
ಸೋಮವಾರಪೇಟೆ ಏ.16 NEWS DESK : ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ-ಕಲ್ಲಾರೆ ಎಂಬಲ್ಲಿ ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು ನಷ್ಟ ಸಂಭವಿಸಿದೆ.
ಗ್ರಾಮದ ಮಲ್ಲಿಕಾರ್ಜುನ ಹಾಗೂ ಚಂದ್ರು ಎಂಬುವವರ ಕಾಫಿ ತೋಟಕ್ಕೆ ಬೆಂಕಿ ತಗುಲಿದ್ದು. ಒಣಗಿದ ಮರಗಳಿಗೆ ಬೆಂಕಿ ಹತ್ತಿಕೊಂಡಿದೆ. ಕಾಫಿ ತೋಟದ ಸಮೀಪ ಇದ್ದ ಮನೆಗಳಿಗೂ ಬೆಂಕಿಯ ಕಿಡಿಗಳು ತಾಗಿವೆ. ತಕ್ಷಣ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಕಾರ್ಯಚರಣೆಯಲ್ಲಿ ಸಿಬ್ಬಂದಿಗಳಾದ ಪಿ.ಎಸ್.ಸುರೇಶ್, ಪಿ.ಈಶ್ವರ್, ವಿನಯ್, ನಂದೀಶ್, ಪ್ರಶಾಂತ್ ಭಾಗವಹಿಸಿದ್ದರು.








