Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಚ್.ಡಿ.ಕುಮಾರಸ್ವಾಮಿ ಅವರು ಮಹಿಳೆರನ್ನು ಅವಮಾನಿಸಿಲ್ಲ : ಕಾಂಗ್ರೆಸ್ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ : ಮಹಿಳಾ ಜೆಡಿಎಸ್ ತೀವ್ರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಚ್.ಡಿ.ಕುಮಾರಸ್ವಾಮಿ ಅವರು ಮಹಿಳೆರನ್ನು ಅವಮಾನಿಸಿಲ್ಲ : ಕಾಂಗ್ರೆಸ್ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ : ಮಹಿಳಾ ಜೆಡಿಎಸ್ ತೀವ್ರ ಅಸಮಾಧಾನ*

ಏಪ್ರಿಲ್ 16, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.16 NEWS DESK : ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಹಳ್ಳಿಯ ಮುಗ್ಧ ಮಹಿಳೆಯರನ್ನು ದಿಕ್ಕು ತಪ್ಪಿಸಿ ಮತ ಪಡೆದು ಅಧಿಕಾರಕ್ಕೆ ಬಂದಿದೆ. ಮಹಿಳೆಯರು ಯಾವುದೇ ಆಮಿಷಗಳಿಗೆ ಒಳಗಾಗದೆ ಎಚ್ಚರಿಕೆಯಿಂದ ಇರಿ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆಯೇ ಹೊರತು ಮಹಿಳೆಯರನ್ನು ಅವಮಾನಿಸಿಲ್ಲವೆಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾ ದಳದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೂಟೆರಾ ಪುಷ್ಪಾವತಿ ರಮೇಶ್ ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ನೀಡಿರುವ ಹೇಳಿಕೆ ಖಂಡನೀಯ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುವಂತೆ ಮಹಿಳಾ ಸಂಘಟನೆಗಳಿಗೆ ಕರೆ ನೀಡಿರುವುದು ದುರಾದೃಷ್ಟಕರವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತೆನೆಹೊತ್ತ ರೈತ ಮಹಿಳೆಯೇ ಜೆಡಿಎಸ್ ಪಕ್ಷದ ಲಾಂಛನ, ಗ್ರಾಮೀಣ ರೈತ ಮಹಿಳೆಯೇ ಜೆಡಿಎಸ್ ಪ್ರತೀಕ. ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಕೆಟ್ಟ ಸರ್ಕಾರವನ್ನು ಆಯ್ಕೆ ಮಾಡಿ ದಿಕ್ಕು ತಪ್ಪಿದ್ದಾರೆ ಎನ್ನುವ ಮಾರ್ಮಿಕ ನುಡಿಗಳನ್ನಾಡಿದ್ದಾರೆಯೇ ಹೊರತು ಮಹಿಳೆಯರ ಸ್ವಾಭಿಮಾನಕ್ಕೆ ದಕ್ಕೆ ತರುವಂತೆ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.
