Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿ ಸಂವಿಧಾನ ಬದಲಾಯಿಸಲ್ಲ, ಪ್ರಧಾನಿಯೇ ಹೇಳಿದ್ದಾರೆ : ಕೊಡಗು ಬಿಜೆಪಿ ಸ್ಪಷ್ಟನೆ : ಮೋದಿಯವರನ್ನ ಕಂಡ್ರೆ ಕಾಂಗ್ರೆಸ್ಸಿಗರಿಗೆ ಭಯ : ಸುಬ್ರಮಣ್ಯ ಉಪಾಧ್ಯಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿ ಸಂವಿಧಾನ ಬದಲಾಯಿಸಲ್ಲ, ಪ್ರಧಾನಿಯೇ ಹೇಳಿದ್ದಾರೆ : ಕೊಡಗು ಬಿಜೆಪಿ ಸ್ಪಷ್ಟನೆ : ಮೋದಿಯವರನ್ನ ಕಂಡ್ರೆ ಕಾಂಗ್ರೆಸ್ಸಿಗರಿಗೆ ಭಯ : ಸುಬ್ರಮಣ್ಯ ಉಪಾಧ್ಯಾಯ*

ಏಪ್ರಿಲ್ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.15 NEWS DESK : ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸಲ್ಲ, ಈ ಕುರಿತು ಪ್ರಧಾನಿ ನರೇಂದ್ರಮೋದಿ ಅವರೇ ಭರವಸೆ ನೀಡಿದ್ದಾರೆ. ಮತ ಗಳಿಕೆಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಸ್ಪಷ್ಟಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ಬಿಜೆಪಿ ಗೆಲುವು ಸಾಧಿಸಿದರೆ ಸಂವಿಧಾನ ಬದಲಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಮಂತ್ರಿಗಳೇ ಸಂವಿಧಾನವನ್ನು ಬದಲಾಯಿಸುವ ಪ್ರಶ್ನೇಯೇ ಇಲ್ಲ ಎಂದು ಬೃಹತ್ ಸಮಾವೇಶದಲ್ಲೇ ಹೇಳಿದ್ದಾರೆ. ಡಾ.ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷವೇ ಅಗೌರವದಿಂದ ನೋಡಿಕೊಂಡಿತ್ತು, ಚುನಾವಣೆಗಳಲ್ಲಿ ಸೋಲಿಸಿತ್ತು ಎಂದು ಟೀಕಿಸಿದರು.
ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎನ್ನುವುದಕ್ಕೆ ಭಾನುವಾರ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆದ ಬೃಹತ್ ಸಮಾವೇಶವೇ ಸಾಕ್ಷಿಯಾಗಿದೆ. ಈ ಬೆಳವಣಿಗೆಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಬಿಜೆಪಿ ಮನೆ ಮನೆ ಪ್ರಚಾರ ಆರಂಭಿಸಿದ್ದು, ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿದೆ. ಏ.18 ರವರೆಗೆ ಮನೆ ಭೇಟಿ ಪ್ರಚಾರ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ್ ಅವರು ಇಂದು ಒಕ್ಕಲಿಗ ಗೌಡ ಎಂದು ಹೇಳಿಕೊಳ್ಳುತ್ತಿದ್ದಾರೆ. ಪ್ರತಾಪಸಿಂಹ ಅವರ ವಿರುದ್ಧ ಟೀಕೆ ಮಾಡುವಾಗ ಅವರು ಕೂಡ ಒಕ್ಕಲಿಗ ಗೌಡ ಎನ್ನುವುದು ತಿಳಿದಿರಲಿಲ್ಲವೇ ಎಂದು ಪ್ರಶ್ನಿಸಿದ ಕಿಶೋರ್ ಕುಮಾರ್, ಬಿಜೆಪಿಗೆ ಯಾವುದೇ ಜಾತಿ ಇಲ್ಲವೆಂದು ಸ್ಪಷ್ಟಪಡಿಸಿದರು.
