರ್ದೇಶಕರಾದ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ವರ್ಷಕ್ಕೊಂದು ಕೊಡವ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಚಿತ್ರತಂಡಕ್ಕೆ ಕೊಡವಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿಯೂ ಮತ್ತಷ್ಟು ಸಿನಿಮಾ ನಿರ್ಮಿಸುವುದಾಗಿ ತಿಳಿಸಿದರು.
ಕೊಡಗಿನ ವಿವಿಧೆಡೆ ಹತ್ತು ದಿನಗಳ ವರೆಗೆ ಚಿತ್ರೀಕರಣ ನಡೆಯಲಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಪೂರ್ಣ ದಿನಗಳವರೆಗೆ ಮನೆಯನ್ನು ನೀಡಿ ಸಹಕರಿಸಿದ ಬಿದ್ದಂಡ ಪೊನ್ನಪ್ಪ ಅವರಿಗೆ ಧನ್ಯವಾದ ಸಲ್ಲಿಸಿದರು.
ಹಿರಿಯ ಕಲಾವಿದ ವಾಂಚೀರ ವಿಠಲ್ ನಾಣಯ್ಯ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದರು.
ಕಾಫಿ ಬೆಳೆಗಾರ ಬಿದ್ದಂಡ ಪೊನ್ನಪ್ಪ ಕ್ಯಾಮರ ಆನ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಚೌರೀರ ಉದಯ ಹಾಗೂ ಪತ್ನಿ ಚೌರೀರ ರತಿರವರ ಗದ್ದೆಯಲ್ಲಿ ಎಡ್ಮ್ಯಾರ್-1 ಆಚರಣೆ ಮಾಡುವ ದೃಶ್ಯವನ್ನು ಚಿತ್ರಿಸಲಾಯಿತು.
ಉದ್ಯಮಿ ಹಾಗೂ ಸಮಾಜ ಸೇವಕ, ಕಾಫಿ ಬೆಳೆಗಾರ ಬಡುವಂಡ ಅರುಣ್ ಹಾಗೂ ಕನ್ನು ದಂಪತಿ ಕ್ಯಾಮರಕ್ಕೆ ಪೂಜೆ ಸಲ್ಲಿಸಿ, ಚಿತ್ರದ ಯಶಸ್ಸಿಗೆ ಶುಭಹಾರೈಸಿದರು. ಚಿತ್ರದ ನಾಯಕ ಸಂತೋಷ್ ಮೇದಪ್ಪ, ನಾಯಕಿ ಅಪ್ಪಡೇರಂಡ ತೇಜು ಪೊನ್ನಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ಕೊಟ್ಟುಕತ್ತೀರಾ ಯಶೋಧ ಪ್ರಕಾಶ್, ಈರಮಂಡ ವಿಜಯ್ ಉತ್ತಯ್ಯ, ಕೊಡವ ಕ್ಲಾನ್ ನ ಗುಮ್ಮಟ್ಟಿರ ಕಿಸು ಉತ್ತಪ್ಪ ಹಾಗೂ ಇತರರು ಹಾಜರಿದ್ದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಹಾಗೂ ನಟ ಬೊಳ್ಳಜಿರ ಬಿ.ಅಯ್ಯಪ್ಪ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಚಿತ್ರ ನಾಯಕನಾಗಿ ಚಡಿಯಂಡ ಸಂತೋಷ್ ಮೇದಪ್ಪ, ನಾಯಕಿಯಾಗಿ ಅಪ್ಪಡೇರಂಡ ತೇಜು ಪೊನ್ನಪ್ಪ, ಗೌರವ ಪೂರ್ವಕ ಅತಿಥಿ ನಟರಾಗಿ ಬಿ. ಜಿ.ಅನಂತಶಯನ, ಸಹ ನಟ ರಾಗಿ ಗುಮ್ಮಟ್ಟೀರ ಕಿಶು ಉತ್ತಪ್ಪ, ಬೊಳ್ಳಜಿರ ಬಿ.ಅಯ್ಯಪ್ಪ ಅಭಿನಯಿಸುತ್ತಿದ್ದಾರೆ.
ನಿರ್ದೇಶನ-ನಿರ್ಮಾಣ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ಸಹ ನಿರ್ಮಾಪಕಿಯಾಗಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಸಹ ನಿರ್ದೇಶಕಿ – ಸಂಭಾಷಣೆಕಾರ್ತಿಯಾಗಿ ಈರಮಂಡ ಹರಿಣಿ ವಿಜಯ್, ಚಿತ್ರ ಕಥೆ -ಗಾರ್ಗಿ ಕಾರೆಹಕ್ಲು, ಛಾಯಗ್ರಾಹಕರಾಗಿ ಪ್ರದೀಪ್ ಆರ್ಯನ್ ಹಾಗೂ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದು, ಯಧುನಂದನ್ ಸಂಗೀತ ನೀಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಈರಮಂಡ ವಿಜಯ್ ಉತ್ತಯ್ಯ, ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಥಮ ಹಂತದ 10ದಿನಗಳ ಚಿತ್ರೀಕರಣ ಕೊಡಗಿನ ವಿವಿಧ ಭಾಗಗಳಲ್ಲಿ ನಡೆಯಲಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.