ಚುನಾವಣೆ ಸಂದರ್ಭ ಮುಗ್ಧ ಗ್ರಾಮೀಣ ಮಹಿಳಾ ಮತದಾರರ ಮನಸ್ಸಿನಲ್ಲಿ ದ್ವೇಷ ಹುಟ್ಟುವಂತೆ ಮಾಡಿ ಅದರ ದುರ್ಲಾಭ ಪಡೆದು ಮತ ಸೆಳೆಯುವ ಹುನ್ನಾರದಿಂದ ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಇದು ಮತ ಪರಿವರ್ತನೆಯ ವಿಫಲ ಪ್ರಯತ್ನವಾಗಿದೆ, ನಾಡಿನ ಮತದಾರರು ಪ್ರಬುದ್ಧರಾಗಿದ್ದಾರೆ. ಯಾವುದೇ ಕಪೋಲಕಲ್ಪಿತ ಹೇಳಿಕೆಗಳಿಗೆ ಬೆಲೆ ಕೊಡದೆ, ಮಹಿಳೆಯರು ತಮ್ಮ ವಿವೇಚನಾ ಶಕ್ತಿಯಿಂದ ಮತ ಚಲಾಯಿಸುತ್ತಾರೆ. ಕಾಂಗ್ರೆಸ್ಸಿಗರ ಇಂತಹ ಕ್ಷುಲ್ಲಕ ತಂತ್ರಗಾರಿಕೆ ಮತ್ತು ರಾಜಕಾರಣಕ್ಕೆ ಕವಡೆ ಕಾಸಿನ ಬೆಲೆಯೂ ಸಿಗುವುದಿಲ್ಲ. ದೇಶದ ಭದ್ರತೆ, ಅಸ್ಮಿತೆ, ಸುರಕ್ಷತೆ, ಸಮಗ್ರತೆ ಹಾಗೂ ಮುಂದಿನ ಭವಿಷ್ಯಕ್ಕಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವುದು ನಾಡಿನ ಪ್ರತಿಯೊಬ್ಬ ಪ್ರಜೆಗೂ ತಿಳಿದಿದೆ. ಆದ್ದರಿಂದ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಅಪಾರ್ಥಪಡಿಸಿ ಜನರಲ್ಲಿ ವಿಷಬೀಜ ಬಿತ್ತುವ ಮತ್ತು ಒಡೆದು ಆಳುವ ಕೆಟ್ಟ ಸಂಪ್ರದಾಯವನ್ನು ಕಾಂಗ್ರೆಸ್ ನಾಯಕರು ಬಿಡುವುದು ಒಳಿತು. ಇಲ್ಲವಾದಲ್ಲಿ ಮತದಾರರು ತಕ್ಕ ಪಾಠ ಕಲಿಸುವ ಸಮಯ ದೂರವಿಲ್ಲ ಎಂದು ಪುಷ್ಪಾವತಿ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಆಡಳಿತವಾಧಿಯಲ್ಲಿ ರಾಜ್ಯ ಮತ್ತು ಕೊಡಗಿನ ಜನತೆಗೆ ನೀಡಿದ ಕೊಡುಗೆಗಳನ್ನು ಇಂದಿಗೂ ಪ್ರತಿಯೊಬ್ಬ ಮತದಾರರು ನೆನಪಿಸಿಕೊಳ್ಳುತ್ತಾರೆ. ತಮ್ಮ ಮೊದಲ ಆಡಳಿತಾವಧಿಯಲ್ಲಿ ಚರಿತ್ರಾರ್ಹ ಗ್ರಾಮ ವಾಸ್ತವ್ಯವನ್ನು ಮಾಡಿ, ಗ್ರಾಮೀಣ ಜನರ ನೋವನ್ನು ಅರಿತು ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಿರುವುದನ್ನು ಯಾವ ಮಹಿಳೆಯೂ ಮರೆಯಲು ಸಾಧ್ಯವಿಲ್ಲ.
ರೈತರ ಸಾಲಮನ್ನಾ, ನೀರಾವರಿ ಯೋಜನೆ ಜಾರಿ, ಗ್ರಾಮೀಣ ಮಹಿಳೆಯರು ಹಾಗೂ ರೈತ ಮಹಿಳೆಯರ ಕುಟುಂಬಗಳ ಕಣ್ಣೀರು ಒರೆಸಿದ ಹೆಗ್ಗಳಿಕೆ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಲಾಟರಿ ಮತ್ತು ಸಾರಾಯಿ ನಿಷೇಧ ಕಾಯ್ದೆ ಜಾರಿ ಮಾಡಿ ಬಡ ಹೆಣ್ಣು ಮಕ್ಕಳ ನೆಮ್ಮದಿಯ ಬದುಕಿಗೆ ನಾಂದಿ ಹಾಡಿದ್ದಾರೆ. ಹೆಣ್ಣು ಮಕ್ಕಳನ್ನು ತಾಯಿ, ದೇವತೆ ಎಂದು ವರ್ಣಿಸಿ ಗೌರವ ತೋರುತ್ತಾರೆಯೇ ಹೊರತು ಕಾಂಗ್ರೆಸ್ಸಿಗರು ಟೀಕಿಸುವಂತೆ ಕುಮಾರಸ್ವಾಮಿ ಅವರು ಇಲ್ಲ ಎಂದು ತಿಳಿಸಿದ್ದಾರೆ.
ಮೊದಲ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ರೈತಪರ ಯೋಜನೆಗಳು, ಶಿಕ್ಷಣ ನೀತಿಯಲ್ಲಿ ಮಾಡಲಾದ ಮಾರ್ಪಾಡುಗಳು, ಕರ್ನಾಟಕ ಮಾದರಿ ಶಾಲೆಗಳಲ್ಲಿ ಪದವಿ ಪೂರ್ವ ಕಾಲೇಜುಗಳ ಮಂಜೂರಾತಿ, ಸಾವಿರಾರು ಪ್ರಾಧ್ಯಾಪಕರನ್ನು ಖಾಯಂಗೊಳಿಸಿರುವುದು ಜನಪರ ಮತ್ತು ಮಹಿಳಾ ಪರ ಕಾರ್ಯಗಳಲ್ಲವೇ ಎಂದು ಪುಷ್ಪಾವತಿ ಪ್ರಶ್ನಿಸಿದ್ದಾರೆ.
