
ಮಡಿಕೇರಿ ಏ.16 NEWS DESK : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2024-25ನೇ ಸಾಲಿಗೆ ಪ್ರಥಮ ಬಿ.ಎ ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಕಾಲೇಜಿನ ಕಚೇರಿಯ ವೇಳೆಯಲ್ಲಿ ಅರ್ಜಿಯನ್ನು ಪಡೆಯಬಹುದು.
ಕಾಲೇಜಿನಲ್ಲಿ ಎಲ್ಲಾ ವಿಷಯಗಳಿಗೂ ಪೂರ್ಣಕಾಲಿಕ ಪ್ರಾಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರು ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಲು ಲಭ್ಯವಿರುತ್ತಾರೆ. ಕಾಲೇಜಿನಲ್ಲಿ ಶುಲ್ಕವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.