ಮತ್ತೊಬ್ಬ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಮಾತನಾಡಿ ಸಂವಿಧಾನವನ್ನು 62 ಬಾರಿ ತಿದ್ದುಪಡಿ ಮಾಡಿದವರು ಕಾಂಗ್ರೆಸ್ ನವರು, ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿಯ ಮೂಲಕ ಜನರ ಸ್ವತಂತ್ರö್ಯವನ್ನು ಕಸಿದುಕೊಂಡವರು ಇಂದಿರಾಗಾಂಧಿ ಎಂದು ಟೀಕಿಸಿದರು.
ಸಂವಿಧಾನಕ್ಕೆ ಕಾಂಗ್ರೆಸ್ ನಿಂದ ಕುತ್ತು ಎದುರಾಗಲಿದೆಯೇ ಹೊರತು ಬಿಜೆಪಿಯಿಂದ ಯಾವುದೇ ಅಪಾಯವಿಲ್ಲ. ಸಂವಿಧಾನದ ವಿಚಾರದಲ್ಲಿ ಸುಳ್ಳು ಹೇಳಿ ಮತ ಗಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
150 ಕೋಟಿ ಜನರ ನಾಯಕ ಮೋದಿಯವರನ್ನು 5 ಕೋಟಿ ಜನರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಹೇಳನ ಮಾಡುವುದನ್ನು ಖಂಡಿಸುವುದಾಗಿ ತಿಳಿಸಿದ ಅವರು ಈ ಬಾರಿ 400 ಕ್ಕೂ ಅಧಿಕ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದರು.
ಇಡೀ ವಿಶ್ವವೇ ಮೋದಿಯವರನ್ನು ಒಪ್ಪಿಕೊಂಡಿದೆ ಮತ್ತು ಮೆಚ್ಚಿಕೊಂಡಿದೆ. ಭಾರತ ದೇಶಕ್ಕೆ ಅವರಿಂದ ದೊಡ್ಡ ಕೀರ್ತಿ ಬಂದಿದೆ. ಆದರೆ ಕಾಂಗ್ರೆಸ್ಸಿಗರಿಗೆ ಮಾತ್ರ ಅವರ ಶಕ್ತಿ ಅರ್ಥವಾಗುತ್ತಿಲ್ಲ. ಕಾಂಗ್ರೆಸ್ ಗೆ ಮೋದಿಯವರನ್ನು ಕಂಡರೆ ಭಯವಿದೆ ಎಂದು ವ್ಯಂಗ್ಯವಾಡಿದರು.
ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿಟ್ಡ ಅನುದಾನವನ್ನು ಬೇರೆಡೆ ಬಳಕೆ ಮಾಡುತ್ತಿರುವ ಕಾಂಗ್ರೆಸ್ಸಿಗರಿಗೆ ಪರಿಶಿಷ್ಟರ ಬಗ್ಗೆ ಮಾತನಾಡುವ ಮತ್ತು ಕಾಳಜಿ ತೋರುವ ನೈತಿಕ ಹಕ್ಕಿಲ್ಲ ಎಂದು ಸುಬ್ರಮಣ್ಯ ಉಪಾಧ್ಯಾಯ ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರು ಭಾಗದ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷಣ್ ಯಾರೆಂದೇ ಯಾರಿಗೂ ತಿಳಿದಿಲ್ಲ, ಕೊಡಗಿನಲ್ಲಿ ಮಾತ್ರ ಅವರು ಓಡಾಡುತ್ತಿದ್ದಾರೆ. ಅತ್ಯಂತ ಕಡಿಮೆ ಮತಗಳನ್ನು ಗಳಿಸುವ ಮೂಲಕ ಲಕ್ಷö್ಮಣ್ ಹೀನಾಯ ಸೋಲು ಅನುಭವಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಮತಗಳಿಕೆಗಾಗಿ ಆಮಿಷಗಳನ್ನು ಒಡ್ಡುತ್ತಿದೆ ಎಂದು ಆರೋಪಿಸಿದ ಅವರು, ಇದನ್ನು ತಡೆಯಲು ಬಿಜೆಪಿ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಕ್ತಾರ ಬಿ.ಕೆ.ಅರುಣ್ ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ್ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಕರ್ನಾಟಕದಲ್ಲಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಬೇಡಿಕೆಯ ಕೇವಲ ಶೇ. 20ರಷ್ಟು…

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.