
ಮಡಿಕೇರಿ ಏ.17 NEWS DESK : 2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ಹಾಗೂ ಪುರಸಭೆಯ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು.
ಪುರಸಭೆಯ ಸದಸ್ಯ ರಾಫಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಚುನಾವಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಪುರಸಭೆಯಿಂದ ನಗರದ ಮುಖ್ಯ ಬೀದಿಗಳಲ್ಲಿ ಘೋಷಣೆಳೊಂದಿಗೆ ಜಾಥಾ ನಡೆಸಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಮಾರ್ಗದರ್ಶನದೊಂದಿಗೆ, ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿ ಹೆಚ್.ಎಸ್.ವೇಣುಗೋಪಾಲ್, ಚುನಾವಣಾ ಸಾಕ್ಷರತಾ ಸಮಿತಿಯ ಸಂಚಾಲಕ ಎಂ.ಬಿ.ದಿವ್ಯ ಜಾಥಾದ ಸಂಪೂರ್ಣ ಉಸ್ತುವಾರಿಯನ್ನು ವಹಿಸಿ ಯಶಸ್ವಿಗೊಳಿಸಿದರು. ಜಾಥಾದಲ್ಲಿ ಪುರಸಭೆಯ ಸದಸ್ಯರು ಮತ್ತು ಸಿಬ್ಬಂದಿಗಳು ಹಾಜರಿದ್ದರು.








