
ಮಡಿಕೇರಿ ಏ.16 NEWS DESK : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್10 ಕುಂಡಾಮೇಸ್ತ್ರಿ ಮತ್ತು ಎಫ್11 ಗಾಳಿಬೀಡು ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಏ.17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕೂಟುಹೊಳೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.







