Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
  • *ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*
  • *ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*
  • *ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*
  • *ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ*
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ಸಮಾಜವನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗಿದೆ : ಮಾಜಿ ಶಾಸಕ ಕೆ.ಜಿ.ಬೋಪಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ಸಮಾಜವನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗಿದೆ : ಮಾಜಿ ಶಾಸಕ ಕೆ.ಜಿ.ಬೋಪಯ್ಯ*

ಏಪ್ರಿಲ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.28 ರವರೆಗೆ ನಡೆಯಲಿರುವ 25ನೇ ವರ್ಷದ ಗೌಡ ಸಮೂಹದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.
ಹತ್ತು ಪ್ರಾಂಚೈಸಿ ತಂಡಗಳ ನಡುವೆ ಇಂದಿನಿಂದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಎಳೆಯ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವ ಮತ್ತು ಸಮಾಜವನ್ನು ಒಗ್ಗೂಡಿಸಿ ಸೌಹಾರ್ದತೆಯನ್ನು ಮೂಡಿಸುವ ಶಕ್ತಿ ಕ್ರೀಡಾಕೂಟಗಳಿಗೆ ಇದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಗೌಡ ಯುವ ವೇದಿಕೆ ಕ್ರೀಡಾಕೂಟದ ಆಯೋಜನೆಯೊಂದಿಗೆ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯವೆಂದರು.
ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ಈ ಹಿಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿತ್ತು. ಪ್ರಸ್ತುತ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದರು.
ಕರ್ನಾಟಕ ಅರೆಭಾಷಾ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಮಾತನಾಡಿ, ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕಾಗಿ ಮತ್ತು ಸಮಾಜದ ಒಗ್ಗೂಡುವಿಕೆಗಾಗಿ ನಡೆಸುವ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಕೊಡಗು ಗೌಡ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ಅಂಬೆಕಲ್ ನವೀನ್ ಯುವ ಕ್ರೀಡಾ ಪಟುಗಳ ಉತ್ತೇಜನಕ್ಕಾಗಿ ಪಂದ್ಯಾವಳಿ ಆಯೋಜಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ಅಮೆ ದಮಯಂತಿ ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸಂರಕ್ಷಣೆಗೆ ಪೂರಕವಾದ ಕ್ರೀಡಾ ಚಟುವಟಿಕೆಗಳ ಅರಿವನ್ನು ಪ್ರತಿಯೊಬ್ಬರು ಹೊಂದಿಕೊಳ್ಳುವ ಅಗತ್ಯವಿದೆ. ಆರೋಗ್ಯಯುತ ಬದುಕು ಮತ್ತು ಸದೃಢವಾದ ಸಮಾಜ ನಿರ್ಮಾಣಕ್ಕೆ ಪೂರಕವಾಗಿರುವ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು ಸೋಲು ಗೆಲುವನ್ನು ಮೀರಿ ಸಂಭ್ರಮವನ್ನು ಆಚರಿಸಬೇಕು ಎಂದರು.
ಗೌಡ ಯುವ ವೇದಿಕೆಯ ಕಾನೂನು ಸಲಹೆಗಾರ ಕೊಟ್ಟಕೇರಿಯನ ದಯಾನಂದ ಪಂದ್ಯಾವಳಿಗೆ ಶುಭ ಕೋರಿದರು.
ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ವತಿಯಿಂದ 1997ರಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಸಲಾಗುತ್ತಿದೆ, ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಪಂದ್ಯಾವಳಿ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ 23 ವರ್ಷಗಳ ಕಾಲ ಟೆನ್ನಿಸ್ ಬಾಲ್ ಪಂದ್ಯಾವಳಿ ನಡೆಯುತಿತ್ತು. ಯುವ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ಒದಗಿಸುವ ಚಿಂತನೆಯಡಿ, ಕಳೆದ ಸಾಲಿನಿಂದ ಲೆದರ್ ಬಾಲ್ ಪಂದ್ಯಾವಳಿ ನಡೆಸಲಾಗುತ್ತಿದೆ ಎಂದರು.
ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ರಣಜಿ ಕ್ರಿಕಟ್ ಆಟಗಾರ ಸುಳ್ಯಕೋಡಿ ರಿಷಿ ಬೋಪಣ್ಣ, ವೇದಿಕೆಯ ಸ್ಥಾಪಕಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ, ಗೌರವ ಸಲಹೆಗಾರ ಕಟ್ಟೆಮನೆ ಸೋನಾಜಿತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
::: ಟ್ರೋಫಿ ಅನಾವರಣ :::
ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಇದೇ ಸಂದರ್ಭ ಗಣ್ಯರು ಅನಾವರಣ ಗೊಳಿಸಿದರು. ಮಡಿಕೇರಿಯ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಬ್ಯಾಟ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.23 NEWS DESK : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ತೆರೆ ಮಹೋತ್ಸವವು…

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026

*ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*

ಮಾರ್ಚ್ 23, 2026

*ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*

ಮಾರ್ಚ್ 23, 2026

*ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ*

ಮಾರ್ಚ್ 23, 2026

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.