
ಮಡಿಕೇರಿ ಏ.16 NEWS DESK : ವಿಶ್ವ ಪರಿಸರ ದಿನಾಚರಣೆ-2024ರ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ(ಕನ್ನಡ ಮತ್ತು ಇಂಗ್ಲೀಷ್-1000 ಪದಗಳಿಗೆ ಮೀರದಂತೆ) ಮತ್ತು ಪದವಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯು ‘ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು’ ಎಂಬ ಶೀರ್ಷಿಕೆಯಡಿಯಲ್ಲಿ ನಡೆಯಲಿದೆ.
ಪ್ರಬಂಧಗಳನ್ನು ಕಳುಹಿಸಲು ಮೇ, 27 ಕಡೆ ದಿನವಾಗಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು (ಇಬ್ಬರು ವಿದ್ಯಾರ್ಥಿಗಳ ತಂಡ) ಅಕಾಡೆಮಿಯ ಇ-ಮೇಲ್ ksta.gok@gmail.com ನಲ್ಲಿ ಮೇ, 27 ರೊಳಗೆ ನೋಂದಾಯಿಸಿಕೊಳ್ಳಬಹುದು. ರಸಪ್ರಶ್ನೆ ಸ್ಪರ್ಧೆಯನ್ನು ಜೂನ್, 6 ರಂದು ಅಕಾಡೆಮಿಯ ಸಭಾಂಗಣದಲ್ಲಿ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ https://kstacademy.in ವೀಕ್ಷಿಸಬಹುದು. ಅಥವಾ ಅಕಾಡೆಮಿಯ ಹಿರಿಯ ವೈಜ್ಞಾನಿಕಾಧಿಕಾರಿಯಾದ ಡಾ.ಆನಂದ್ ಆರ್. ಮೊ. 9880405181 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.








