
ಮಡಿಕೇರಿ ಏ.17 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಭಾಗಮಂಡಲ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಏ.18 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ತಾಳತ್ತಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.