ವೇತನ ಆಯೋಗವನ್ನು ಸ್ಥಾಪಿಸಿ ವೇತನ ಉನ್ನತೀಕರಿಸಿದ ಪರಿಣಾಮ ನೆಮ್ಮದಿಯ ಬದುಕನ್ನು ಕಂಡುಕೊAಡಿರುವ ಲಕ್ಷಾಂತರ ಮಹಿಳಾ ಉದ್ಯೋಗಿಗಳು ಇಂದಿಗೂ ಕುಮಾರಸ್ವಾಮಿ ಅವರನ್ನು ಸ್ಮರಿಸುತ್ತಾರೆ.
ಕೊಡಗಿಗೆ ಸಂಬಂಧಿಸಿದಂತೆ 2018-19ನೇ ಸಾಲಿನಲ್ಲಿ ಅವರು ಮಾಡಿದ ಜನಪರ ಕಾರ್ಯಗಳನ್ನು ಜನತೆ ಎಂದಿಗೂ ಮರೆಯುವಂತಿಲ್ಲ. ಅತಿವೃಷ್ಟಿ ಮತ್ತು ಭೂಕುಸಿತದಿಂದ ಪ್ರಾಣ ಹಾನಿ ಹಾಗೂ ಮನೆಗಳಿಗೆ ಹಾನಿಯಾದಾಗ ಜಿಲ್ಲೆಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿ ಜನರ ಕೃತಜ್ಞತೆಗೆ ಪಾತ್ರರಾಗಿದ್ದಾರೆ. ನಿರಾಶ್ರಿತರಿಗೆ ತಾತ್ಕಾಲಿಕ ವಸತಿ ಸೌಕರ್ಯ, ರೂ.10 ಸಾವಿರ ಮನೆ ಬಾಡಿಗೆ ನೀಡಿದ್ದಾರೆ. ಕಾಫಿ ತೋಟ ಹಾನಿಯಾದವರಿಗೆ ಸೂಕ್ತ ಪರಿಹಾರ ಕಲ್ಪಿಸಿದ್ದಾರೆ. ಮಳೆಹಾನಿ ಸಂತ್ರಸ್ತರಿಗೆ ತಲಾ 10 ಲಕ್ಷ ರೂ. ವೆಚ್ಚದಲ್ಲಿ 800 ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ನೀರು, ಬೀದಿದೀಪ, ರಸ್ತೆ, ಚರಂಡಿ ಇತ್ಯಾದಿ ಮೂಲ ಸೌಕರ್ಯ ಒದಗಿಸಿ ಮಾದರಿಯಾಗಿದ್ದಾರೆ. ಯಾವ ಸರ್ಕಾರವು ಇಂತಹ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿಲ್ಲ. ಈಗ ಆ ನೊಂದ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಇದು ಮಹಿಳೆಯರ ಕಷ್ಟಕ್ಕೆ, ನೋವಿಗೆ ಧ್ವನಿಯಾದ ಬಗೆ ಅಲ್ಲವೇ ಎಂದು ಪುಷ್ಪಾವತಿ ಪ್ರಶ್ನಿಸಿದ್ದಾರೆ.
ಇಂತಹ ಮಾನವೀಯ ಮೌಲ್ಯಗಳನ್ನು ಹೊಂದಿರುವ ಭಾವನಾತ್ಮಕ ಜೀವಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇವಲ ಅವಹೇಳನ ಮಾಡುವುದಕ್ಕಾಗಿ ಮತ್ತು ಅವರ ನಿಶ್ಚಿತ ಗೆಲುವನ್ನು ಸಹಿಸಲು ಸಾಧ್ಯವಿಲ್ಲದೆ ಕಾಂಗ್ರೆಸ್ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಮತ್ತು ಪ್ರತಿಭಟನೆಗೆ ಕರೆ ನೀಡಿ ಕೀಳುಮಟ್ಟದ ರಾಜಕಾರಣ ಪ್ರದರ್ಶಿಸುತ್ತಿದ್ದಾರೆ.
ಆದರೆ ರಾಜ್ಯದ ಪ್ರಬುದ್ಧ ಮತದಾರರು ಇಂತಹ ಕೆಟ್ಟ ರಾಜಕರಣಕ್ಕೆ ಖಂಡಿತಾ ತಕ್ಕ ಪಾಠ ಕಲಿಸಲಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕರು ಮೊದಲು ಅರ್ಥಮಾಡಿಕೊಂಡು ಪ್ರತಿಭಟನೆಯಿಂದ ಹಿಂದೆ ಸರಿಯಲಿ ಎಂದು ಪುಷ್ಪಾವತಿ ರಮೇಶ್ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.