
ಮಡಿಕೇರಿ ಏ.15 NEWS DESK : ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಶಾಂತಪ್ಪ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಅನುಮೋದನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಪತ್ರ ನೀಡಿದ್ದು, ಇಂದು ನಡೆದ ಜೂ಼಼ಮ್ ಸಭೆಯಲ್ಲಿ ಪಾಲ್ಗೊಂಡು ಚುನಾವಣೆಯ ಜವಾಬ್ದಾರಿಯ ಕುರಿತು ಚರ್ಚಿಸಿರುವುದಾಗಿ ಶಾಂತಪ್ಪ ತಿಳಿಸಿದ್ದಾರೆ. ಜಿಲ್ಲಾ ಪರಿಷತ್ ನ ಮಾಜಿ ಸದಸ್ಯರಾಗಿರುವ ಕೆ.ಬಿ.ಶಾಂತಪ್ಪ ಅವರು ರಾಜ್ಯ ಕುರುಬರ ಸಂಘದ ಕಾರ್ಯಾಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.







